ದ.ಕ ಜಿಲ್ಲೆಯಲ್ಲಿ ಕೋವಿಡ್-19 ಅಟ್ಟಹಾಸ: ಒಂದೇ ದಿನ ಮೂವರ ಸಾವು
Team Udayavani, Jul 8, 2020, 10:32 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಅಟ್ಟಹಾಸ ಅಂಕೆ ಮೀರುತ್ತಿದೆ. ಇಂದು ಬೆಳಿಗ್ಗೆ ಮೂವರು ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದು. ಜಿಲ್ಲೆಯಲ್ಲಿ ವೈರಾಣು ಪೀಡಿತರ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಉಳ್ಳಾಲ ಅಜಾದ್ ನಗರದ 56 ವರ್ಷದ ಮಹಿಳೆ, ಪುತ್ತೂರು ಮೂಲದ 32 ವರ್ಷದ ಮಹಿಳೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೋವಿಡ್ ವೈರಸ್ ಗೆ ಅಸುನೀಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಅಜಾದ್ ನಗರದ 56 ವರ್ಷದ ಪ್ರಥಮ ಸೋಂಕಿತ ಮಹಿಳೆ ಜೂನ್ 19 ರಂದು ಭೇದಿ ಕಾಯಿಲೆಗೆಂದು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 22 ರಂದು ಇವರಿಗೆ ಕೋವಿಡ್ ಸೋಂಕು ಇರುವುದು ಪತ್ತೆಯಾಗಿತ್ತು.
ಸದ್ಯ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಕೋವಿಡ್ ಮಹಾಮಾರಿಗೆ ಬಲಿಯಾಗಿರುವುದು ಖಚಿತವಾಗಿದ್ದು ಅರೋಗ್ಯ ಇಲಾಖೆಯ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 83 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಈ ಪೈಕಿ 48 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, ಇಬ್ಬರಿಗೆ ದ್ವಿತೀಯ ಸಂಪರ್ಕದಿಂದ, 21 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ, ಇಬ್ಬರಿಗೆ ಚಿಕ್ಕಮಗಳೂರಿಗೆ ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ ಕೋವಿಡ್ 19 ಸೋಂಕು ಬಾಧಿಸಿದೆ. 3 ಮಂದಿಗೆ ರ್‍ಯಾಂಡಮ್ ಪರೀಕ್ಷೆ ವೇಳೆ, 3 ಮಂದಿಗೆ ಶಸ್ತ್ರಚಿಕಿತ್ಸೆಗೂ ಮುನ್ನ ಮತ್ತು ಓರ್ವರಿಗೆ ಹೆರಿಗೆಗೂ ಮುನ್ನ ಪರೀಕ್ಷಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿದೆ. 3 ಮಂದಿಯ ಸಂಪರ್ಕವನ್ನು ಪತ್ತೆಹಚ್ಚಲಾಗುತ್ತಿದೆ. ಪ್ರಾಥಮಿಕ ಸಂಪರ್ಕದಿಂದ 11 ತಿಂಗಳ ಗಂಡು ಮಗುವಿಗೂ ಕೋವಿಡ್ ಬಾಧಿಸಿದೆ.
ಪುತ್ತೂರು ಮೂಲದ ಬಾಣಂತಿ ಸಾವು:
ವೈರಸ್ ಸೋಂಕಿತ ಪುತ್ತೂರು ಕೂರ್ನಡ್ಕ ಮೂಲದ ಬಾಣಂತಿ ಒಬ್ಬರು ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಇತ್ತೀಚೆಗೆ ಹೆರಿಗೆಗೆಂದು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಈ ವೇಳೆ ಇವರ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸಿದಾಗ ಆಕೆಗೆ ಸೋಂಕು ಇರುವುದು ದೃಢಪಟ್ಟಿತ್ತು. ಹೆರಿಗೆಯಾದ ಬಳಿಕ ಮಹಿಳೆ ಮತ್ತು ಹಸುಳೆಯನ್ನು ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇದೀಗ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿದ್ದು ಜುಲೈ 8ರ ನಸುಕಿನ ಜಾವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ದೇಹ ಪುತ್ತೂರಿಗೆ
ಮಹಿಳೆಯ ಮೃತ ದೇಹವನ್ನು ಪುತ್ತೂರಿಗೆ ತರಲಾಗುವುದು. ಬಳಿಕ ಬೆದ್ರಾಳದಲ್ಲಿ ಕೋವಿಡ್ ಸುರಕ್ಷತೆಯೊಂದಿಗೆ, ಸರ್ಕಾರದ ಮಾರ್ಗಸೂಚಿ ಪ್ರಕಾರ ಆಂತ್ಯಕ್ರೀಯೆ ನಡೆಯಲಿದೆ ಎಂದು ಮಾಹಿತಿ ತಿಳಿದು ಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!
ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್’ ತೆರೆಯದಂತೆ ಪೊಲೀಸರ ಸೂಚನೆ
Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್ ರಾಜ್ಯಭಾರ!
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್; ಸುಗಮ ಸಂಚಾರಕ್ಕೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.