ಮಂಗಳೂರು: ಜಿ.ಪಂ.ಸದಸ್ಯೆ ಸೇರಿ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆ
Team Udayavani, Dec 18, 2020, 3:08 PM IST
ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಲವರು ಇಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ನ ಜಿಲ್ಲಾ ನಾಯಕ ಮಾಧವ ಮಾವೆ, ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾವೆ, ತಾಲೂಕು ಪಂಚಾಯತ್ ಸದಸ್ಯ ಕುಮಾರ ಭಟ್ಟ ಬದಿಕೋಡಿ ಇನ್ನಿತರರು ನಗರದ ಬಿಜೆಪಿ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಮಲ ಪಾಳಯಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಪಕ್ಷದ ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.
ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದೆ. ಆದರೆ ಕಾಂಗ್ರೆಸ್ ತೊರೆಯಲು ನನಗೆ ಹಲವಾರು ಕಾರಣಗಳಿವೆ. ಕಾಂಗ್ರೆಸ್ ನಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಉಳಿಗಾಲ ಇಲ್ಲ ಎಂದರು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.