‘ಜಿಲ್ಲೆಯಲ್ಲಿ ಬೀಚ್‌ ಪ್ರವಾಸೋದ್ಯಮಕ್ಕೆ ಆದ್ಯತೆ’

Team Udayavani, Sep 28, 2018, 1:12 PM IST

28-sepctember-0.gif

ಉಳ್ಳಾಲ: ಜಿಲ್ಲೆಯಲ್ಲಿ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಬೀಚ್‌ ಪ್ರವಾಸೋದ್ಯಮದೊಂದಿಗೆ ಜಲಸಾಹಸ ಕ್ರೀಡೆಗಳನ್ನು ಅಳವಡಿಸುವ ನಿಟ್ಟಿನಲ್ಲಿ ಯೋಜನೆ ಹಾಕಿಕೊಂಡಿದ್ದು ಶೀಘ್ರವೇ ಕಾರ್ಯರೂಪಕ್ಕೆ ತರಲಾಗುವುದು ಎಂದು ಮಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಉದಯ ಶೆಟ್ಟಿ ಅಭಿಪ್ರಾಯಪಟ್ಟರು.

ಮಂಗಳೂರು ವಿವಿಯ ಎಂಬಿಎ ಸಭಾ ಭವನದಲ್ಲಿ ವಿವಿಯ ಟೂರಿಸಂ ಆ್ಯಂಡ್‌ ಟ್ರಾವೆಲ್‌ ಮ್ಯಾನೇಜ್‌ಮೆಂಟ್‌ ವಿಭಾಗ ಹಾಗೂ ಪ್ರವಾಸೋದ್ಯಮ ಇಲಾಖೆ ಮಂಗ ಳೂರು ಜಂಟಿ ಆಶ್ರಯದಲ್ಲಿ ಗುರುವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತಲಪಾಡಿ ಬೀಚ್‌ನ ಅಭಿವೃದ್ಧಿ
ಅತ್ಯಂತ ಅಕರ್ಷಕವಾಗಿರುವ ತಲಪಾಡಿ ಬೀಚ್‌ನ್ನು ಸುಸಜ್ಜಿತ ಬೀಚ್‌ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಸ್ವದೇಶ ದರ್ಶನ್‌ ಕೋಸ್ಟಲ್‌ ಸರ್ಕಿಟ್‌ ಕಾರ್ಯಕ್ರಮದಲ್ಲಿ ತಲಪಾಡಿ ಬೀಚನ್ನು ಆಯ್ಕೆ ಮಾಡಲಾಗಿದ್ದು ಹಂತಹಂತವಾಗಿ ಮೂಲ ಸೌಲಭ್ಯಗಳನ್ನು ವ್ಯವಸ್ಥೆಗೊಳಿಸಲಾಗುತ್ತಿದೆ. ಇದು ಮುಂದಿನ ಐದು ವರ್ಷಗಳಲ್ಲಿ ಪ್ರವಾಸಿಗರನ್ನು ಸೆಳೆಯುವ ಬೀಚ್‌ ಆಗಿ ಬದಲಾಗಲಿದೆ. ಈಗಾಗಲೇ ತಲಪಾಡಿ ಬೀಚ್‌ ಅಭಿವೃದ್ಧಿ ಕಾಮಗಾರಿ ಬಗ್ಗೆ ಖಾಸಗಿ ಸಂಸ್ಥೆಗೆ ಟೆಂಡರ್‌ ವಹಿಸಲಾಗಿದೆ ಎಂದರು.

ಇಲಾಖೆ ವತಿಯಿಂದ ಸಬ್ಸಿಡಿ
ಪ್ರವಾಸೋದ್ಯಮ ನೀತಿಯಡಿ ಪ್ರವಾಸಿಗರಿಗೆ ಅನುಕೂಲವಾಗುವ ಸುಮಾರು 20 ಯೋಜನೆಗಳಲ್ಲಿ ಬಂಡವಾಳ ಹೂಡುವವರಿಗೆ ಇಲಾಖೆ ವತಿಯಿಂದ ಶೇ. 20 ಸಬ್ಸಿಡಿ ಸಿಗಲಿದೆ. ಈಗಾಗಲೇ ಗುರುತಿಸಲ್ಪಟ್ಟಿರುವ ಪ್ರವಾಸಿ ಕೇಂದ್ರವಾಗಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ಧರ್ಮಸ್ಥಳ ಪಂಚಾಯತ್‌ ವ್ಯಾಪ್ತಿಯಲ್ಲಿ ಹೊಟೇಲ್‌, ಹೋಂ ಸ್ಟೇ, ರೆಸಾರ್ಟ್‌ ತೆರೆಯಲು ಅವಕಾಶವಿದ್ದು ಶೇ. 40 ಸಬ್ಸಿಡಿ ದೊರಕಲಿದೆ. ಎರಡು ಕೇಂದ್ರಗಳಲ್ಲಿ ಈಗಾಗಲೇ ಅಧಿಕೃತ ಹದಿನೈದು ಹೋಂ ಸ್ಟೇಗಳು ಕೆಲಸ ಮಾಡುತ್ತಿದೆ. ಆ ಮೂಲಕ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದರು.

ಮಂಗಳೂರು ವಿವಿಯ ಕುಲಸಚಿವ ಡಾ| ಎ.ಎಂ. ಖಾನ್‌ ಅಧ್ಯಕ್ಷತೆ ವಹಿಸಿದ್ದರು. ಜೆಟ್‌ ಏರ್‌ವೇಸ್‌ ಬೆಂಗಳೂರು ವಿಭಾಗ ಮಾರಾಟ ವಿಭಾಗದ ಸಹಾಯಕ ವ್ಯವಸ್ಥಾಪಕ ವಿನೀತ್‌ ರಾಜೇಂದ್ರನ್‌ ಉಪಸ್ಥಿತರಿದ್ದರು. ಯಶಸ್ವಿ ಭಟ್‌ ವಿವಿಧ ಸ್ಪರ್ಧಾ ವಿಜೇತರ ಹೆಸರು ವಾಚಿಸಿದರು. ಶ್ರಾವ್ಯಾ ನಿರೂಪಿಸಿದರು. ಉಪನ್ಯಾಸಕ ಶೇಖರ್‌ ನಾಯ್ಕ ವಂದಿಸಿದರು.

ಪ್ರವಾಸಿಗರ ಸಂಖ್ಯೆ ಹೆಚ್ಚಳ 
ಜೆಟ್‌ ಏರ್‌ವೇಸ್‌ ಬೆಂಗಳೂರು ಮಾರಾಟ ವಿಭಾಗದ ಮುಖ್ಯ ವ್ಯವಸ್ಥಾಪಕ ಹರೀಶ್‌ ಕೆ. ಶೆಣೈ ಮಾತನಾಡಿ, ಭಾರತಕ್ಕೆ ಬರುವ ಪ್ರವಾಸಿಗರಲ್ಲಿ ಶೇ.80 ಜನರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಉದ್ದೇಶದಿಂದ ಬಂದರೆ ಇನ್ನುಳಿದ ಪ್ರಯಾಣಿಕರು ಬೀಚ್‌ ನೋಡಲು ಬರುತ್ತಾರೆ. ಪ್ರವಾಸೋದ್ಯಮ ಕ್ಷೇತ್ರ ಇತ್ತೀಚೆಗೆ ಹಂತ- ಹಂತವಾಗಿ ಅಭಿವೃದ್ಧಿ ಕಾಣುತ್ತಿರುವುದರಿಂದ ಪ್ರವಾಸಿಗರ ಸಂಖ್ಯೆಯಲ್ಲು ಹೆಚ್ಚಳವಾಗಿದೆ. ಅದಕ್ಕೆ ಅನುಗುಣವಾಗಿ ವಾಯಯಾನ ಇಲಾಖೆ ಕಾರ್ಯಾಚರಿಸುತ್ತಿದೆ ಎಂದರು.

ಸರ್ಫಿಂಗ್ ಉತ್ಸವ 
ಸಸಿಹಿತ್ಲು ಬೀಚ್‌ನಲ್ಲಿ ಕಳೆದ ವರ್ಷ ಖಾಸಗಿ ಸಂಸ್ಥೆಗಳ ಜತೆಗೂಡಿ ಮೇ ತಿಂಗಳ ಕೊನೆಯ ಮೂರು ದಿನ ಸರ್ಫಿಂಗ್ ಉತ್ಸವ ಆಯೋಜಿಸಿದ್ದು, ಸಸಿಹಿತ್ಲು ಬೀಚನ್ನು ಅಂತಾರಾಷ್ಟ್ರೀಯ ಸರ್ಫಿಂಗ್ ತಾಣವನ್ನಾಗಿ ರೂಪಿಸಲು 160ಕೋಟಿ. ರೂ. ಅನುದಾನ ಮಂಜೂರು ಮಾಡುವಂತೆ ಇಲಾಖೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಆ ಮೂಲಕ ನಿತ್ಯವೂ ಸರ್ಫಿಂಗ್ ನಡೆಸುವ ಯೋಜನೆ ಇದೆ ಎಂದು ಡಾ| ಉದಯ ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.