ಕಡಲನಗರಿಯಲ್ಲಿ ಕರಾವಳಿ ಉತ್ಸವ ; ಆಕರ್ಷಣೆ ಪಡೆಯಲಿದೆ ನದಿ ಉತ್ಸವ

ಎರಡು ವರ್ಷಗಳ ಬಳಿಕ ಆಯೋಜನೆಗೆ ಚಿಂತನೆ

Team Udayavani, Oct 21, 2022, 11:39 AM IST

9

ಮಹಾನಗರ: ಕರಾವಳಿ ಕೇಂದ್ರೀಕೃತವಾಗಿ ಮಂಗಳೂರಿನಲ್ಲಿ ನಡೆಯುವ ಬಹುನಿರೀಕ್ಷಿತ ಕರಾವಳಿ ಉತ್ಸವ ಎರಡು ವರ್ಷಗಳ ಬಳಿಕ ಆಯೋಜನೆಗೊಳ್ಳಲಿದೆ. ವಿಶೇಷ ಅಂದರೆ ಈ ಬಾರಿ “ನದಿ ಉತ್ಸವ’ ವನ್ನೂ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ.

2019-20ನೇ ವರ್ಷದ ಕರಾವಳಿ ಉತ್ಸವ ವಿಜೃಂಭಣೆಯಿಂದ ನಡೆದಿತ್ತು. ಆದರೆ ಕೋವಿಡ್‌ ಕಾರಣದಿಂದಾಗಿ ಎರಡು ವರ್ಷಗಳಿಂದ ಕರಾವಳಿ ಉತ್ಸವವನ್ನು ರದ್ದುಗೊಳಿಸಲಾಗಿತ್ತು.

ಇದೀಗ ಈ ವರ್ಷ ಕೋವಿಡ್‌ ಆತಂಕ ಇರದ ಹಿನ್ನೆಲೆಯಲ್ಲಿ ಡಿಸೆಂಬರ್‌ 23ರಿಂದ ಜನವರಿ 1ರ ವರೆಗೆ ಉತ್ಸವ ಆಯೋಜನೆಗೊಳ್ಳುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರಥಮ ಹಂತದ ಸಭೆ ನಡೆಸಲಾಗಿದೆ. ಉಪ ಸಮಿತಿಗಳ ರಚನೆ ಹಾಗೂ ಕಾರ್ಯಕ್ರಮದ ರೂಪರೇಖೆಗಳನ್ನು ಇನ್ನಷ್ಟೇ ಸಿದ್ಧಪಡಿಸಬೇಕಿದೆ.

ಈ ಬಾರಿ ತಣ್ಣೀರುಬಾವಿ ಕಡಲ ತೀರ ಪ್ರಧಾನ ವೇದಿಕೆಯನ್ನಾಗಿಸಿ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ. ಅಲ್ಲಿಯೇ ಆಹಾರ ಮೇಳ ಆಯೋಜನೆಗೆ ನಿರ್ಧರಿಸಲಾಗಿದೆ. ಕದ್ರಿ ಪಾರ್ಕ್‌ ಸೇರಿದಂತೆ ಇತರ ಪ್ರಮುಖ ಸ್ಥಳಗಳಲ್ಲಿ ಇತರೇ ಕಾರ್ಯಕ್ರಮ ಮೇಳೈಸಲಿದೆ.

ವ್ಯಾಪಾರ ವಹಿವಾಟಿಗೆ ಉತ್ತೇಜನ

ಕರಾವಳಿ ಉತ್ಸವ ಆರಂಭವಾದರೆ ಸ್ಥಳೀಯ ವ್ಯಾಪಾರ ವಹಿವಾಟಿಗೆ ಉತ್ತೇಜನ ಸಿಗುವ ನಿರೀಕ್ಷೆ ಇದೆ. ಒಂಬತ್ತು ದಿನಗಳ ಕಾಲ ಕರಾವಳಿ ಉತ್ಸವ ನಡೆಯುತ್ತದೆ. ಸಾಮಾನ್ಯವಾಗಿ ಸುಮಾರು ಒಂದು ತಿಂಗಳಿಗೂ ಹೆಚ್ಚು ದಿನ ವಸ್ತು ಪ್ರದರ್ಶನ ನಡೆಯುತ್ತದೆ.

ಕರಾವಳಿ ಉತ್ಸವ ಮೈದಾನದಲ್ಲಿ ಪ್ರತೀ ವರ್ಷ ನಡೆಯುವ ವಸ್ತು ಪ್ರದರ್ಶನದಲ್ಲಿ ವಿವಿಧ ಜಿಲ್ಲೆ/ ರಾಜ್ಯಗಳ ಹತ್ತಾರು ಮಳಿಗೆಗಳು ಇರುತ್ತದೆ. ಇದನ್ನು ವೀಕ್ಷಿಸಲೆಂದು ಪ್ರತೀ ದಿನ ಸಾವಿರಾರು ಮಂದಿ ಉತ್ಸವ ಮೈದಾನಕ್ಕೆ ಆಗಮಿಸುತ್ತಾರೆ. ಆಗಮಿಸಿದವರು ಮಳಿಗೆಗಳಿಗೆ ಭೇಟಿ ನೀಡುತ್ತಾರೆ. ಆರ್ಥಿಕ ಚೇತರಿಕೆಯ ನಿಟ್ಟಿನಲ್ಲಿ ಕರಾವಳಿ ಉತ್ಸವ ವೇದಿಕೆಯಾಗುವ ಸಾಧ್ಯತೆ ಇದೆ.

ಜನವರಿಯಲ್ಲಿ ಫಲಪುಷ್ಪ ಪ್ರದರ್ಶನ

ಕರಾವಳಿ ಉತ್ಸವದಂತೆಯೇ ಆಕರ್ಷಣೆ ಪಡೆದ ಫಲ ಪುಷ್ಪ ಪ್ರದರ್ಶನ ವನ್ನು ನಡೆಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.

ನಗರದ ಕದ್ರಿ ಪಾರ್ಕ್‌ನಲ್ಲಿ ಜನವರಿ ತಿಂಗಳಿನಲ್ಲಿ ಫಲ ಪುಷ್ಪ ಪ್ರದರ್ಶನ ನಡೆಯಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪ್ರಥಮ ಹಂತದ ಸಭೆ ನಡೆದಿದ್ದು, ಪ್ರದರ್ಶನ ಆಯೋಜನೆಗೆ ನಿರ್ಧರಿಸಲಾಗಿದೆ.

ನದಿ ಉತ್ಸವ ಆಕರ್ಷಣೆ

ಎರಡು ವರ್ಷಗಳ ಹಿಂದೆ ಮಂಗಳೂರಿನ ಕೂಳೂರು, ಬಂಗ್ರಕೂಳೂರು ಮತ್ತು ಸುಲ್ತಾನ್‌ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಆಯೋಜಿಸಿ ಆಕರ್ಷಣೆ ಪಡೆದುಕೊಂಡಿತ್ತು. ಕಯಾಕಿಂಗ್‌ ದೋಣಿ ಸ್ಪರ್ಧೆ, ಬೋಟ್‌ ರೇಸ್‌, ಫೆರ್ರಿ, ವಿಂಡ್‌ ಸರ್ಫಿಂಗ್‌ ಕಾರ್ಯಕ್ರಮ ನಡೆದಿತ್ತು. ಅದೇ ರೀತಿ ಈ ಬಾರಿಯೂ ನದಿ ಉತ್ಸವ ಆಯೋಜಿಸುವ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತಿದೆ. ನದಿಗಳತ್ತ ಜನರನ್ನು ಆಕರ್ಷಿಸಲು, ನದಿ ಪ್ರೀತಿ ಹೆಚ್ಚಿಸುವುದು ಈ ಉತ್ಸವದ ಮುಖ್ಯ ಉದ್ದೇಶ.

ವಿಜೃಂಭಣೆಯಿಂದ ನಡೆಸಲು ನಿರ್ಧಾರ: ಈ ಬಾರಿ ಡಿಸೆಂಬರ್‌ ಅಂತ್ಯಕ್ಕೆ ಕರಾವಳಿ ಉತ್ಸವ ನಡೆಯಲಿದೆ. ಜತೆಗೆ ನದಿ ಉತ್ಸವವನ್ನೂ ಆಯೋಜನೆ ಮಾಡಲು ಮಾತುಕತೆ ನಡೆಯುತ್ತಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ವರ್ಷ ಕರಾವಳಿ ಉತ್ಸವ ನಡೆದಿರಲಿಲ್ಲ. ಆದರೆ ಈ ವರ್ಷ ವಿಜೃಂಭಣೆಯಿಂದ ನಡೆಸಲು ನಿರ್ಧರಿಸಿದ್ದೇವೆ. ಉತ್ಸವಕ್ಕೆ ಸಂಬಂಧಪಟ್ಟಂತೆ ಸದ್ಯದಲ್ಲೇ ರೂಪರೇಖೆಗಳು ತಯಾರಾಗಲಿವೆ. –ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.