ಕೃಷ್ಣ ಅಳಿಯ ನಾಪತ್ತೆ ಪ್ರಕರಣ: ಶೋಧ ಕಾರ್ಯಕ್ಕೆ ಸೇನಾ ಹೆಲಿಕಾಪ್ಟರ್


Team Udayavani, Jul 30, 2019, 8:44 AM IST

SIDD

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅಳಿಯ ವಿ.ಜಿ. ಸಿದ್ದಾರ್ಥ್‌ ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದು, ತೀವ್ರ ಶೊಧ ಕಾರ್ಯ ನಡೆಯುತ್ತಿದೆ. ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್‌ ಬಳಸುವ ಬಗ್ಗೆಚಿಂತನೆ ನಡೆಯುತ್ತಿದೆ ಎಂದು ವರದಿಯಾಗಿದೆ.

ವಿ.ಜಿ. ಸಿದ್ದಾರ್ಥ್‌ ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದರು.

ಜಪ್ಪಿನ ಮೊಗರು, ಅಳಿವೆ ಬಾಗಿಲು, ಉಳ್ಳಾಲ ಸುತ್ತಮುತ್ತ ತೀವ್ರ ಶೋಧ
ಕಾರ್ಯ ನಡೆಯುತ್ತಿದೆ. 30ಕ್ಕೂ ಹೆಚ್ಚು ಬೋಟ್‌ ಗಳಲ್ಲಿ 300ಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಹುಡುಕಾಟ ನಡೆಯುತ್ತಿದೆ. ಸ್ಥಳಕ್ಕೆ ಎನ್ ಡಿ ಆರ್ ಎಫ್ ತಂಡ ಆಗಮಿಸುತ್ತಿದೆ.

ಕಾರಿನ ಚಾಲಕ ಪೊಲೀಸರಿಗೆ ನೀಡಿದ ಮಾಹಿತಿಯಂತೆ ಸಿದ್ದಾರ್ಥ್ ಬೆಂಗಳೂರಿನಿಂದ ಮಂಗಳೂರಿಗೆಂದು ಹೇಳಿ ಚಾಲಕ ಮತ್ತು ಇಬ್ಬರ ಜತೆಗೂಡಿ ಕಾರಿನಲ್ಲಿ ಹೊರಟಿದ್ದರು. ಪಂಪ್‌ವೆಲ್‌ ತಲುಪಿದಾಗ ಜತೆಗಿದ್ದ ಇಬ್ಬರು ಕಾರಿನಿಂದ ಇಳಿದಿದ್ದರು. ಬಳಿಕ ಮಾಲಕನ ಸೂಚನೆಯಂತೆ ಚಾಲಕ ಕಾರನ್ನು ಕಾಸರಗೋಡು ಹೆದ್ದಾರಿಯತ್ತ ತಿರುಗಿಸಿದ್ದನು. ನೇತ್ರಾವತಿ ಸೇತುವೆ ಬಳಿ ತಲುಪುತ್ತಿದ್ದಂತೆ ಕಾರನ್ನು ಎಡ ಬದಿಯಲ್ಲಿರುವ ಕಂರ್ಬಿಸ್ಥಾನದ ರಸ್ತೆಯಲ್ಲಿ ಚಲಾಯಿಸಲು ಹೇಳಿದ್ದರು. ಕೆಲವು ಮೀಟರ್‌ ಮುಂದೆ ಸಾಗಿದ ಬಳಿಕ ಕಾರನ್ನು ನಿಲ್ಲಿಸಲು ಹೇಳಿ ಮೊಬೈಲ್‌ನಲ್ಲಿ ಮಾತನಾಡುತ್ತ ಸ್ವಲ್ಪ ಮುಂದಕ್ಕೆ ಹೋದವರು ಬಳಿಕ ನಾಪತ್ತೆಯಾಗಿದ್ದಾರೆ. ಮೊಬೈಲ್‌ಗೆ ಕರೆ ಮಾಡಿದರೆ ಸ್ವಿಚ್‌ ಆಫ್ ಸಂದೇಶ ಬರುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸಿದ್ದಾರ್ಥ್‌ ಅವರ ಕಾರು ಚಾಲಕ ಬಸವರಾಜು ಕಂಕನಾಡಿ ಪೊಲೀಸ್‌ ಠಾನೆಯಲ್ಲಿ ದೂರು ದಾಖಲಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ, ಶಾಸಕ ಯು.ಟಿ ಖಾದರ್‌ ಆಗಮಿಸಿದ್ದಾರೆ. ಅಗ್ನಿಶಾಮಕ ದಳ, ತಣ್ಣೀರುಬಾವಿಯಿಂದ ಮುಳುಗು ತಜ್ಞರು ಆಗಮಿಸಿದ್ದು ನೇತ್ರಾವತಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

 

 

ಟಾಪ್ ನ್ಯೂಸ್

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

de

Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು

4

Udupi: ಗಾಂಜಾ ಮಾರಾಟ; ಮೂವರ ಬಂಧನ

2

Kundapura: ವ್ಯಕ್ತಿ ನಾಪತ್ತೆ; 25 ದಿನ ಕಳೆದರೂ ಸಿಗದ ಸುಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.