ಬೆಂಗಳೂರು ಗಲಭೆ; ಕರಾವಳಿಯಲ್ಲಿ ಕಟ್ಟೆಚ್ಚರ
Team Udayavani, Aug 14, 2020, 4:27 AM IST
ಮಂಗಳೂರು ನಗರದಲ್ಲಿ ಪೊಲೀಸರು ಗುರುವಾರ ಪಥಸಂಚಲನ ನಡೆಸಿದರು.
ಮಂಗಳೂರು/ಉಡುಪಿ: ಬೆಂಗಳೂರಿನಲ್ಲಿ ನಡೆದ ಗಲಭೆ ಮತ್ತು ಆ. 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಉಡುಪಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈ ನಿಟ್ಟಿನಲ್ಲಿ ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದು, ಮಂಗಳೂರು ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಆಗು ಹೋಗುಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ “ಉದಯವಾಣಿ’ಗೆ ತಿಳಿಸಿದ್ದಾರೆ.
ಸಾಮಾಜಿಕ ಜಾಲ ತಾಣಗಳಲ್ಲಿ ಬರುತ್ತಿರುವ ವಿವಿಧ ಪೋಸ್ಟ್‌ಗಳು, ಅವಹೇಳನಕಾರಿ ಬರಹಗಳು, ಕಮೆಂಟ್‌ಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಂಕಿತರ ಚಲನ ವಲನಗಳ ಬಗ್ಗೆ ಕಣ್ಗಾವಲು ಇರಿಸಲಾಗಿದೆ. ಈ ತನ್ಮಧ್ಯೆ ಗುರುವಾರ ಮಂಗಳೂರಿನಲ್ಲಿ ಪೊಲೀಸರಿಂದ ಪಥ ಸಂಚಲನ ನಡೆಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರವಣಿಗೆಗಳು ಕಂಡು ಬಂದರೆ ಅವುಗಳನ್ನು ಇನ್ನೊಬ್ಬರಿಗೆ ರವಾನಿಸುವ ಬದಲು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಬಂದೋಬಸ್ತ್ಗೆ ಬೇಕಾದಂತತಹ ಎಲ್ಲ ಕ್ರಮಗಳನ್ನು ವಹಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಪ್ರಕರಣಗಳನ್ನು ಸೆನ್ ಠಾಣೆ ನಿಗಾ ವಹಿಸುತ್ತಿದೆ ಎಂದು ಉಡುಪಿ ಎಸ್‌ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
ಪ್ರಕರಣ ದಾಖಲು
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದ್ದು, ಈ ವಿಚಾರದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ಹಾಗೂ ಇತರ ಯಾವುದೇ ಮತಗಳ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿ ಯಾವುದೇ ವ್ಯಕ್ತಿಗಳು ಧಾರ್ಮಿಕ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಟಿಸುವುದಾಗಲಿ, ಹಂಚಿ ಕೊಳ್ಳುವುದಾಗಲಿ ಮತ್ತು ಅಭಿಪ್ರಾಯ ವ್ಯಕ್ತ ಪಡಿಸುವುದಾಗಲಿ, ಟೀಕೆ ಮಾಡುವುದಾಗಲಿ ಕಂಡು ಬಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.