ಮಂಗಳೂರು: ನಂತೂರು ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
Team Udayavani, Dec 8, 2020, 12:06 PM IST
ಮಂಗಳೂರು: ಕೇಂದ್ರ ಸರಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ ಭಾರತ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ನಂತೂರು ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು.
ಕೆಲ ನಿಮಿಷಗಳ ಕಾಲ ನಂತೂರು ಸರ್ಕಲ್ ಬಳಿ ವಾಹನಗಳನ್ನು ತಡೆದು ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫರ್ನಾಂಡೀಸ್ ಮಾತನಾಡಿ, ಕೇಂದ್ರ ಸರಕಾರ ಕೋವಿಡ್ ಲಾಕ್ ಡೌನ್ ನೆಪದಲ್ಲಿ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿದೆ. ಇದು ರೈತರ ಪಾಲಿನ ಮರಣಶಾಸನವಾಗಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗ್ರಹ ಸಚಿವ ಅಮಿತ್ ಶಾಗೆ ತಾಯಿ ಹೃದಯವಿಲ್ಲ ಎಂದರು.
ಇದನ್ನೂ ಓದಿ:ಭಾರತ್ ಬಂದ್: ಮಂಗಳೂರಿಗೆ ತಟ್ಟದ ಬಂದ್ ಬಿಸಿ, ವಾಹನ ಸಂಚಾರ ಎಂದಿನಂತೆ
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಾದವ ಶೆಟ್ಟಿ, ಮನೋಹರ ಶೆಟ್ಟಿ, ಮಾಜಿ ಶಾಸಕ ಐವನ್ ಡಿಸೋಜಾ, ಜೆಡಿಎಸ್ ಮುಖಂಡ ಎಂ.ಬಿ ಸದಾಶಿವ ಮೊದಲಾದವರು ಮಾತನಾಡಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಮೊಯ್ದಿನ್ ಬಾವ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆಗಳ ಮುಖಂಡರಾದ ಕ್ರಷ್ಣಪ್ಪ ಸಾಲ್ಯಾನ್, ಆಲ್ವಿನ್ ಮಿನೇಜಸ್, ಸನ್ನಿ ಡಿಸೋಜಾ, ಲಿಯೋ ನಝರತ್, ಶ್ರೀಧರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ಅಶುಂತ, ಪುನೀತ್ ಶೆಟ್ಟಿ, ಜಯಂತಿ ಶೆಟ್ಟಿ, ವಿದ್ಯಾ ದಿನಕರ್, ಬಿ.ಕೆ. ಇಮ್ತಿಯಾಝ್, ಸಂತೋಷ್ ಬಜಾಲ್ ಮೊದಲಾದವರು ಭಾಗವಹಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.