
ಸೆಂಟ್ರಲ್ ಮಾರ್ಕೆಟ್ ಕಟ್ಟಡ ನೆಲಸಮ; ಮುಂದುವರಿದ ಕಾರ್ಯಾಚರಣೆ
Team Udayavani, Apr 16, 2022, 10:48 AM IST

ಸ್ಟೇಟ್‌ಬ್ಯಾಂಕ್: ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಕೆಡಹಲು ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯಿಂದ ಆರಂಭಗೊಂಡ ಹಳೆಯ ಮಾರ್ಕೆಟ್‌ನ ಬಾಕಿ ಇರುವ ಕಟ್ಟಡವನ್ನು ಕೆಡಹುವ ಕಾರ್ಯಾಚರಣೆ ಶುಕ್ರವಾರವೂ ದಿನಪೂರ್ತಿ ಮುಂದುವರಿದಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ ಶುಕ್ರವಾರ ಸಂಜೆ ವೇಳೆಗೆ ಸುಮಾರು ಶೇ.80ರಷ್ಟು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಶನಿವಾರ ವೇಳೆಗೆ ಪೂರ್ತಿ ಕಟ್ಟಡ ನೆಲಸಮಗೊಳಿಸುವ ಕಾರ್ಯ ಪೂರ್ಣಗೊಳ್ಳಲಿದೆ. ಬಳಿಕ ಕಟ್ಟಡ ತ್ಯಾಜ್ಯದಿಂದ ಕಲ್ಲು, ಕಬ್ಬಿಣ ಸಹಿತ ಪ್ರತ್ಯೇಕಿಸುವ ಕೆಲಸ ನಡೆಯಲಿದೆ. ಅನಂತರ ಆ ತ್ಯಾಜ್ಯವನ್ನು ಈಗಿರುವ ಸ್ಥಳದಿಂದ ವಿಲೇವಾರಿ ಮಾಡಲಾಗುತ್ತದೆ. ಈ ಪ್ರಕ್ರಿಯೆ ನಡೆಸುವುದು ಗುತ್ತಿಗೆದಾರ ಜವಾಬ್ದಾರಿಯಾಗಲಿದೆ. ಹಳೆಯ ಸೆಂಟ್ರಲ್ ಮಾರ್ಕೆಟ್ ಕೆಡಹುವ ಕಾರ್ಯಾಚರಣೆ ಪೂರ್ಣವಾದ ಬಳಿಕ ಅದೇ ಸ್ಥಳದಲ್ಲಿ ಹೊಸ ಮಾರುಕಟ್ಟೆಯನ್ನು ಸ್ಮಾರ್ಟಸಿಟಿ ಯೋಜನೆಯಡಿ ನಿರ್ಮಿಸಲಾಗುತ್ತದೆ. ಹೊಸ ಮಾರುಕಟ್ಟೆ ನಿರ್ಮಾಣಕ್ಕೆ ಟೆಂಡರ್ ಕೂಡ ಅಂತಿಮವಾಗಿದೆ.
ಸೆಂಟ್ರಲ್ ಮಾರ್ಕೆಟ್ ಕಟ್ಟಡಕ್ಕೆ (ತರಕಾರಿ/ ಹಣ್ಣು ಹಂಪಲು ಮತ್ತು ಮೀನು/ ಮಾಂಸದ ಮಾರ್ಕೆಟ್‌ನ 2 ಕಟ್ಟಡಗಳು) ಸುಮಾರು 62 ವರ್ಷಗಳ ಇತಿಹಾಸವಿದೆ. ಹಳೆಯದಾದ 2020 ಎ. 2ರಂದು ಮಾರ್ಕೆಟ್‌ನಲ್ಲಿ ವ್ಯಾಪಾರ ಚಟುವಟಿಕೆಗಳನ್ನು ನಿಷೇಧಿಸಿ, ಶಿಥಿಲವಾದ ಹಳೆಯ ಕಟ್ಟಡವನ್ನು ಕೆಡಹಲು ನಿರ್ಧರಿಸಿ ಎ. 4ರಂದು ಸಾರ್ವಜನಿಕ ಪ್ರಕಟನೆ ಹೊರಡಿಸಿತ್ತು. ಕೆಡಹುವ ಕಾಮಗಾರಿಯನ್ನೂ ಆರಂಭಿಸಲಾಗಿತ್ತು. ಇದನ್ನು ಆಕ್ಷೇಪಿಸಿ ಕೆಲವು ಮಂದಿ ವ್ಯಾಪಾರಿಗಳು ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದ ಹಿನ್ನೆಲೆಯಲ್ಲಿ ಕಳೆದ ವರ್ಷ ಮೇ 29ರಂದು ಕಾಮಗಾರಿ ನಿಲ್ಲಿಸಲಾಗಿತ್ತು. ಇದೀಗ ನ್ಯಾಯಾಲಯ ತಡೆಯಾಜ್ಞೆ ತೆರವು ಮಾಡಿದ ಹಿನ್ನೆಲೆಯಲ್ಲಿ ಪಾಲಿಕೆಯಿಂದ ಮತ್ತೆ ಕಾರ್ಯಾಚರಣೆ ಶುರು ಮಾಡಲಾಗಿದೆ.
ಗುತ್ತಿಗೆದಾರರಿಂದ ಕಟ್ಟಡ ತ್ಯಾಜ್ಯ ವಿಲೇವಾರಿ
ಸೆಂಟ್ರಲ್ ಮಾರುಕಟ್ಟೆ ಕೆಡಹಲು ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಹಿನ್ನೆಲೆಯಲ್ಲಿ ಹಳೆ ಮಾರ್ಕೆಟ್ ಕೆಡಹುವ ಕಾರ್ಯಾಚರಣೆ ಆರಂಭಗೊಂಡಿದೆ. ಕಟ್ಟಡ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಅದರಂತೆ ಆ ತ್ಯಾಜ್ಯವನ್ನು ಅವರೇ ವಿಲೇವಾರಿ ಮಾಡುತ್ತಾರೆ. – ಅಕ್ಷಯ್ ಶ್ರೀಧರ್, ಮನಪಾ ಆಯುಕ್ತರು
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.