ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ: ಡಾ.ರಾಜೇಂದ್ರ ಕೆ.ವಿ ನೂತನ ಡಿಸಿ
Team Udayavani, Jul 28, 2020, 3:09 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ದ. ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ.
ಡಾ.ರಾಜೇಂದ್ರ ಕೆ.ವಿ ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ.
ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಾ. ರಾಜೇಂದ್ರ ಕೆ.ವಿ ಅವರು 2013 ಕರ್ನಾಟಕ ಕೆಡೆರ್ ನ ಐಎಸ್ ಅಧಿಕಾರಿಯಾಗಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ಮೂಲದವರಾಗಿರುವ ಇವರು ವೈದ್ಯರಾಗಿದ್ದರು. ನಂತರ ನಾಗರಿಕ ಸೇವೆ ಆಸಕ್ತಿಯಿಂದ ಐಎಎಸ್ ಪರೀಕ್ಷೆ ಬರೆದ ಇವರು ದೇಶದಲ್ಲಿ 32 ನೇ ರ್ಯಾಂಕ್ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.