ಜನನ, ಮರಣ ಪ್ರಮಾಣ ಪತ್ರ: ಡಿಜಿಟಲ್ ಸಹಿ ಕಡ್ಡಾಯ: ಎಂ ಜೆ. ರೂಪಾ
Team Udayavani, Sep 19, 2020, 1:47 AM IST
ಸಭೆಯನ್ನುದ್ದೇಶಿಸಿ ಅಪರ ಜಿಲ್ಲಾಧಿಕಾರಿ ಎಂ ಜೆ. ರೂಪಾ ಮಾತನಾಡಿದರು.
ಮಂಗಳೂರು: ಜಿಲ್ಲೆಯಲ್ಲಿ ಜನನ, ಮರಣ ಪ್ರಮಾಣ ಪತ್ರಗಳು ಕಡ್ಡಾಯವಾಗಿ ಡಿಜಿಟಲ್ ಸಹಿಯ ಮುಖಾಂತರ ವಿತರಣೆಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ ಜೆ. ರೂಪಾ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜನನ, ಮರಣ ನೋಂದಣಿ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರು, ಪ್ರಾ. ಸ. ಆರೋಗ್ಯ ಕೇಂದ್ರ, ತಾ. ಜಿಲ್ಲಾ ಆಸ್ಪತ್ರೆಗಳಲ್ಲಿ ಸರಕಾರಿ ವೈದ್ಯಾಧಿಕಾರಿ, ಮಹಾ ನಗರಪಾಲಿಕೆಯಲ್ಲಿ ಪಾಲಿಕೆಯ ಆರೋಗ್ಯಾಧಿಕಾರಿ ಹಾಗೂ ನಗರಸಭೆ, ಪುರಸಭೆ, ಪ. ಪಂ. ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಆರೋಗ್ಯ ನಿರೀಕ್ಷಕರು ನೋಂದಣಾಧಿಕಾರಿಗಳಾಗಿದ್ದು, ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸರಕಾರಿ ಆಸ್ಪತ್ರೆಗಳಲ್ಲಿ ಸರಕಾರಿ ವೈದ್ಯರು ಉಪ ನೋಂದಣಾಧಿಕಾರಿಗಳಾಗಿದ್ದು ಅವರು ಡಿಜಿಟಲ್ “ಕೀ’ಯನ್ನು ಅಳವಡಿಸಿ ಕೊಳ್ಳಬೇಕು. ಕಡ್ಡಾಯ ವಾಗಿ ಡಿಜಿಟಲ್ ಸಹಿಯ ಮುಖಾಂತರ ಜನನ ಮರಣ ಪ್ರಮಾಣ ಪತ್ರ ಗಳನ್ನು ನೀಡಬೇಕು ಎಂದು ಸೂಚಿಸಿದರು. ಸರಕಾರದ ಆದೇಶದ ಪ್ರಕಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳಾಗಿ ನೇಮಿಸಲಾಗಿದೆ ಎಂದು ಹೇಳಿದರು.
ಅಂಕಿ ಅಂಶದ ಪ್ರಕಾರ ಈಗಾಗಲೇ ಜಿಲ್ಲೆಯ ನಗರ ಮತ್ತು ಪಟ್ಟಣಗಳಲ್ಲಿ ಜನನ ಮರಣ ಪ್ರಮಾಣ ಪತ್ರ ತಡವಾಗಿ ನೋಂದಣಿಯಾಗಿರುವುದು ಬೆಳಕಿಗೆ ಬಂದಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ತಾಲೂಕಿನ ತಹಶೀಲ್ದಾರ್‌ಗಳು ಸಂಬಂಧಪಟ್ಟ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸಬೇಕು ಎಂದು ಹೇಳಿದರು. ಉಪವಿಭಾಗಾಧಿಕಾರಿ ಮದನ್ ಮೋಹನ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಅಧಿಕಾರಿಗಳು ಉಪಸ್ಥಿತರಿದ್ದರು.
18,824 ಜನನ ಪ್ರಮಾಣ ಪತ್ರ ನೋಂದಣಿ
ಜಿಲ್ಲೆಯ ಎಲ್ಲ ನೋಂದಣಿ ಘಟಕವು ನಿಯಾಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇ. 100ರಷ್ಟು ಘಟನೆಗಳು ದಾಖಲಾತಿಯಾಗಿರುವ ಬಗ್ಗೆ ಕಂದಾಯ, ನಗರಾಭಿವೃದ್ಧಿ ಹಾಗೂ ಸಾಂಖೀಕ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. 2020ನೇ ಸಾಲಿನ ಜನವರಿಯಿಂದ ಆಗಸ್ಟ್‌ವರೆಗಿನ ಅಂಕಿ ಅಂಶದ ಪ್ರಕಾರ ಜಿಲ್ಲೆಯ ನಗರ ಹಾಗೂ ಗ್ರಾಮಾಂತರಗಳಲ್ಲಿ 18,824 ಜನನ ಪ್ರಮಾಣ ಪತ್ರ ನೋಂದಣಿಯಾಗಿದ್ದು, 10,139 ಮರಣ ಪ್ರಮಾಣ ಪತ್ರ ನೋಂದಣಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.