ಬೂಸ್ಟರ್ ಡೋಸ್ ಲಸಿಕೆ ಪಡೆಯಲು 5.5 ಲಕ್ಷ ಮಂದಿ ಬಾಕಿ
ಜಿಲ್ಲೆಯಲ್ಲಿ 10 ಲಕ್ಷ ಮಂದಿ ಬಾಕಿ; ಉಚಿತ ಡೋಸ್‌ನಿಂದ ಪ್ರಗತಿ ನಿರೀಕ್ಷೆ
Team Udayavani, Jul 15, 2022, 1:28 PM IST
ಮಹಾನಗರ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಕೋವಿಡ್ ಪ್ರಕರಣ ತುಸು ಏರಿಕೆಯತ್ತ ಸಾಗುತ್ತಿದ್ದು, ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಲು ಹೆಚ್ಚಿನ ಮಂದಿ ಆಸಕ್ತಿ ತೋರುತ್ತಿಲ್ಲ. ಪಾಲಿಕೆ ಮತ್ತು ತಾಲೂಕು ವ್ಯಾಪ್ತಿಯಲ್ಲಿ ಸುಮಾರು 5.5 ಲಕ್ಷ ಮಂದಿ ಅರ್ಹರು ಇನ್ನೂ ಬೂಸ್ಟರ್ ಡೋಸ್ ಲಸಿಕೆ ಪಡೆದಿಲ್ಲ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಿಂದ ಜು. 15ರಿಂದ 75 ದಿನಗಳ ಕಾಲ 18 ರಿಂದ 59 ವಯಸ್ಸಿನವರಿಗೆ ಉಚಿತ ಮುನ್ನೆಚ್ಚರಿಕೆ ಡೋಸ್ ನೀಡಲು ಕೇಂದ್ರ ಸರಕಾರ ಮುಂದಾಗಿದ್ದು, ಲಸಿಕೆಯ ಪಡೆಯುವವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಕೇಂದ್ರ ಸರಕಾರ ಎಪ್ರಿಲ್ ತಿಂಗಳಿನಲ್ಲಿಯೇ ಅನುಮತಿ ನೀಡಿತ್ತು. 18 ರಿಂದ 60 ವರ್ಷದೊಳಗಿನ ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ಬೆಲೆಯೊಂದಿಗೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧ ನಿಗದಿಗೊಳಿಸಲಾಗಿತ್ತು. ಆದರೆ ಹಣ ನೀಡಿ ಹೆಚ್ಚಿನ ಮಂದಿ ಲಸಿಕೆ ಪಡೆದುಕೊಳ್ಳುತ್ತಿರಲಿಲ್ಲ. ಮುಂಬರುವ ದಿನಗಳಲ್ಲಿ ರಾಜ್ಯ/ಕೇಂದ್ರ ಸರಕಾರವು ಎಲ್ಲ ವಯೋಮಿತಿಯವರಿಗೆ ಬೂಸ್ಟರ್ ಡೋಸ್ ಉಚಿತವಾಗಿ ನೀಡಿದರೆ ಆಗ ಪಡೆದುಕೊಳ್ಳೋಣ ಎಂಬ ಭಾವನೆ ಅನೇಕರಲ್ಲಿತ್ತು. ಇದೀಗ ಉಚಿತ ಲಸಿಕೆ ನೀಡುವತ್ತ ಕೇಂದ್ರ ಸರಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಜಿಲ್ಲೆಯ ಲಸಿಕಾ ಪ್ರಗತಿ ಹೆಚ್ಚುವ ನಿರೀಕ್ಷೆ ಇದೆ.
ಅಂತರ ಇಳಿಕೆ
ಕೋವಿಡ್ ಬೂಸ್ಟರ್ ಡೋಸ್ ಪಡೆದುಕೊಳ್ಳುವ ಅಂತರವನ್ನು ಕೇಂದ್ರ ಆರೋಗ್ಯ ಸಚಿವಾಲಯ ಇಳಿಕೆ ಮಾಡಿದೆ. ಅದರಂತೆ 2ನೇ ಹಂತದ ಲಸಿಕೆ ಪಡೆದುಕೊಂಡ 9 ತಿಂಗಳ ಬದಲಾಗಿ 6 ತಿಂಗಳಿಗೆ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಆರೋಗ್ಯ ಸಚಿವಾಲಯದ ಹೊಸ ಮಾರ್ಗಸೂಚಿ ಪ್ರಕಾರ 9 ತಿಂಗಳು ಅಥವಾ 39 ವಾರಗಳ ಬದಲಾಗಿ 6 ತಿಂಗಳು ಅಥವಾ 26 ವಾರಗಳಲ್ಲಿ ಇದೀಗ 18-59 ವಯಸ್ಸಿನ ಫಲಾನುಭವಿಗಳು ಬೂಸ್ಟರ್ ಡೋಸ್ ಪಡೆದುಕೊಳ್ಳಬಹುದಾಗಿದೆ.
ಬೂಸ್ಟರ್ ಡೋಸ್ ಪಡೆಯಲು ಬಾಕಿ ಎಷ್ಟು?
ಕೋವಿಡ್ ಮುನ್ನೆಚ್ಚರಿಕೆ ಡೋಸ್ ಪಡೆದುಕೊಳ್ಳಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10,21,823 ಮಂದಿ ಸಾರ್ವಜನಿಕರು ಲಸಿಕೆ ಪಡೆದುಕೊಳ್ಳಲು ಬಾಕಿ ಇದ್ದಾರೆ. ಅದೇ ರೀತಿ, 7,360 ಮಂದಿ ಮುಂಚೂಣಿ ಕಾರ್ಯಕರ್ತರು, 19,384 ಮಂದಿ ಆರೋಗ್ಯ ಕಾರ್ಯಕರ್ತರು ಬೂಸ್ಟರ್ ಡೋಸ್ ಪಡೆದುಕೊಂಡಿಲ್ಲ. ಒಟ್ಟಾರೆ 10,48,567 ಮಂದಿ ಈಗಾಗಲೇ ಬೂಸ್ಟರ್ ಡೋಸ್ ಪಡೆದುಕೊಂಡಿಲ್ಲ.
ಅಧಿಕೃತ ಸೂಚನೆ ಬಂದ ಕೂಡಲೇ ಕ್ರಮ: 8 ರಿಂದ 59 ವಯಸ್ಸಿನವರಿಗೆ ಉಚಿತ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಈ ಕುರಿತಂತೆ ಅಧಿಕೃತ ಅಧಿಸೂಚನೆ ಬಂದ ಕೂಡಲೇ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯ 60 ವರ್ಷ ಮೇಲ್ಪಟ್ಟರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದೆ. ಮುಂಬರುವ ಅಪಾಯ ತಡೆಯುವ ನಿಟ್ಟಿನಲ್ಲಿ ಅರ್ಹರು ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಮುಂದೆಬರಬೇಕು. – ಡಾ| ರಾಜೇಶ್, ಆರೋಗ್ಯ ಇಲಾಖೆ ಆರ್‌ಸಿಎಚ್ ಅಧಿಕಾರಿ
ಬೂಸ್ಟರ್ ಡೋಸ್ ಪಡೆದವರೆಷ್ಟು?
ವಿಭಾಗ ಸಂಖ್ಯೆ
ಆರೋಗ್ಯ ಕಾರ್ಯಕರ್ತರು 22,435
ಮುಂಚೂಣಿ ಕಾರ್ಯಕರ್ತರು 8,883
18ರಿಂದ 44 ವರ್ಷ 3,718
45ರಿಂದ 60 ವರ್ಷ 2,278
60 ವರ್ಷ ಮೇಲ್ಪಟ್ಟು 65,729
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.