ದ.ಕ.: ಗುರುವಾರ; ಮೂವರ ಸಾವು, 316 ಪಾಸಿಟಿವ್
Team Udayavani, Sep 4, 2020, 12:06 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 316 ಮಂದಿಗೆ ಕೋವಿಡ್ ದೃಢಪಟ್ಟಿದೆ. ಮೂವರು ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 384 ಕ್ಕೆ ಏರಿಕೆಯಾಗಿದೆ. ಗುರುವಾರ 208 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
54 ಮಂದಿಗೆ ಸೋಂಕಿತರ ಸಂಪರ್ಕದಿಂದ, 129 ಮಂದಿಗೆ ಇನ್ಫ್ಲೂಯೆನಾl ಲೈಕ್ ಇಲ್ನೆಸ್, 13 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಕೋವಿಡ್ ದೃಢಪಟ್ಟಿದೆ. 120 ಮಂದಿಯ ಸೋಂಕಿನ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ.
ಸೋಂಕಿತರಲ್ಲಿ 190 ಮಂದಿ ಮಂಗಳೂರು, 40 ಮಂದಿ ಬಂಟ್ವಾಳ, 21 ಮಂದಿ ಪುತ್ತೂರು, 16 ಮಂದಿ ಸುಳ್ಯ, 16 ಮಂದಿ ಬೆಳ್ತಂಗಡಿ ತಾಲೂಕು ಹಾಗೂ 33 ಮಂದಿ ಹೊರ ಜಿಲ್ಲೆಯವರು. ಇವರಲ್ಲಿ 112 ಪುರುಷರು, 70 ಮಹಿಳೆಯರು ರೋಗ ಲಕ್ಷಣಗಳನ್ನು ಹೊಂದಿದ್ದಾರೆ. 57 ಮಂದಿ ಪುರುಷರು, 77 ಮಂದಿ ಮಹಿಳೆಯರು ಯಾವುದೇ ರೋಗ ಲಕ್ಷಣ ಹೊಂದಿಲ್ಲ. ಮೃತರಲ್ಲಿ ಇಬ್ಬರು ಮಂಗಳೂರು, ಒಬ್ಬರು ಅನ್ಯ ಜಿಲ್ಲೆಯವರು.
ಈವರೆಗೆ ಒಟ್ಟು 1,01,272 ಮಂದಿಯ ಗಂಟಲ ದ್ರವ ಮಾದರಿ ಪರೀಕ್ಷಿಸಲಾಗಿದೆ. 13,795 ಮಂದಿಗೆ ಕೊರೊನಾ ದೃಢಪಟ್ಟಿದ್ದು, 10,706 ಮಂದಿ ಗುಣಮುಖರಾಗಿದ್ದಾರೆ. ಸದ್ಯ 2,705 ಮಂದಿ ವಿವಿಧ ಆಸ್ಪತ್ರೆಗಳಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.