Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Team Udayavani, Dec 19, 2024, 2:34 PM IST
ಉಳ್ಳಾಲ: ಈ ಬಾರಿಯ ಮಳೆಗಾಲದಲ್ಲಿ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾನೆಕೆರೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಮನೆ ಸಮೀಪದ ಗುಡ್ಡ ಕುಸಿದು ಮನೆ ಅಪಾಯದಲ್ಲಿದ್ದ ವರದಿ ಉದಯವಾಣಿ ಸುದಿನದಲ್ಲಿ ಪ್ರಕಟಗೊಂಡಿತ್ತು. ವರದಿಗೆ ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆ ಕಾಂಕ್ರೀಟ್ ತಡೆಗೋಡೆಗೆ ಪ್ರಸ್ತಾವನೆ ಸಲ್ಲಿಸಿ ಅನುದಾನಕ್ಕೆ ಲೋಕೋಪಯೋಗಿ ಇಲಾಖೆಯ ರಾಜ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಿದೆ.
ಬೆಳ್ಮ ಗ್ರಾಮ ಪಂಚಾಯತ್ ಸದಸ್ಯೆ ಕಮಲಾ ಅವರ ಮನೆಯ ಎದುರಿನ ಗುಡ್ಡ ಕುಸಿದಿದ್ದು, ಮನೆ ಅಪಾಯದಲ್ಲಿದ್ದರೂ ಲೋಕೋಪಯೋಗಿ ಇಲಾಖೆ ಮತ್ತು ಕಂದಾಯ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅಪಾಯಕಾರಿ ಸ್ಥಿತಿಯಲ್ಲೇ ಮನೆಯಲ್ಲಿ ವಾಸಿಸುತ್ತಿದ್ದ ಗ್ರಾ.ಪಂ. ಸದಸ್ಯೆಯ ಮನೆ ಕುಸಿಯುವ ಭೀತಿಯಲ್ಲಿದೆ ಶೀರ್ಷಿಕೆಯಡಿ ಉದಯವಾಣಿ ಸುದಿನದಲ್ಲಿ ಅ. 20ರಂದು ವಿಸ್ತ್ರತ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮತ್ತು ಉಳ್ಳಾಲ ತಹಶೀಲ್ದಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಉದಯವಾಣಿ ಪತ್ರಿಕೆಯ ವರದಿಯನ್ನು ಉಲ್ಲೇಖ ಮಾಡಿ ಅನುದಾನ ನೀಡುವಂತೆ ಇಲಾಖೆಯ ರಾಜ್ಯ ಕಾರ್ಯದರ್ಶಿಯವರಿಗೆ ಕಾಮಗಾರಿಯ ಪ್ರಸ್ತಾವನೆ ಸಲ್ಲಿಸಿ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.