Dakshina Kannada District : ಕೆಲವೆಡೆ ಸಾಧಾರಣ ಮಳೆ
Team Udayavani, Mar 25, 2024, 12:56 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ರವಿವಾರ ಸಾಧಾರಣ ಮಳೆಯಾಗಿದೆ. ಉಳಿದಂತೆ ಉರಿ ಸೆಕೆ ಮುಂದುವರಿದಿತ್ತು.
ಬಂಟ್ವಾಳ ತಾಲೂಕಿನ ಕೆಲವು ಕಡೆ ಸಂಜೆಯ ವೇಳೆಗೆ ಹನಿ ಮಳೆಯಾಗಿದೆ. ಮಂಗಳೂರು ಸಹಿತ ಜಿಲ್ಲೆಯ ಹಲವೆಡೆ ಬಿಸಿಲು ಮತ್ತು ಮೋಡದಿಂದ ಕೂಡಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ಏರಿಕೆಯಾಗಿದೆ. ಮಂಗಳೂರಿನಲ್ಲಿ ಗುರುವಾರ 34.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಹೆಚ್ಚು ಇತ್ತು. 25.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಹೆಚ್ಚಿತ್ತು.
ಸಾಧಾರಣ ಮಳೆ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಕರಾವಳಿ ಭಾಗದ ಕೆಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಗಾಳಿ-ಮಳೆಯಿಂದ ಮರ ಮುರಿದು ಹಾನಿ
ಕಡಬ: ಶನಿವಾರ ರಾತ್ರಿ ಕಡಬ ಪರಿಸರದಲ್ಲಿ ಸುರಿದ ಗಾಳಿ-ಮಳೆಗೆ ಮರ ಮುರಿದುಬಿದ್ದು ಕುಟ್ರಾಪ್ಪಾಡಿ ಗ್ರಾಮದ ಕಳಾರ ಅಡ್ಕಾಡಿಯಲ್ಲಿ 2 ಮನೆಗಳಿಗೆ ಹಾನಿಯಾಗಿದೆ.
ಅಡ್ಕಾಡಿ ನಿವಾಸಿ ಬಾಬು ಅವರ ವಾಸದ ಮನೆಯ ಮೇಲೆ ಮರ ಬಿದ್ದು ಮನೆ ಹಾಗೂ ಶೌಚಾಲಯಕ್ಕೆ ಹಾನಿಯಾಗಿದೆ. ಹತ್ತಿರದ ಶೀನ ಅವರ ಮನೆಯ ಅಂಗಳಕ್ಕೆ ವಿದ್ಯುತ್ ಕಂಬ ಮುರಿದುಬಿದ್ದು ಅಂಗಳದಲ್ಲಿರಿಸಲಾಗಿದ್ದ ನೀರಿನ ಟ್ಯಾಂಕ್ ಒಡೆದುಹೋಗಿದೆ.
ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮ ಲೆಕ್ಕಾಧಿಕಾರಿ ಶ್ರೀರಾಜ್, ಅರಣ್ಯ ಇಲಾಖೆಯ ಸುಬ್ರಹ್ಮಣ್ಯ ಗೌಡ ಹಾಗೂ ಅಜಿತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಭೀಮ್ ಆರ್ಮಿ ಸಂಘಟನೆಯ ಕಡಬ ತಾಲೂಕು ಅಧ್ಯಕ್ಷ ರಾಘವ ಕಳಾರ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಕಡಬದ ಮೂರಾಜೆ ಬಳಿ ವಿದ್ಯುತ್ ಲೈನ್‌ಗೆ ಮರ ಬಿದ್ದು ವಿದ್ಯುತ್ ಕಂಬ ಮುರಿದಿದೆ. ಹಲವೆಡೆ ಮರದ ಕೊಂಬೆಗಳು ಮುರಿದುಬಿದ್ದು ಸಣ್ಣಪುಟ್ಟ ಹಾನಿ ಸಂಭವಿಸಿದೆ.
ಮರ ಬಿದ್ದು 5 ವಿದ್ಯುತ್ ಕಂಬಗಳಿಗೆ ಹಾನಿ
ಮಡಿಕೇರಿ: ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾದ ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ನಾಪೋಕ್ಲು ಭಾಗಮಂಡಲ ಮುಖ್ಯ ರಸ್ತೆಯ ಚೋನಾಕೆರೆ ಎಂಬಲ್ಲಿ ರವಿವಾರ ಮುಂಜಾನೆ ಸಂಭವಿಸಿದೆ.
ಮರ ಬಿದ್ದ ಪರಿಣಾಮ ರಸ್ತೆ ಬದಿಯ 5 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಚೋನಾಕೆರೆ, ಕೂರುಳಿ, ನೆಲಜಿ, ಎಮ್ಮೆಮಾಡು, ಬಲ್ಲಮಾವಟಿ, ಪೇರೂರು ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಹಾನಿಗೀಡಾದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಮರುಸ್ಥಾಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.