ಮಹಿಳಾ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ
Team Udayavani, Mar 23, 2018, 3:16 PM IST
ಉಳ್ಳಾಲ: ಮಹಿಳೆಯರಲ್ಲಿ ಹುಟ್ಟಿನಿಂದಲೇ ನಾಯಕತ್ವ ಗುಣವಿದ್ದು, ಮಹಿಳೆಯರಲ್ಲಿರುವ ವ್ಯಕ್ತಿತ್ವ ಮತ್ತು ನಾಯಕತ್ವಗುಣವನ್ನು ಸಮಾಜಕ್ಕೆ ನೀಡುವ ಕಾರ್ಯ ಆಗಬೇಕು ಎಂದು ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಜಿಲ್ಲೆ 317ಡಿ ಇದರ ವತಿಯಿಂದ ಉಳ್ಳಾಲ ತಾಜ್‌ಮಹಲ್ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ, ಜಾಗೃತಿ ಕಾರ್ಯಕ್ರಮ ಮತ್ತು ಸಾಧಕರಿಗೆ ಪ್ರಶಸ್ತಿ ಪುರಸ್ಕಾರ ಮಾಡಿ ಮಾತನಾಡಿದರು.
ಮಹಿಳೆಯರು ಇಂದು ಪುರುಷರಿಗೆ ಸಮಾನಾಗಿ ವಿಶ್ವದಲ್ಲಿ ಅತ್ಯಂತ ದೊಡ್ಡ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಮಹಿಳೆಯರ ಸಬಲೀಕರಣಕ್ಕೆ ಸರಕಾರವೂ ಆದ್ಯತೆ ನೀಡಿದೆ. ಮಹಿಳೆಯರನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ, ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲವನ್ನು ನೀಡುವ ಕಾರ್ಯ ನಡೆದಿದ್ದು ಇದನ್ನು ಸದುಪಯೋಗಿಸಿಕೊಳ್ಳಬೇಕು ಎಂದರು.
ಲಯನೆಸ್‌ನ ಜಿಲ್ಲಾ ಪ್ರಥಮ ಮಹಿಳೆ ನಮಿತಾ ಡಿ.ಹೆಚ್. ಮತ್ತು ಲಯನ್ಸ್ ಜಿಲ್ಲಾ ರಾಜ್ಯಪಾಲ ಹೆಚ್.ಆರ್. ಹರೀಶ್ ಚಾಲನೆ ನೀಡಿದರು. ಮಹಿಳಾ ಸಬಲೀಕರಣ ಜಿಲ್ಲೆ 317ಡಿಯ ಸಂಚಾಲಕಿ ವಾಣಿ ವಿ.ಆಳ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಆಳ್ವಾಸ್ ಎಜುಕೇಶನ್‌ನ್ ಟ್ರಸ್ಟ್‌ನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸಬಿತಾ ಮೊನಿಸ್ ಭಾಗವಹಿಸಿದ್ದರು.
ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಕವಿತಾ ಶಾಸ್ತ್ರೀ , ಪ್ರಥಮ ಉಪ ರಾಜ್ಯಪಾಲ ದೇವದಾಸ್ ಭಂಡಾರಿ, ದ್ವಿತೀಯ ಉಪರಾಜ್ಯಪಾಲ ರೊನಾಲ್ಡ್ ಐ. ಗೋಮ್ಸ್, ಸ್ವರ್ಣ ನಿರಂತರ ಉಳಿತಾಯ ಗುಂಪುಗಳ ಒಕ್ಕೂಟದ ಅಧ್ಯಕ್ಷೆ ರುಫಿನಾ ವೇಗಸ್, ಮಹಿಳಾ ಸಬಲೀಕರಣದ ಸಂಚಾಲಕರಾದ ಆಶಾ ರಾಬ್ ಆರೂರ್, ಸುಮಲತಾ ಎನ್. ಸುವರ್ಣ, ಜಿಲ್ಲಾಧ್ಯಕ್ಷರಾದ ಕವಿತಾ ಪಾಲ್ಕೆ, ಅನುರಾದಾ ಶರತ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಡಾ| ಪ್ರಿಯದರ್ಶಿನಿ ಡಿ’ಸೋಜಾ, ಮರ್ಸಿ ವೀಣಾ ಡಿ’ಸೋಜಾ, ಸಬಿತಾ ಮೋನಿಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಸಿ.ಕೆ. ಶ್ಯಾಮಲಾ ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ವಸಹಾಯ ಗುಂಪುಗಳ ಒಕ್ಕೂಟಕ್ಕೆ 50 ಸಾವಿರ ಧನಸಹಾಯ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.