ನಡು ರಸ್ತೆಯಲ್ಲಿ ಬಸ್‌ ನಿಲ್ಲಿಸಿ ಸಂಚಾರ ನಿಯಮ ಉಲ್ಲಂಘನೆ: ಕ್ರಮಕ್ಕೆ ಆಗ್ರಹ


Team Udayavani, Jun 22, 2019, 5:00 AM IST

10

ಮಹಾನಗರ: ನಗರದಲ್ಲಿ ಬಹುತೇಕ ಸಿಟಿ ಬಸ್‌ಗಳನ್ನು ಚಾಲಕರು ಬಸ್‌ ಬೇ ಒಳಗಡೆ ನಿಲ್ಲಿಸದೆ ನಡು ರಸ್ತೆ ಯಲ್ಲಿ ನಿಲ್ಲಿಸಿ ಇತರ ವಾಹನಗಳ ಸಂಚಾರಕ್ಕೆ ತಡೆ ಉಂಟು ಮಾಡುತ್ತಿದ್ದಾರೆ; ಕೆಲವು ಮಂದಿ ನಿರ್ವಾಹಕರು ಮಹಿಳಾ ಪ್ರಯಾಣಿಕರ ಜತೆ ಅನುಚಿತವಾಗಿ ವರ್ತಿಸುತ್ತಾರೆ; ಮಹಿಳಾ ಮೀಸಲು ಸೀಟು ಬಿಟ್ಟು ಕೊಡಿಸುವಲ್ಲಿ ಅಸಡ್ಡೆ ನೀತಿ ಅನುಸರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಶುಕ್ರವಾರ ನಡೆದ ಪೊಲೀಸ್‌ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ದೂರು ನೀಡಿದರು. ನಗರದ ಸಂಚಾರ ಸಮಸ್ಯೆಯನ್ನು ಸುಧಾರಿಸಲು ಟ್ರಾಫಿಕ್‌ ಪೊಲೀಸರು ಕ್ರಮ ಆರಂಭಿಸಿದ್ದು, ಅದನ್ನು ಮುಂದು ವರಿ ಸಲಾಗುವುದು ಎಂದು ಸಾರ್ವ ಜನಿಕರ ಕರೆಗಳನ್ನು ಸ್ವೀಕರಿಸಿ ಉತ್ತರಿಸಿದ ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದರು.

ದೂರುಗಳಿದ್ದರೆ ವಾಟ್ಸಪ್‌ಗೆ ಕಳುಹಿಸಿ
ಸಾರ್ವಜನಿಕರು ತಮ್ಮ ದೂರುಗಳನ್ನು ವಾಟ್ಸಪ್‌ ಮೂಲಕ ಪೊಲೀಸರ ಗಮನಕ್ಕೆ ತನ ಬಹುದು. ತಮ್ಮ ಅಹವಾಲುಗಳನ್ನು ಹೇಳಿಕೊಳ್ಳಲು ಶುಕ್ರವಾರದ ಫೋನ್‌ ಇನ್‌ ಕಾರ್ಯಕ್ರಮವನ್ನೇ ಕಾಯುವ ಆಗತ್ಯವಿಲ್ಲ, ಯಾವಾಗ ಬೇಕಾದರೂ ವಾಟ್ಸಪ್‌ ನಂಬರ್‌ 9480802300 ನಂಬ್ರಕ್ಕೆ ಕಳುಹಿಸ ಬಹುದು ಎಂದರು.

ಮಣ್ಣಗುಡ್ಡೆ ಪರಿಸರದಲ್ಲಿ ಫುಟ್‌ಪಾತ್‌ನಲ್ಲಿ ಹೂವು ಮಾರುವವರು ವ್ಯಾಪಾರ ಮಾಡುತ್ತಿದ್ದು, ಪಾದಚಾರಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ದೂರಿ ದರು. ಹೂವು ಮಾರಾಟಗಾರರನ್ನು ಫುಟ್‌ ಪಾತ್‌ನಿಂದ ತೆರವು ಮಾಡಲು ಕ್ರಮ ವಹಿಸಲಾಗುವುದು ಎಂದು ಕಮಿಷನರ್‌ ತಿಳಿಸಿದರು.

ಕುತ್ತಾರುಪದವು ಶಾಲೆಯ ಸಮೀಪ ಹೊಸ ತಾಗಿ ಬಾರ್‌ ಆರಂಭಗೊಂಡಿದೆ ಎಂಬ ದೂರಿಗೆ ಪ್ರತಿಕ್ರಿಯಿಸಿದ ಕಮಿ ಷನರ್‌ ಸಂದೀಪ್‌ ಪಾಟೀಲ್‌, ಈ ಬಗ್ಗೆ ಅಬಕಾರಿ ಇಲಾಖೆಯ ಗಮನಕ್ಕೆ ತರಲಾಗುವುದು ಎಂದರು.

ಕೊಟ್ಟಾರ ಚೌಕಿಯಿಂದ ಮಹೀಂದ್ರಾ ಶೋರೂಂ ತನಕ ರಸ್ತೆಯಲ್ಲಿ ಬೀದಿ ನಾಯಿಗಳ ಕಾಟ ಜಾಸ್ತಿಯಾಗಿದೆ. ರಾತ್ರಿ ನಿದ್ರಿಸಲು ಬಿಡುವುದಿಲ್ಲ; ಕಸವನ್ನು ಎಲ್ಲೆಂದರಲ್ಲಿ ಹಾಕಿ ಚೆಲ್ಲಾಪಿಲ್ಲಿ ಮಾಡುತ್ತಿವೆ ಎಂದು ನಾಗರಿಕರೊಬ್ಬರು ದೂರಿದರು. ಈ ಬಗ್ಗೆ ಮಹಾನಗರ ಪಾಲಿಕೆಯ ಗಮನಕ್ಕೆ ತರಲಾಗುವುದು ಎಂದು ಕಮಿಷನರ್‌ ತಿಳಿಸಿದರು.

ತೊಕ್ಕೊಟ್ಟು ಮೇಲ್ಸೇತುವೆ: ಸಮಸ್ಯೆ ಬಗ್ಗೆ ಅಧ್ಯಯನ
ತೊಕ್ಕೊಟ್ಟು ಮೇಲ್ಸೇತುವೆ ಬಳಿ ಉಳ್ಳಾಲ ತಿರುವು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಇದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಅಹವಾಲು ಹೇಳಿಕೊಂಡರು. ಅಲ್ಲಿನ ಸಮಸ್ಯೆ ನಿವಾರಿಸುವ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ಕಮಿಷನರ್‌ ತಿಳಿಸಿದರು.

ಇದು 117ನೇ ಫೋನ್‌ ಇನ್‌ ಕಾರ್ಯಕ್ರಮವಾಗಿದ್ದು, ಒಟ್ಟು 23 ಕರೆಗಳು ಬಂದವು. ಡಿಸಿಪಿಗಳಾದ ಹನುಮಂತರಾಯ ಮತ್ತು ಲಕ್ಷ್ಮೀ ಗಣೇಶ್‌, ಎಸಿಪಿ ಮಂಜುನಾಥ ಶೆಟ್ಟಿ, ಟ್ರಾಫಿಕ್‌ ಇನ್‌ಸ್ಪೆಕ್ಟರ್‌ಗಳಾದ ಶಿವಪ್ರಕಾಶ್‌, ಅಶೋಕ್‌ ಕುಮಾರ್‌ ಮತ್ತು ಸಿ.ಎನ್‌. ದಿವಾಕರ್‌, ಎಎಸ್‌ಐ ಪಿ. ಯೋಗೇಶ್ವರನ್‌, ಹೆಡ್‌ಕಾನ್‌ಸ್ಟೆಬಲ್‌ ಪುರುಷೋತ್ತಮ ಮೊದ ಲಾ ದ ವರು ಉಪಸ್ಥಿತರಿದ್ದರು.

ಪ್ರಮುಖ ದೂರುಗಳು
ಸುರತ್ಕಲ್‌ ಜಂಕ್ಷನ್‌ನಲ್ಲಿ ಕಾಂಪ್ಲೆಕ್ಸ್‌ ಒಂದರ ಬಳಿ ವಾಹನಗಳನ್ನು ಅಡ್ಡಾ ದಿಡ್ಡಿ ನಿಲ್ಲಿಸಿ ಅಲ್ಲಿರುವ ಮನೆಗಳ ಮಂದಿಗೆ ಹೊರಗೆ ಹೋಗಲಾರದ ಸ್ಥಿತಿ ನಿರ್ಮಾಣವಾಗಿದೆ.

 ಬೈಕಂಪಾಡಿಯಲ್ಲಿ ಯು- ಟರ್ನ್ ಇರುವ ಕಡೆ ರಸ್ತೆಯಲ್ಲಿ ಗುಂಡಿಗಳಿದ್ದು, ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ.

ಬೈಕಂಪಾಡಿ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ರಸ್ತೆ ಬದಿ ಉದ್ದಕ್ಕೆ 50- 60ರಷ್ಟು ಲಾರಿಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ.

ಸುರತ್ಕಲ್‌ನ ಎನ್‌ಐಟಿಕೆ, ರಾಘವೇಂದ್ರ ಮಠ ಮತ್ತು ಹೊನ್ನಕಟ್ಟೆ ಜಂಕ್ಷನ್‌ನಲ್ಲಿದ್ದ ಬಸ್‌ ಶೆಲ್ಟರ್‌ಗಳನ್ನು ತೆರವು ಮಾಡಿದ್ದು, ಬಸ್‌ಗಳು ರಸ್ತೆ ಮಧ್ಯ ನಿಲ್ಲುತ್ತವೆ.

 ಬೈಕಂಪಾಡಿಯಿಂದ ಕುಳಾಯಿ ತನಕ, ಹೊನ್ನಕಟ್ಟೆಯಿಂದ ಸುರತ್ಕಲ್‌ ತನಕ ಬೀದಿ ದೀಪ ಉರಿಯುತ್ತಿಲ್ಲ.

 ಹಳೆಯಂಗಡಿಯಲ್ಲಿ ರೈಲ್ವೇ ಗೇಟ್‌ ಬಳಿ ರಸ್ತೆಯಲ್ಲಿ ಹೊಂಡ ನಿರ್ಮಾಣ ಆಗಿದ್ದು, ವಾಹನ ಸಂಚಾರ ದುಸ್ತರವಾಗಿದೆ.

 ಬೆಂದೂರ್‌ನ ಕುಲಾಸೊ ಆಸ್ಪತ್ರೆ ಬಳಿ ಇದ್ದ ರಸ್ತೆ ಹಂಪ್‌ ನವೀಕರಿಸಬೇಕು.

ಕಿನ್ನಿಗೋಳಿಯಲ್ಲಿ ಮುಖ್ಯ ರಸ್ತೆ ವಿಸ್ತರಣೆ ಮಾಡಿದ ಬಳಿಕ ಎರಡೂ ಬದಿ ವಾಹನ ನಿಲುಗಡೆ ಮಾಡಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗಿದೆ.

 ಮಣ್ಣಗುಡ್ಡೆ ದುರ್ಗಾ ಮಹಲ್‌ ಬಳಿ ರಸ್ತೆಗೆ ರಿಫ್ಲೆಕ್ಟರ್‌ ಬೇಕು.

 ದೇರಳಕಟ್ಟೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಅಲ್ಲಿ ಹಂಪ್‌ ನಿರ್ಮಾಣ ಮಾಡ ಬೇಕು.

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.