Assaigoli: ಲೋಕಾಯುಕ್ತ ಬಲೆಗೆ ಬಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್
Team Udayavani, Jul 10, 2024, 5:39 PM IST
ಉಳ್ಳಾಲ: ಡ್ಯೂಟಿ ಹಾಕಲು ಕಿರಿಯ ಪೊಲೀಸರಿಂದ ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ.
ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್ ಕಿರಿಯ ಪೊಲೀಸರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಟ್ರ್ಯಾಪ್ ಆಗಿದ್ದಾರೆ. ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಲಂಚಕ್ಕೆ ಡಿಮಾಂಡ್ ಮಾಡಿದ್ದ ಆರೀಸ್, ಕೆ.ಎಸ್.ಆರ್.ಪಿ. ಸಿಬ್ಬಂದಿಗೆ ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಪ್ರತಿ ತಿಂಗಳು 6 ಸಾವಿರ ರೂ. ಲಂಚ ನೀಡಲು ಡಿಮ್ಯಾಂಡ್ ಮಾಡಿದ್ದರು.
ಅದರಂತೆ ಇಂದು ಆರೀಸ್ 18 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್.ಪಿ. ನಟರಾಜ್ , ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.