ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ
Team Udayavani, Jun 2, 2020, 10:18 AM IST
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಂಗಳವಾರದಂದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಇಂದು ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ಮಳೆಯಾಗಲಿದೆ, ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವನ್ನು ಸಮರ್ಪಕವಾಗಿ ಎದುರಿಸಲು (ರಾಷ್ಟ್ರೀಯ ವಿಪತ್ತು ಪರಿಹಾರ ತಂಡ ಜೂ.4 ರಂದು) ಜಿಲ್ಲೆಗೆ ಆಗಮಿಸಲಿದೆ.
ಕೇರಳಕ್ಕೆ ಮುಂಗಾರು ಜೂನ್ ಒಂದರಂದು ಪ್ರವೇಶಿಸಿದ್ದು, ಈ ಚಂಡಮಾರುತದಿಂದ ಕರ್ನಾಟಕ ಕರಾವಳಿಯ ಮುಂಗಾರಿನ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.