ಕೋವಿಡ್ ಗೆ ಮತ್ತೊಂದು ಬಲಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ವ್ಯಕ್ತಿ ಸಾವು
Team Udayavani, May 25, 2020, 12:15 PM IST
ಮಂಗಳೂರು: ಕೋವಿಡ್-19 ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಮತ್ತೊಂದು ಬಲಿ ಪಡೆದಿದೆ. ಜಿಲ್ಲೆಯ ಬೆಳ್ತಂಗಡಿ ಮೂಲದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಸಾವಿಗೆ ಕೋವಿಡ್ 19 ಸೋಂಕು ಕಾರಣ ಎನ್ನಲಾಗಿದೆ.
ಹೃದಯ ಕಾಯಿಲೆ ಸಂಬಂಧಿಸಿದಂತೆ ಚಿಕಿತ್ಸೆಗೆಂದು 45 ವರ್ಷದ ಈ ವ್ಯಕ್ತಿ ಆಸ್ಪತ್ರೆಗೆ ಬಂದಿದ್ದು, ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ ನಂತರ ಸಾವನ್ನಪ್ಪಿದ್ದರು. ನಂತರ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಆತನಿಗೆ ಸೋಂಕು ಇರುವ ಬಗ್ಗೆ ದೃಢವಾಗಿದೆ.
ಈತ ಬೆಳ್ತಂಗಡಿ ತಾಲೂಕಿನ ವೇಣೂರಿನ ವ್ಯಕ್ತಿಯಾಗಿದ್ದು, ವೇಣೂರಿನಲ್ಲಿ ಸಿಮೆಂಟ್ ಅಂಗಡಿಯ ಗೂಡ್ಸ್ ರಿಕ್ಷಾ ಚಾಲಕನಾಗಿದ್ದ ಎನ್ನಲಾಗಿದೆ. ಈತ ವೇಣೂರಿನ ಪೇಟೆಯ ತುಂಬೆಲ್ಲಾ ಓಡಾಡಿದ್ದ ಎನ್ನಲಾಗಿದ್ದು, ಇದು ಜನತೆಯ ಆತಂಕಕ್ಕೆ ಕಾರಣವಾಗಿದೆ.
ಈ ಪ್ರಕರಣವನ್ನು ಜಿಲ್ಲಾಡಳಿತವು SARI ಕೇಸ್ ಆಂತ ಪರಿಗಣಿಸಿದೆ. ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನ ಕಾರಣದಿಂದ ಸಾವನ್ನಪ್ಪಿದವರ ಸಂಖ್ಯೆ ಇದರಿಂದ ಆರಕ್ಕೇರಿದೆ.
ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಯ ಬುಲೆಟಿನ್ ಬಂದ ನಂತರ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.