By Election; ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ: ಶಾಸಕ ಭರತ್ ಶೆಟ್ಟಿ
Team Udayavani, Oct 21, 2024, 11:14 AM IST
ಮಂಗಳೂರು: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಸೋಮವಾರ (ಅ.21) ನಡೆಯುತ್ತಿದ್ದು, ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿರುವ ಬೂತ್ ನಲ್ಲಿ ಮತ ಚಲಾಯಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಹಾಗೂ ಸದಸ್ಯರು ಹಾಜರಿದ್ದು, ಶಾಸಕರೊಂದಿಗೆ ಮತ ಚಲಾಯಿಸಿದರು.
ಈ ಸಂದರ್ಭ ಮಾತನಾಡಿದ ಡಾ.ಭರತ್ ಶೆಟ್ಟಿ ವೈ ಅವರು, ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ ಸ್ಪರ್ಧಿಸುತ್ತಿದ್ದು ಅತ್ಯಧಿಕ ಮತದೊಂದಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಕೋಟ ಶ್ರೀನಿವಾಸ ಪೂಜಾರಿಯವರು ಬಿಜೆಪಿ ಸರಕಾರದ ಅವಧಿಯಲ್ಲಿ ಶಾಸಕರಾಗಿ, ಸಚಿವರಾಗಿ ಉಭಯ ಜಿಲ್ಲೆಯಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ.
ವಿಶೇಷವಾಗಿ ಗ್ರಾಮ ಪಂಚಾಯತ್ ಜಿಲ್ಲಾ ಪಂಚಾಯತ್ ವ್ಯಾಪ್ತಿಗಳಲ್ಲಿ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಅನುದಾನಗಳನ್ನ ಬಿಡುಗಡೆ ಮಾಡಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಕೊಡುಗೆ ನೀಡಿದ್ದಾರೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.