ತಿಂಗಳೊಳಗೆ ಸಿಆರ್‌ಝಡ್‌ ಹೊಸ ನಕ್ಷೆ ಬಿಡುಗಡೆ

ಕೇಂದ್ರ ಸರಕಾರದ ಸಹಿ ಪಡೆದು ನಕ್ಷೆ ಬಿಡುಗಡೆಯಾಗಲಿದೆ.

Team Udayavani, Jan 4, 2023, 5:52 PM IST

ತಿಂಗಳೊಳಗೆ ಸಿಆರ್‌ಝಡ್‌ ಹೊಸ ನಕ್ಷೆ ಬಿಡುಗಡೆ

ಮಹಾನಗರ: ಕರಾವಳಿ ಜಿಲ್ಲೆಯ ಬಹುನಿರೀಕ್ಷಿತ “ಕರಾವಳಿ ನಿಯಂತ್ರಣ ವಲಯ (ಸಿಆರ್‌ ಝಡ್‌) ಅಧಿಸೂಚನೆ-2019’ರ ಅನುಷ್ಠಾನ ಸಂಬಂಧ ಹೊಸ ಕರಡು ನಕ್ಷೆ ಇದೀಗ ಅಂತಿಮ ಹಂತಕ್ಕೆ ಬಂದಿದ್ದು, 1 ತಿಂಗಳೊಳಗೆ ಹೊಸ ನಕ್ಷೆ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಹೊಸ ನಕ್ಷೆ ರಚನೆ ಬಗ್ಗೆ ಹಲವು ಕಾಲದಿಂದ ಪ್ರಕ್ರಿಯೆಗಳು ಮಂಗಳೂರಿನಲ್ಲಿ ನಡೆಯುತ್ತಿದೆ ಯಾದರೂ ವರ್ಷ ಕಳೆದರೂ ನಕ್ಷೆ ಮಾತ್ರ ಬರುತ್ತಿಲ್ಲ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ನಕ್ಷೆ ಬಗ್ಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ ಎಂಬ ದೂರು ಕೂಡ ಕೇಳಿಬರುತ್ತಿತ್ತು. ಆದರೆ “ಕೊರೊನಾ ಕಾರಣ, ನಕ್ಷೆ ರಚನೆ ಕಾನೂನು ಪ್ರಕಾರ ಮತ್ತು ಬಹುಸೂಕ್ಷ್ಮ ವಿಚಾರವಾದ್ದರಿಂದ ಕೊಂಚ ತಡವಾಗಿದೆ. ಇದೀಗ ಎಲ್ಲ ಹಂತದ ಸಿದ್ಧತೆ ಪೂರ್ಣವಾಗಿ ನಕ್ಷೆ ಬಿಡುಗಡೆಗೆ ತಯಾರಾಗಿದೆ’ ಎನ್ನುತ್ತಾರೆ ಅಧಿಕಾರಿಗಳು.

ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರವು (ಕೆಎಸ್‌ಸಿಝಡ್‌ ಎಂಎ), ಕರಾವಳಿ ನಿಯಂತ್ರಣ ವಲಯ (ಸಿಆರ್‌ ಝಡ್‌) ಅಧಿಸೂಚನೆ 2019ರಂತೆ ತಯಾರಿಸಿರುವ ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣ ಯೋಜನೆಯ ಕರಡು (ಸಿಝಡ್‌ ಎಂಪಿ) ನಕ್ಷೆಯನ್ನು ಚೆನ್ನೈನ ನ್ಯಾಶನಲ್‌ ಸೆಂಟರ್‌ ಫಾರ್‌ ಸಸ್ಟೆನೇಬಲ್‌ ಕೋಸ್ಟಲ್‌ ಮ್ಯಾನೇಜ್‌ಮೆಂಟ್‌ (ಎನ್‌ ಸಿಎಸ್‌ಸಿಎಂ) ತಯಾರಿಸಿದ್ದಾರೆ.

ಈ ಕರಡು ನಕ್ಷೆಯನ್ನು ಸಾರ್ವಜನಿಕರು, ಭಾಗಿದಾರರ ಅವಗಾಹನೆಗೆ ಪ್ರಕಟಿಸಿ ಅವರಿಂದ ಯಾವುದೇ ಆಕ್ಷೇಪಣೆ, ಸಲಹೆ, ಅನಿಸಿಕೆ ಆಹ್ವಾನಿಸಲು ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣೆ ಪ್ರಾಧಿಕಾರವು 2020ರ ಎ. 27ರಂದು ಅಧಿಸೂಚನೆ ಹೊರಡಿಸಿತ್ತು. ಇದರಂತೆ ಕರಡು ನಕ್ಷೆ ಬಗ್ಗೆ ಜುಲೈ 31ರಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆದಿತ್ತು. ಪೂರಕ ವರದಿಗೆ ಸೂಚನೆ ಆಕ್ಷೇಪಣೆಗಳ ವಿವರ ಸಹಿತ ವರದಿಯನ್ನು ಸೆ. 30ರಂದು ದ.ಕ. ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಸಭೆಯಲ್ಲಿ ಮತ್ತೊಮ್ಮೆ ಅನುಮೋದಿಸಿ ನ. 23ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯದ ಉನ್ನತ ಮಟ್ಟದ ಸಭೆಗೆ ಕಳುಹಿಸಲಾಗಿತ್ತು. ಆದರೆ ಸಾರ್ವಜನಿಕ ಆಕ್ಷೇಪಣೆ ಸರಿಪಡಿಸಲು ಇರಬಹುದಾದ ಸಾಧ್ಯತೆಗಳ ವಿವರ ನೀಡುವಂತೆ ಬೆಂಗಳೂರಿನಿಂದ ಮಂಗಳೂರು ಅಧಿಕಾರಿಗಳಿಗೆ ಮತ್ತೆ ನಿರ್ದೇಶನ ಬಂದಿತ್ತು. ಅದರಂತೆ ಸೂಕ್ತ ದಾಖಲೆ, ವರದಿಯನ್ನು ಸಿದ್ಧಪಡಿಸಿ 2022 ಜ. 4ರಂದು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ಪಡೆದು ಜ. 5ರಂದು ಬೆಂಗಳೂರಿಗೆ ಕಳುಹಿಸಲಾಗಿತ್ತು.

ಇದೀಗ ಕೇಂದ್ರ ಸರಕಾರದ ಸಹಿ ಪಡೆದು ನಕ್ಷೆ ಬಿಡುಗಡೆಯಾಗಲಿದೆ. ಬೀಚ್‌ ಅಭಿವೃದ್ಧಿಯ ಆಶಾಭಾವ ಪ್ರಸಕ್ತ ಕಡಲ ತೀರದಲ್ಲಿ ಯಾವುದೇ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶವಿಲ್ಲ. ಆದರೆ ಹೊಸ ಅಧಿಸೂಚನೆ ಪ್ರಕಾರ ಆಯ್ದ ಕಡಲ ತೀರದಲ್ಲಿ ಪ್ರವಾಸೋದ್ಯಮ ಪೂರಕವಾಗಿ ಕೆಲವೊಂದು ತಾತ್ಕಾಲಿಕ ರಚನೆ, ಫುಡ್‌ ಸ್ಟಾಲ್‌ ಮಾಡಲು ಅವಕಾಶ ವಿದೆ. ಇದಕ್ಕಾಗಿ ಪ್ರವಾಸೋದ್ಯಮ ಇಲಾಖೆ ಸಲಹೆ ಮಾಡಿರುವ ಸೋಮೇಶ್ವರ, ಪಣಂಬೂರು, ಇಡ್ಯಾ, ತಣ್ಣೀರುಬಾವಿ, ಸುರತ್ಕಲ್‌, ಸಸಿಹಿತ್ಲು, ಬೆಂಗ್ರೆ ಸಹಿತ ಜಿಲ್ಲೆ 10 ಬೀಚ್‌ಗಳನ್ನು ಅಧಿಸೂಚಿಸಲಾಗಿದೆ.

ಮೀನುಗಾರರ ಮನೆ ನಿರ್ಮಾಣಕ್ಕಾಗಿ ಸದ್ಯ 100 ಮೀ.ದೂರದವರೆಗೆ ಸಿಆರ್‌ ಝಡ್‌ ನಿರ್ಬಂಧವಿದ್ದರೆ, ಹೊಸ ಅಧಿಸೂಚನೆ ಪ್ರಕಾರ 50 ಮೀ.ವರೆಗೆ ಮಾತ್ರ ಇರಲಿದೆ. ಇಂತಹ ಹಲವು ಅವಕಾಶ ಹೊಸ ನಕ್ಷೆಯ ಮೂಲಕ ದೊರೆಯಲಿದೆ.

ಶೀಘ್ರ ಹೊಸ ನಕ್ಷೆ
ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌)ನ ಹೊಸ ಅಧಿಸೂಚಿತ ನಕ್ಷೆ ರಚನೆ ಈಗಾಗಲೇ ಕೊನೆಯ ಹಂತದಲ್ಲಿದೆ. ಈಗಾಗಲೇ ರಾಜ್ಯ ಮಟ್ಟದ ಸಮಿತಿ ಸಭೆಯಲ್ಲಿ ನಕ್ಷೆಯ ಕೆಲವು ತಿದ್ದುಪಡಿಗಳಿಗೆ ಅನುಮತಿ ದೊರೆತು ಕೇಂದ್ರಕ್ಕೆ ಕಳುಹಿಸಲಾಗಿದೆ. ಕೆಲವೇ ದಿನದಲ್ಲಿ ಹೊಸ ನಕ್ಷೆ ಸಿದ್ಧಗೊಳ್ಳುವ ಸಾಧ್ಯತೆಯಿದೆ.
-ಡಾ| ದಿನೇಶ್‌ ಕುಮಾರ್‌ ವೈ.ಕೆ.,
ಪ್ರಾದೇಶಿಕ ನಿರ್ದೇಶಕರು, ಪರಿಸರ-ಮಂಗಳೂರು

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಅರ್ಕುಳ: ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಸಾವು

Road Mishap; ಅರ್ಕುಳ: ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಸಾವು

Mangaluru: ಹರೇಕಳ ಹಾಜಬ್ಬಗೆ ಪ್ರಶಸ್ತಿ ಪ್ರದಾನ

Mangaluru: ಹರೇಕಳ ಹಾಜಬ್ಬಗೆ ಪ್ರಶಸ್ತಿ ಪ್ರದಾನ

ch

Church: ಕರಾವಳಿಯ ಚರ್ಚ್‌ಗಳಲ್ಲಿ ಬಲಿಪೂಜೆ, ಪ್ರಾರ್ಥನೆ ಸಲ್ಲಿಕೆ

Mangaluru: ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್‌ ಅಳವಡಿಸಿ: ಕ್ಯಾ| ಚೌಟ

Mangaluru: ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್‌ ಅಳವಡಿಸಿ: ಕ್ಯಾ| ಚೌಟ

6

Mangaluru: ನೆಲೆ ಕಳೆದುಕೊಳ್ಳುವ ಆತಂಕದಲ್ಲಿ ಶ್ರೀನಿವಾಸ ಮಲ್ಯರ ಪ್ರತಿಮೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.