ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಅಸಾಧ್ಯ: ದ.ಕ ಜಿಲ್ಲಾಧಿಕಾರಿ ರಾಜೀನಾಮೆ
Team Udayavani, Sep 6, 2019, 12:16 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಜಾಪ್ರಭುತ್ವದ ವ್ಯವಸ್ಥೆಗಳು ಮೂಲಭೂತ ಒತ್ತಡಗಳಿಂದ ರಾಜಿಯಾಗಿ ಕೆಲಸ ಮಾಡಬೇಕಾದ ಈ ಪರಿಸ್ಥಿತಿಇದೆ. ಸಿದ್ದಾಂತಕ್ಕೆ ಎದುರಾಗಿ ಹೋಗುವುದು ಕಷ್ಟ. ಮುಂದಿನ ದಿನಗಳು ದೇಶಕ್ಕೆ ಬಹಳಷ್ಟು ಸವಾಲುಗಳು ಎದುರಾಗಲಿದೆ. ಈ ಪರಿಸ್ಥಿತಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ಮುಂದುವರಿಯುವುದು ಸರಿಯಲ್ಲ ಎಂದು ಅನಿಸಿದ್ದರಿಂದ ನಾನು ರಾಜೀನಾಮೆ ನೀಡುತ್ತಿರುವೆ ಎಂದು ಸಸಿಕಾಂತ್ ಸೆಂಥಿಲ್ ಬರೆದುಕೊಂಡಿದ್ದಾರೆ.
ಅಕ್ಟೋಬರ್ 2017 ನಿಂದ ಸಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.
2009 ರ ಬ್ಯಾಚ್ ನ ಐಎಎಸ್ ಅಧಿಕಾರಿಯಾದ ಸಸಿಕಾಂತ್ ಸೆಂಥಿಲ್, ಎಲೆಕ್ಟ್ರಿಕಲ್ ಮತ್ತು ಕಮ್ಯುನಿಕೇಶನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.