ತಣ್ಣೀರುಬಾವಿ ಬೀಚ್‌ಗೆ ಬ್ಲೂ ಫ್ಲ್ಯಾಗ್ ಮಾನ್ಯತೆ; ಅನುಷ್ಠಾನಕ್ಕೆ ಟೆಂಡರ್
Team Udayavani, Jan 5, 2022, 6:54 PM IST
ತಣ್ಣೀರುಬಾವಿ: ಪಡುಬಿದ್ರಿ ಬೀಚ್ ಅಂತಾರಾಷ್ಟ್ರೀಯ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದಿರುವ ಬೆನ್ನಿಗೆ ಈಗ ಮಂಗಳೂರಿನ ತಣ್ಣೀರುಬಾವಿ ಬೀಚ್ ಕೂಡ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ಸಿದ್ಧತೆ ಆರಂಭವಾಗಿದ್ದು, ಯೋಜನೆ ಅನುಷ್ಠಾನಕ್ಕೆ ಟೆಂಡರ್ ಆಹ್ವಾನಿಸಲಾಗಿದೆ.
ತಣ್ಣೀರುಬಾವಿ ಬೀಚ್‌ನ 1 ಕಿ.ಮೀ ವ್ಯಾಪ್ತಿಯಲ್ಲಿ ಬ್ಲೂ ಫ್ಲ್ಯಾಗ್ ಮಾನ್ಯತೆಯ ಯೋಜನ ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಿತು. ಬೀಚ್ ಅಭಿವೃದ್ಧಿ ದೃಷ್ಟಿಯಿಂದ ಬ್ಲೂ ಫ್ಲ್ಯಾಗ್ ಮಾನ್ಯತೆ ದೊರೆತರೆ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ದೊರೆಯಬಹುದು ಎಂದು ಜಿಲ್ಲಾಡಳಿತದ ಅಧಿಕಾರಿ ವರ್ಗ ಯೋಜನೆ ಬಗ್ಗೆ ಪೂರಕವಾಗಿ ಮಾತನಾಡಿದರು. ಆದರೆ ಸ್ಥಳೀಯ ಮೀನುಗಾರರು ಸಹಿತ ಇತರರಿಗೆ ಆಗುವ ಸಮಸ್ಯೆ ಮತ್ತು ದುಬಾರಿ ವೆಚ್ಚ ಅನಗತ್ಯ ಎಂದು ಸ್ಥಳೀಯರು ಆಕ್ಷೇಪಿಸಿದರು.
ಸಭೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ದಿನೇಶ್ ಕುಮಾರ್ ವೈ.ಕೆ., ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಹೇಶ್ ಕುಮಾರ್ ಯು. ಉಪಸ್ಥಿತರಿದ್ದರು.
ತಣ್ಣೀರುಬಾವಿ ಬೀಚ್‌ನಲ್ಲಿ ಯಾವೆಲ್ಲ ಸೌಕರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕಾದ ಅಂಶಗಳ ಆಧಾರದಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಕೆಲವೇ ದಿನದಲ್ಲಿ ಟೆಂಡರ್ ಅಂತಿಮವಾಗಿ ಸಂಸ್ಥೆಯೊಂದು ಟೆಂಡರ್ ಪಡೆದುಕೊಳ್ಳಲಿದೆ. ಬಳಿಕ ಯೋಜನೆ ಜಾರಿಗೆ ಗರಿಷ್ಠ ಸುಮಾರು 10 ಕೋ.ರೂ. ವೆಚ್ಚ ಮಾಡುವ ಸಾಧ್ಯತೆ ಇದೆ. ಕಾಮಗಾರಿ ಪೂರ್ಣವಾದ ಬಳಿಕ ಅದನ್ನು ಪರಿಶೀಲಿಸಿ ಕೇಂದ್ರ ಸರಕಾರವು ಡೆನ್ಮಾರ್ಕ್‌ನಲ್ಲಿರುವ ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಶನ್ ಸಂಸ್ಥೆಗೆ ವರದಿ ಕಳುಹಿಸಿ ಬ್ಲೂ ಫ್ಲ್ಯಾಗ್ ಮಾನ್ಯತೆ ನೀಡಲು ಕೋರಲಾಗುತ್ತದೆ. ಇದರ ಆಧಾರದಂತೆ ಡೆನ್ಮಾರ್ಕ್ ತಂಡ ತಣ್ಣೀರುಬಾವಿಗೆ ಆಗಮಿಸಿ, ಮಾನ್ಯತೆ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಿದೆ.
ಏನಿದು ಬ್ಲೂ ಫ್ಲ್ಯಾಗ್?
ಕಡಲ ತೀರ (ಬೀಚ್)ಗಳಲ್ಲಿನ ಸ್ವಚ್ಛತೆ, ಪರಿಸರ ಸ್ನೇಹಿ ವಾತಾವರಣ ಮತ್ತಿತರ ಅಂಶಗಳನ್ನು ಪರಿಗಣಿಸಿ ಪರಿಸರ ಶಿಕ್ಷಣ ವೇದಿಕೆ (ಎಫ್. ಇ.ಇ-ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್) ಬ್ಲೂ ಫ್ಲ್ಯಾಗ್ ಪ್ರಮಾಣ ಪತ್ರ ನೀಡುತ್ತದೆ. ಅಂತಾರಾಷ್ಟ್ರೀಯ ಮಟ್ಟದ ಡೆನ್ಮಾರ್ಕ್‌ನಲ್ಲಿರುವ ಈ ಸಂಸ್ಥೆಯು ಪರಿಸರ ಶಿಕ್ಷಣ ಹಾಗೂ ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ, ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆ ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಇಂತಹ ಪ್ರಮಾಣಪತ್ರ ಪಡೆದ ಬೀಚ್‌ಗಳಲ್ಲಿ ನೀಲಿ ಬಣ್ಣದ ಧ್ವಜ ಆರೋಹಣ ಮಾಡಲಾಗುತ್ತದೆ. ವಿದೇಶಗಳಲ್ಲಿ ಇಂತಹ ಪ್ರಮಾಣಪತ್ರ ಪಡೆದ ಬೀಚ್‌ಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೀಗಾಗಿ ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಇಂತಹ ಪ್ರಮಾಣಪತ್ರ ಪಡೆಯುವುದು ಅತ್ಯಂತ ಪ್ರಮುಖವಾಗಿದೆ.
ಟೆಂಡರ್ ಕರೆದ ಬಳಿಕ ಸಮಾಲೋಚನ ಸಭೆ ಯಾಕೆ?
ಸ್ಥಳೀಯ ಪ್ರಮುಖರಾದ ಯತೀಶ್ ಬೈಕಂಪಾಡಿ ಅವರು ಸಮಾಲೋಚನೆ ಸಭೆಯಲ್ಲಿ ಮಾತನಾಡಿ, “ಪಡುಬಿದ್ರಿ ಬೀಚ್‌ನ ಹೆಸರಿನಲ್ಲಿ ಅನಗತ್ಯವಾಗಿ ದುಂದುವೆಚ್ಚ ಮಾಡಲಾಗಿದೆ. ಅಲ್ಲಿನ ಮೀನುಗಾರರು ಮೀನುಗಾರಿಕೆ ನಡೆಸಲೂ ಅವಕಾಶ ನೀಡಿರಲಿಲ್ಲ. ಜತೆಗೆ ಬ್ಯಾರಿಕೇಡ್ ಮೂಲಕ ನಿರ್ಬಂಧ ಹಾಕಲಾಗಿತ್ತು. ಇಂತಹ ನಿಲುವಿಗೆ ತಣ್ಣೀರುಬಾವಿಯಲ್ಲಿ ಅವಕಾಶ ನೀಡುವುದಿಲ್ಲ. ಸ್ಥಳೀಯರ ಅಹವಾಲು ಕೇಳುವ ಮೊದಲೇ ಯೋಜನೆಗೆ ಟೆಂಡರ್ ಕರೆದಿರುವುದು ಸರಿಯಲ್ಲ. ಜತೆಗೆ ದೇಶಾದ್ಯಂತ ಎಲ್ಲ ಬ್ಲೂ ಫ್ಲ್ಯಾಗ್‌ಗೆ ಒಂದೇ ರೀತಿಯ ಯೋಜನಾ ಕಾಮಗಾರಿ ವಹಿಸಿರುವುದು ಸರಿಯಲ್ಲ. ಯಾಕೆಂದರೆ ಸ್ಥಳೀಯ ಜನರ ಭಾವನೆ ಹಾಗೂ ಸ್ಥಳೀಯ ಪ್ರವಾಸೋದ್ಯಮಕ್ಕೆ ಪೂರಕವಾಗಿ ಯೋಜನೆ ರೂಪಿಸಬೇಕಿತ್ತು’ ಎಂದರು. ಜಿಲ್ಲಾಧಿಕಾರಿಯವರು ಮಾತನಾಡಿ “ಈ ಬಗ್ಗೆ ಟೆಂಡರ್ ಪಡೆದವರಲ್ಲಿ ಪ್ರಸ್ತಾವಿಸಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.