Mangaluru ನೀರಿನ ಸಮಸ್ಯೆಗೆ ಬಿಜೆಪಿ ನಿರ್ವಹಣಾ ವೈಫ‌ಲ್ಯವೇ ಕಾರಣ: ನವೀನ್‌ ಡಿ’ಸೋಜ


Team Udayavani, May 7, 2023, 6:36 PM IST

1-wdsaasd

ಮಂಗಳೂರು: ನಗರದಲ್ಲಿ ಪ್ರಸ್ತುತ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆಗೆ ಬಿಜೆಪಿಯ ನಿರ್ವಹಣಾ ವೈಫ‌ಲ್ಯವೇ ಪ್ರಮುಖ ಕಾರಣ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತದಲ್ಲಿರುವ ಬಿಜೆಪಿ ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫ‌ಲವಾಗಿದೆ ಎಂದು ಮನಪಾ ವಿಪಕ್ಷ ನಾಯಕ ನವೀನ್‌ ಡಿ’ಸೋಜ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕರಾದ ಜೆ.ಆರ್‌. ಲೋಬೊ ಅವರ ವಿಶೇಷ ಕಾಳಜಿ ಮೇರೆಗೆ ಮಂಗಳೂರು ನಗರಕ್ಕೆ ನೀರಿನ ಅಭಾವ ಸರಿಪಡಿಸಲು ಸುಮಾರು 7 ಮೀ. ಎತ್ತರದಲ್ಲಿ ವೆಂಟೆಡ್‌ ಡ್ಯಾಂ ಅನ್ನು ಕಾಂಗ್ರೆಸ್‌ ಪಕ್ಷ ಸರಕಾರದ ಅನುಮೋದನೆ ದೊರಕಿಸಿ ಕೊಡಲು ಯಶಸ್ವಿಯಾಗಿತ್ತು. ಈಗ 6 ಮೀಟರ್‌ ನೀರು ನಿಲುಗಡೆಯಾಗುತ್ತಿದೆ. ನಗರಕ್ಕೆ ಕುಡಿಯುವ ನೀರು ಪರಿಸ್ಥಿತಿಯನ್ನು ಅಂದಾಜಿಸಿ ಡಿಸೆಂಬರ್‌ ತಿಂಗಳಿನಿಂದ ಕಾರ್ಯಯೋಜನೆ ರೂಪಿಸಬೇಕಾಗಿತ್ತು. ಆದರೆ ಪಾಲಿಕೆಯಲ್ಲಿ ಆಡಳಿತದಲ್ಲಿರುವ ಬಿಜೆಪಿ ಈ ಬಗ್ಗೆ ತೀರಾ ನಿರ್ಲಕ್ಷ್ಯ ವಹಿಸಿತ್ತು. ಇದರಿಂದಾಗಿ ನಗರದ ಜನತೆ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಬ್ಬರು ಶಾಸಕರಿದ್ದಾರೆ. ಅವರಿಂದಲೂ ಮಹಾನಗರದ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ರೀತಿಯ ಪೂರಕ ಸ್ಪಂದನೆ ದೊರಕಿಲ್ಲ. ಅಧಿಕಾರಿಗಳು ಹಾಗೂ ಮನಪಾ ಆಡಳಿತದ ನಡುವೆ ಹೊಂದಾಣಿಕೆ ಇಲ್ಲ. ಇದಲ್ಲದೆ ಬಿಜೆಪಿ ಆಡಳಿತದಲ್ಲಿ ನೀರಿನ ದರವನ್ನು ವಿಪರೀತವಾಗಿ ಏರಿಕೆ ಮಾಡಿ ಜನರಿಗೆ ಹೊರೆಯಾಗುವಂತೆ ಮಾಡಲಾಗಿದೆ ಎಂದು ದೂರಿದರು.

ಜಲಸಿರಿ ರೂವಾರಿ ಲೋಬೋ
ಅಂದಾಜು ವೆಚ್ಚ 760 ಕೋ.ವೆಚ್ಚದಲ್ಲಿ ಜಲಸಿರಿ ಯೋಜನೆಯನ್ನು ಅಂದಿನ ಶಾಸಕರಾದ ಜೆ.ಆರ್‌.ಲೋಬೊ ಹಾಗೂ ನಗರಾಭಿವೃದ್ಧಿ ಸಚಿವರಾದ ವಿನಯ್‌ ಕುಮಾರ್‌ ಸೊರಕೆ ಅವರ ಮೂಲಕ ಸರಕಾರದಿಂದ ಮಂಜೂರಾತಿ ದೊರಕಿಸಲು ಯಶಸ್ವಿಯಾಗಿದ್ದು, ಈಗ ಅದರ ಕಾಮಗಾರಿಗಳು ನಡೆಯುತ್ತಿವೆ. ಸುಮಾರು ಸುಮಾರು 20 ಓವರ್‌ ಹೆಡ್‌ ಟ್ಯಾಂಕ್‌, ಅಂಡರ್‌ ಗ್ರೌಂಡ್‌, ವಾಟರ್‌ ಸ್ಟೋರೇಜ್‌, ಬೂಸ್ಟರ್‌ ಪೈಪ್‌ ಮೂಲಕ ಓವರ್‌ಹೆಡ್‌ ಟ್ಯಾಂಕ್‌ಗೆ ನೀರನ್ನು ಶೇಖರಿಸಲು ಕ್ರಮ. ಈ ಯೋಜನೆ ಮುಖಾಂತರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಭರ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ಈಗಿನ ಶಾಸಕರು ತಾನೇ ಮಾಡಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಮೇಯರ್‌ ಶಶಿಧರ ಹೆಗ್ಡೆ, ಮನಪಾ ಸದಸ್ಯರಾದ ಎ.ಸಿ. ವಿನಯರಾಜ್‌, ಪ್ರವೀಣ್‌ಚಂದ್ರ ಆಳ್ವ, ಮಾಜಿ ಸದಸ್ಯ ದೀಪಕ್‌ ಪೂಜಾರಿ ಉಪಸ್ಥಿತರಿದ್ದರು.

ಸ್ವಯಂ ಘೋಷಿತ ಆಸ್ತಿ ತೆರಿಗೆಯಲ್ಲೂ ಭಾರೀ ಮಾಡಲಾಗಿದೆ. ಖಾಲಿ ನಿವೇಶನಕ್ಕೆ ಅತೀ ಹೆಚ್ಚು ಅಂದರೆ ಶೇ. 0.2, ಗೈಡೆನ್ಸ್‌ ವ್ಯಾಲ್ಯೂ ಶೇ.25 ರಷ್ಟು ಕೂಡಿಸಿ ಎಸ್‌ಎಎಸ್‌ ನಲ್ಲಿ ಸೇರಿಸಲಾಗಿದೆ. ಇದನ್ನು ಕೂಡಾ ಕಾಂಗ್ರೆಸ್‌ ವಿರೋಧಿಸಿದೆ. ಸಾರ್ವಜನಿಕರು ಇದರಿಂದ ಎಚ್ಚೆತ್ತು ಬಿಜೆಪಿಯ ಸುಳ್ಳು ಆಶ್ವಾಸನೆಗೆ ಮರಳಾಗಬಾರದು ಎಂದು ನವೀನ್‌ ಡಿ’ಸೋಜ ಹೇಳಿದರು.

ನಗರದ ಅಭಿವೃದ್ಧಿಗೆ ಕಾಂಗ್ರೆಸ್‌ ಅತ್ಯಗತ್ಯ
ನಗರದ ಅಭಿವೃದ್ಧಿಗೆ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರಬೇಕು. ಹಾಗಾಗಿ ಜೆ.ಆರ್‌. ಲೋಬೋ ಅವರನ್ನು ಅಧಿಕ ಮತಗಳಿಂದ ಶಾಸಕರಾಗಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.