ಸಂಚಾರ ಪೊಲೀಸರಿಗೆ “ಕೋಬ್ರಾ’: ತುರ್ತು ಸಂದರ್ಭ ಸಂಚಾರ ನಿರ್ವಹಣೆಗೆ ಅನುಕೂಲ
Team Udayavani, May 18, 2023, 7:42 AM IST
ಮಂಗಳೂರು: ತುರ್ತು ಸಂಚಾರ ನಿರ್ವಹಣೆಗೆ ನೆರವಾಗುವ “ಕೋಬ್ರಾ’ 4 ದ್ವಿಚಕ್ರ ವಾಹನಗಳನ್ನು ಮಂಗಳೂರಿನ ಸಂಚಾರ ಪೂರ್ವ ಮತ್ತು ಪಶ್ಚಿಮ ಪೊಲೀಸ್ ಠಾಣೆಗಳಿಗೆ ಮಂಗಳವಾರ ಹಸ್ತಾಂತರಿಸಲಾಗಿದೆ.
ಅಪಘಾತ ಅಥವಾ ಇತರ ಸಂದರ್ಭಗಳಲ್ಲಿ ಸಂಚಾರ ಪೊಲೀಸರು ತುರ್ತಾಗಿ ಸ್ಥಳಕ್ಕೆ ತೆರಳಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಇದು ಸಹಕಾರಿಯಾಗಲಿದೆ.
ವಾಹನಗಳನ್ನು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಹಸ್ತಾಂತರಿಸಿದರು. ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ಉಪಸ್ಥಿತರಿದ್ದರು.
ವಿಶೇಷತೆ ಏನು ?
“ಕೋಬ್ರಾ’ ದ್ವಿಚಕ್ರ ವಾಹನಗಳಲ್ಲಿ ಸೈರನ್ ಮತ್ತು ಮೈಕ್ ವ್ಯವಸ್ಥೆ ಇರುತ್ತದೆ. ಪಾರ್ಕಿಂಗ್ ವ್ಯವಸ್ಥೆ ಸರಿಪಡಿಸಲು, ನಿಯಮ ಉಲ್ಲಂ ಸುವ ವಾಹನಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲು, ಫುಟ್‌ಪಾತ್‌ಗಳಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಇದರಿಂದ ಅನುಕೂಲವಾಗುತ್ತದೆ. ವಿಐಪಿಗಳು ಅಥವಾ ಆ್ಯಂಬುಲೆನ್ಸ್‌ಗಳ ಸಂಚಾರ ಸಂದರ್ಭ “ಗ್ರೀನ್ ಕಾರಿಡಾರ್’ಗೆ (ಮುಕ್ತ ಸಂಚಾರ) ಅವಕಾಶ ಮಾಡಿಕೊಡಲು ನೆರವಾಗುತ್ತದೆ. ಅಲ್ಲದೆ ಈ ದ್ವಿಚಕ್ರ ವಾಹನಗಳ ಮೂಲಕ ನಿರ್ದಿಷ್ಟ ಪ್ರದೇಶಗಳಲ್ಲಿ ನಿರಂತರವಾಗಿ ಸಂಚಾರ ವ್ಯವಸ್ಥೆಯ ಮೇಲೆ ನಿಗಾ ಇಟ್ಟು ಅಪಘಾತ ತಡೆಯಲು, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲು ಕೂಡ ಅನುಕೂಲವಾಗುತ್ತದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.