Mangaluru: ಚುನಾವಣ ಕರ್ತವ್ಯ ಪಾರದರ್ಶಕವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ
Team Udayavani, Mar 13, 2024, 10:30 AM IST
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ವಿವಿಧ ಕಾರ್ಯಗಳಿಗೆ ನಿಯೋಜನೆ ಗೊಂಡ ಹಲವು ತಂಡಗಳ ಅಧಿಕಾರಿ ಹಾಗೂ ಸಿಬಂದಿ ಶ್ರಮವಹಿಸಿ ತಮ್ಮ ಕರ್ತವ್ಯವನ್ನು ನಿಭಾಯಿಸಿದಲ್ಲಿ ಚುನಾ ವಣೆ ಸುಸೂತ್ರವಾಗಿ ನಡೆಯಲಿದೆ. ಸಮಸ್ಯೆ ಬಂದ ಅನಂತರ ಎಚ್ಚೆತ್ತು ಕೊಳ್ಳುವುದಕ್ಕಿಂತ ಆ ಬಗ್ಗೆ ಮೊದಲೇ ಜಾಗೃತರಾಗಿರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೆ ç ಮುಗಿಲನ್ ಎಂ.ಪಿ. ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಗಳ ಸಭಾಂಗಣದಲ್ಲಿ ಮಂಗಳವಾರ ಚುನಾವಣ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣೆಗೆ ಜಿಲ್ಲೆಯಾದ್ಯಂತ 1,876 ಮತಗಟ್ಟೆಗಳನ್ನು ಸ್ಥಾಪಿಸಲಾಗು ತ್ತಿದ್ದು, ಅಂದಾಜು 12 ಸಾವಿರ ಸಿಬಂದಿ ಅಗತ್ಯವಿದೆ, ಆ ಸಂಖ್ಯೆಯಲ್ಲಿ ಕೊರತೆಯಾಗಿದ್ದರೆ ಎಚ್.ಆರ್. ಎಂ.ಎಸ್. ತಂತ್ರಾಂಶದಲ್ಲಿ ಲಭ್ಯವಿರುವ ಅಧಿಕಾರಿ ಸಿಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸುವಂತೆ ಸೂಚಿಸಿದ ಅವರು, ಕೂಡಲೇ ಜಿಲ್ಲೆಯ ಎಲ್ಲ ಬಟವಾಡೆ ಅಧಿಕಾರಿಗಳ ಸಭೆ ನಡೆಸಿ ಆಯಾ ಇಲಾಖೆಗಳಲ್ಲಿ ಲಭ್ಯವಿರುವ ಅಧಿಕಾರಿ-ಸಿಬಂದಿಯನ್ನು ಚುನಾವಣ ಕಾರ್ಯಕ್ಕೆ ನಿಯೋಜಿಸುವಂತೆ ಮಾನವ ಸಂಪನ್ಮೂಲ ವಿಭಾಗದ ನೋಡಲ್ ಅಧಿಕಾರಿ ಹೇಮಲತಾ ಅವ ರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಚುನಾವಣೆ ಕಾರ್ಯಕ್ಕೆ ಅಗತ್ಯ ವಿರುವ ವಾಹನಗಳನ್ನು ಜಿಲ್ಲೆಯ ಪ್ರಾದೇಶಿಕ ಸಾರಿಗೆ ವಿಭಾಗದ ಅಧಿ ಕಾರಿಗಳು ವ್ಯವಸ್ಥೆ ಮಾಡಿಕೊಡಬೇಕು, ರಾಜ್ಯ ಹಾಗೂ ಕೇಂದ್ರ ಸರಕಾರದ ಇಲಾಖೆಗಳ ವಾಹನಗಳು, ವಿವಿಧ ನಿಗಮ ಹಾಗೂ ಮಂಡಳಿಗಳಲ್ಲಿರುವ ವಾಹನಗಳು, ಸರಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳುವಂತೆ ತಿಳಿಸಿದ ಅವರು, ಮಾದರಿ ನೀತಿ ಸಂಹಿತೆ ಜಾರಿಯಾದ ಕೂಡಲೇ ಚುನಾವಣ ಕರ್ತವ್ಯ ಆರಂಭವಾಗಲಿದ್ದು, ಸೆಕ್ಟರ್ ಅಧಿಕಾರಿಗಳಿಗೆ ವಾಹನಗಳನ್ನು ಆದ್ಯತೆ ಮೇರೆಗೆ ಒದಗಿಸಬೇಕು ಎಂದವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ್ ಕೆ. ಅವರು ವೀಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿದರು. ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್ ಜಿ., ಮಂಗಳೂರು ಮನಪಾ ಆಯುಕ್ತ ಆನಂದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ಸವಾರ: ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್
Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.