Mangaluru: ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ… ಘಟನೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Team Udayavani, Aug 23, 2024, 11:55 AM IST
ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜಾ ಅವರ ಮನೆ ಮೇಲೆ ಕಲ್ಲೆಸೆದುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬಿಜೆಪಿ ಕಚೇರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಕಂಕನಾಡಿಯಲ್ಲಿ ಪೊಲೀಸರು ತಡೆದ ಪರಿಣಾಮ, ರಸ್ತೆಯಲ್ಲೇ ಪ್ರತಿಭಟನೆ ಸಭೆ ನಡೆಸಲಾಯಿತು. ವೆಲೆನ್ಸಿಯಾದ ಐವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿತ್ತು.
ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಐವನ್ ಡಿ’ ಸೋಜಾರ ಮನೆಗೆ ಕಲ್ಲು ತೂರಿದವರನ್ನು ಬಂಧಿಸ ಬೇಕು. ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಐವನ್ ರನ್ನು ಹೆಡೆ ಮುರಿ ಕಟ್ಟಬೇಕೆಂದು ಬಿಜೆಪಿ ಇಂಥದ್ದೆಲ್ಲ ಮಾಡುತ್ತಿದೆ ಎಂದು ಆರೋಪಿಸಿದರು.
ಮಾಜಿ ಶಾಸಕ ಜೆ.ಆರ್. ಲೋಬೊ ಮಾತನಾಡಿ, ಕಿಡಿಗೇಡಿಗಳ ಕೃತ್ಯವನ್ನು ಬಿಜೆಪಿ ಸಮರ್ಥಿಸಿದೆ. ಇದರಿಂದ ಬಿಜೆಪಿ ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂಬುದು ಸಾಬೀತಾಗಿದೆ ಎಂದರು.
ಕೆಪಿಸಿಸಿ ವಕ್ತಾರ ಎಂ.ಜಿ. ಹೆಗ್ಡೆ ಮಾತನಾಡಿ, ಐವನ್‌ರ ತಲೆಗೆ, ರಾಹುಲ್ ಗಾಂಧಿಯ ಕಪಾಳಕ್ಕೆ ಹೊಡೆಯಬೇಕೆನ್ನುವ ಡಾ| ಭರತ್ ಶೆಟ್ಟಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.
ಮುಖಂಡರಾದ ಪಿ.ವಿ. ಮೋಹನ್, ದೇವಿಪ್ರಸಾದ್ ಶೆಟ್ಟಿ ಮಾತನಾಡಿದರು.ವಿಧಾನ ಪರಿಷತ್ ಸದಸ್ಯ ಐವನ್ ಡಿ’ ಸೋಜಾ ಸಹಿತ ಜಿಲ್ಲಾ ಕಾಂಗ್ರೆಸ್ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ವೆಲೆನ್ಸಿಯಾದಿಂದ ಕಂಕನಾಡಿ ವೃತ್ತದವರೆಗೆ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನ ಕೂಗುತ್ತಾ ಪಾದಯಾತ್ರೆ ನಡೆಸಿದರು.
ಮುಖಂಡರಾದ ಪದ್ಮರಾಜ್ ಆರ್., ಮಮತಾ ಗಟ್ಟಿ, ಸುರೇಶ್ ಬಲ್ಲಾಳ್, ಶಾಹುಲ್ ಹಮೀದ್, ಶಾಲೆಟ… ಪಿಂಟೋ, ಅಪ್ಪಿ ಮತ್ತಿತರರು ಭಾಗವಹಿಸಿದ್ದರು.
ದಾಳಿಗೆ ಹೆದರುವುದಿಲ್ಲ: ಐವನ್
ಐವನ್ ಡಿ’ ಸೋಜಾ ಮಾತನಾಡಿ, ಬಿಜೆಪಿಯ ಈ ದಾಳಿಗೆ ಕಾಂಗ್ರೆಸ್ ಅಥವಾ ನಾನು ಜಗ್ಗುವುದಿಲ್ಲ. ಜನವಿರೋಧಿಯಾಗಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಯಾವ ಪರಿಣಾಮ ಆಗಲಿದೆ ಎಂಬುದು ಶ್ರೀಲಂಕಾ, ಬಾಂಗ್ಲಾ, ಉಗಾಂಡ, ಅಮೆರಿಕ ಮೊದಲಾದ ರಾಷ್ಟ್ರಗಳಲ್ಲಿ ಕಂಡಿದ್ದೇವೆ. ಹಾಗಾಗಿ ಬಾಂಗ್ಲಾ ದೇಶವನ್ನು ಉಲ್ಲೇಖಿಸಿದ್ದೇನೆಯೇ ಹೊರತು ಬಾಂಗ್ಲಾದೇಶ ಮಾದರಿ ಎಂದಿಲ್ಲ. ನಾನು ಹೇಳಿದುದನ್ನು ತಿರುಚಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡುತ್ತಿದೆ. ಕಲ್ಲು ಬಿಸಾಡುವುದು ಬಿಜೆಪಿ ಗೂಂಡಾ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.
ಇದನ್ನೂ ಓದಿ: Earthquake: ಕುಶಾನಗರ, ಬೈಲುಕೊಪ್ಪ ಭಾಗದಲ್ಲಿ ಭೂಕಂಪನದ ಅನುಭವ… ಜನರಲ್ಲಿ ಆತಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.