ದ.ಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿ: ಮೂಡಬಿದಿರೆಯ ವ್ಯಕ್ತಿ ಸಾವು
Team Udayavani, Jul 7, 2020, 4:46 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯ ಮೂಡಬಿದಿರೆಯ 50 ವರ್ಷ ಪ್ರಾಯದ ವ್ಯಕ್ತಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ಜಿಲ್ಲೆಯ ಸೋಂಕಿತರ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಮೂಡಬಿದಿರೆಯ ವ್ಯಕ್ತಿ ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರು ಮೃತಪಟ್ಟಿದ್ದು, ಗಂಟಲು ದ್ರವ ಪರೀಕ್ಷೆ ವೇಳೆ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
ನಿಯಮದಂತೆ ಅಂತ್ಯಸಂಸ್ಕಾರ: ಮೃತಪಟ್ಟ ವ್ಯಕ್ತಿಗೆ ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ಸರಕಾರಿ ನಿಯಮದಂತೆ ಅವರ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ತಹಶೀಲ್ದಾರ ಅನಿತಾ ಲಕ್ಷ್ಮೀ ಹೇಳಿದ್ದಾರೆ.
ಆತನ ಮೂಡಬಿದಿರೆ ಕೋಟೆಬಾಗಿಲಿನ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುವುದು. ಅಲ್ಲದೆ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.