ದ.ಕ.: 316 ಮಂದಿಗೆ ಕೋವಿಡ್ ; ನಾಲ್ಕು ಮಂದಿ ಸಾವು; 607 ಮಂದಿ ಬಿಡುಗಡೆ
Team Udayavani, Oct 10, 2020, 10:55 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ಜಿಲ್ಲೆಯಲ್ಲಿ ಶನಿವಾರ 316 ಮಂದಿಗೆ ಕೊರೊನಾ ದೃಢಪಟ್ಟಿದೆ. ನಾಲ್ವರು ಸಾವನ್ನಪ್ಪಿದ್ದಾರೆ. 607 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 26,264 ಮಂದಿ ಸೋಂಕಿಗೊಳಗಾಗಿದ್ದು, 21,461ಮಂದಿ ಗುಣಮುಖರಾಗಿದ್ದಾರೆ. ಸದ್ಯ 4,203 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 600 ಮಂದಿ ಇಲ್ಲಿಯವರೆಗೆ ಮೃತಪಟ್ಟಿದ್ದಾರೆ.
ವಿವಿಧ ಗ್ರಾ. ಪಂ. ವ್ಯಾಪ್ತಿ, ವೆನ್ಲಾಕ್, ಲೇಡಿಗೋಶನ್ ಆಸ್ಪತ್ರೆ ಮತ್ತು ಇತರ ಖಾಸಗಿ ಲ್ಯಾಬ್‌ಗಳಲ್ಲಿ ಶನಿವಾರ 1,328 ರ್ಯಾಟ್ ಮತ್ತು 2,188 ಆರ್‌ಟಿಪಿಸಿಆರ್ ಪರೀಕ್ಷೆ ಸಹಿತ ಒಟ್ಟು 3,516 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರ್ಯಾಟ್ ಪರೀಕ್ಷೆಯಲ್ಲಿ 76 ಮಂದಿಗೆ ಕೊರೊನಾ ದೃಢಪಟ್ಟಿದೆ. ಮಾಸ್ಕ್ ಧರಿಸದ 6,221 ಮಂದಿಗೆ ಈವರೆಗೆ ಒಟ್ಟು 7,70,835 ರೂ. ದಂಡ ವಿಧಿಸಲಾಗಿದೆ.
ಉಡುಪಿ ಜಿಲ್ಲೆ: 239 ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಶನಿವಾರ ಓರ್ವ ಮಹಿಳೆ ಮೃತಪಟ್ಟಿದ್ದು 239 ಮಂದಿಗೆ ಪಾಸಿಟಿವ್ ವರದಿಯಾಗಿದೆ.
65 ವರ್ಷ ಪ್ರಾಯದ ಮಹಿಳೆ ಮೃತರಾದವರು. ಅವರಿಗೆ ಕೋವಿಡ್ ದೊಂದಿಗೆ ಇತರ ಆರೋಗ್ಯ ಸಮಸ್ಯೆಗಳಿದ್ದವು. ಇಷ್ಟರವರೆಗೆ 164 ಜನರು ಮೃತಪಟ್ಟಿದ್ದಾರೆ.
ಸೋಂಕಿತರಲ್ಲಿ ರೋಗ ಲಕ್ಷಣವಿರುವ 84 ಪುರುಷರು, 59 ಮಹಿಳೆಯರು, ರೋಗ ಲಕ್ಷಣವಿರದ 43 ಪುರುಷರು, 53 ಮಹಿಳೆಯರು ಇದ್ದಾರೆ. ಇವರಲ್ಲಿ 113 ಮಂದಿ ಉಡುಪಿ ತಾಲೂಕಿನವರು, 86 ಕುಂದಾಪುರ ತಾಲೂಕಿನವರು, 36 ಕಾರ್ಕಳ ತಾಲೂಕಿನವರು, ನಾಲ್ವರು ಹೊರ ಜಿಲ್ಲೆಯವರು. ಇವರಲ್ಲಿ 28 ಜನರನ್ನು ಆಸ್ಪತ್ರೆಗಳಿಗೂ 211 ಜನರನ್ನು ಮನೆಗಳ ಐಸೊಲೇಶನ್‌ಗೂ ದಾಖಲಿಸಲಾಗಿದೆ.
ಅ. 9ರಂದು 2,078 ಮಾದರಿಗಳನ್ನು ಸಂಗ್ರಹಿಸಲಾಗಿದೆ. 227 ಜನರಿಗೆ ಪಾಸಿಟಿವ್, 1,851 ಜನರಿಗೆ ನೆಗೆಟಿವ್ ಆಗಿದೆ. 224 ಜನರನ್ನು ಆಸ್ಪತ್ರೆ ಮತ್ತು ಮನೆಗಳ ಸೊಲೇಶನ್‌ನಿಂದ ಬಿಡುಗಡೆಗೊಳಿಸಲಾಗಿದೆ. 1,952 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.