Mangalore: ಶರಣ್ ಪಂಪ್ವೆಲ್ ವಿರುದ್ಧದ ಪ್ರಕರಣಕ್ಕೆ ತಡೆ
Team Udayavani, Oct 20, 2023, 12:16 AM IST
ಬೆಂಗಳೂರು: ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತಲಿನ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಕೇಸರಿ ಧ್ವಜಗಳನ್ನು ಕಟ್ಟಿದ್ದಕ್ಕೆ ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ರದ್ದುಕೋರಿ ಶರಣ್ ಪಂಪ್ವೆಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ನೇತೃತ್ವದ ರಜಾ ಕಾಲದ ಏಕಸದಸ್ಯ ನ್ಯಾಯಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿತು. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್ವೆಲ್ ಹಾಗೂ ಇತರರು ಕೇಸರಿ ಧ್ವಜಗಳನ್ನು ಕಟ್ಟಿದ್ದರು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪಿಎಸ್ಐ ನೀಡಿದ ದೂರಿನ ಆಧಾರದ ಮೇಲೆ ಶರಣ್ ಪಂಪ್ವೆಲ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.