Breaking News: ನೇತ್ರಾವತಿ ಸೇತುವೆ ಡಿವೈಡರ್ ಗೆ ಗುದ್ದಿದ ಬೈಕ್; ಸವಾರ ಸ್ಥಳದಲ್ಲೇ ಸಾವು
Team Udayavani, Jan 24, 2024, 11:04 AM IST
ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ಜ.23ರ ಮಂಗಳವಾರ ತಡರಾತ್ರಿ ವೇಳೆ ಸಂಭವಿಸಿದೆ.
ಬಾಗಲಕೋಟೆ ನಿವಾಸಿ ಸುರೇಶ್ (30) ಮೃತ ಸವಾರ.
ಸುರೇಶ್ ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಶೋ ರೂಮ್ನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು.
ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ ವಾಪಸ್ಸಾಗುತ್ತಿದ್ದ ಸಂದರ್ಭ ತಡರಾತ್ರಿ 1.30 ಗಂಟೆ ಸುಮಾರಿಗೆ ಬೈಕ್ ಡಿವೈಡರ್ ಗೆ ಬಡಿದು ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು
Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು
Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Mangaluru: ಸೈಟ್ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್ ವಿರುದ್ಧ ಮಹಿಳೆ ದೂರು
Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.