ಮಂಗಳೂರು: ಪೊಲೀಸರ ಮೇಲೆ ದಾಳಿ ನಡೆಸಿ ಬಂದೂಕು ಮುರಿದ ನಾಲ್ವರು ಯುವಕರು
Team Udayavani, Dec 19, 2020, 12:35 PM IST
ಮಂಗಳೂರು: ಬೈಕ್ ನಲ್ಲಿ ಆಗಮಿಸಿದ ನಾಲ್ವರು ಯುವಕರು ಪೊಲೀಸರ ಮೇಲೆ ದಾಳಿ ನಡೆಸಿ, ಪೊಲೀಸರ ಬಂದೂಕು ಮುರಿದು ಹಾಕಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ನಗರದ ನೀರುಮಾರ್ಗದ ಕಾಲೇಜೊಂದರ ನಾಲ್ವರು ವಿದ್ಯಾರ್ಥಿಗಳು ಎರಡು ಬೈಕ್ ನಲ್ಲಿ ಬಂದು ಕೂಳೂರು ಸೇತುವೆ ಚೆಕ್ ಪೋಸ್ಟ್ ನಲ್ಲಿ ದಾಳಿ ನಡೆಸಿದ್ದಾರೆ.
ಈ ಯುವಕರು ಇಂದು ನಸುಕಿನ ವೇಳೆ ಲಾರಿಯವರ ಜೊತೆ ಜಗಳವಾಡಿದ್ದರು. ಲಾರಿ ಚಾಲಕನ ನೀಡಿದ ದೂರಿನನ್ವಯ ಪೊಲೀಸರು ಕೂಳೂರು ಚೆಕ್ ಪೋಸ್ಟ್ ನಲ್ಲಿ ಯುವಕರನ್ನು ಅಡ್ಡಹಾಕಿದ್ದರು. ಆದರೆ ಒಂದು ಬೈಕ್ ನ ಸವಾರರು ಪೊಲೀಸರ ಬ್ಯಾರಿಕೇಡ್ ಮುರಿದು ತಪ್ಪಿಸಿಕೊಂಡಿದ್ದಾರೆ.
ಇದನ್ನೂ ಓದಿ:ಉಜಿರೆ ಟು ಕೋಲಾರ: ಬಾಲಕ ಅನುಭವ್ ಅಪಹರಣಕಾರರ ಬಂಧನ ಹೇಗಾಯ್ತು?
ಮತ್ತೊಂದು ಬೈಕ್ ನ್ನು ಪೊಲೀಸರು ತಡೆದಿದ್ದಾರೆ. ಆದರೆ ಪೊಲೀಸರ ಮೇಲೆ ಎಗರಿದ ಯುವಕರು ಹಲ್ಲೆ ನಡೆಸಿ ಪೊಲೀಸರ ಬಂದೂಕು ಕಿತ್ತುಕೊಂಡು ಮುರಿದುಹಾಕಿದ್ದಾರೆ.
ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಕೂಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.