Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ
Team Udayavani, Jan 7, 2025, 12:20 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಫೆ.21 ಮತ್ತು 22ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ| ಪ್ರಭಾಕರ ಶಿಶಿಲ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ.
ಡಾ| ಪ್ರಭಾಕರ ಶಿಶಿಲ ಕುರಿತು: ಸುಳ್ಯ ತಾಲೂಕಿನ ಕೂತುಕುಂಜ ಕಜೆಯಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಬೆಳೆದು, ಸುಳ್ಯದಲ್ಲಿ ನೆಲೆಸಿರುವ ಡಾ| ಪ್ರಭಾಕರ ಶಿಶಿಲರು ಕನ್ನಡದ ಶ್ರೇಷ್ಠ ಸಾಹಿತಿ. ಕನ್ನಡದಲ್ಲಿ 10 ಕಾದಂಬರಿ, 8 ಕಥಾ ಸಂಕಲನ, 5 ಪ್ರವಾಸ ಕಥನ ಸೇರಿ ಒಟ್ಟು 54 ಸೃಜನಶೀಲ ಕೃತಿಗಳು, 165 ಅರ್ಥಶಾಸ್ತ್ರ ವಿಚಾರ ಸಾಹಿತ್ಯ ಕೃತಿಗಳು ಹಾಗೂ ಆಂಗ್ಲ ಭಾಷೆಯಲ್ಲಿ 10 ಅರ್ಥಶಾಸ್ತ್ರ ಕೃತಿಗಳನ್ನು ರಚಸಿದ್ದಾರೆ.
ವಿವಿಧ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ಇವರ ಸುಮಾರು 250ಕ್ಕೂ ಅಧಿಕ ಲೇಖನಗಳು ಪ್ರಕಟವಾಗಿವೆ. ಅನೇಕ ಲಾವಣಿ ಮತ್ತು ಗೀಗೀ ಪದ ರಚಿಸಿದ್ದಾರೆ. ಇವರು ಬರೆದ ಪುಂಸ್ತ್ರೀ ಕೃತಿ ಸಂಸ್ಕೃತ, ಹಿಂದಿ, ಮಲಯಾಳಂ, ತೆಲುಗು, ತಮಿಳು, ತುಳು, ಕೊಂಕಣಿ, ಮರಾಠಿ, ಅರೆಭಾಷೆ, ಕೊಡವ, ಗುಜರಾಥಿ, ಬೆಂಗಾಲಿ, ಪಂಜಾಬಿ, ಇಂಗ್ಲಿಷ್ ಭಾಷೆಗಳಿಗೆ ಅನುವಾದಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.