ನಿವೇಶನ ರಹಿತರಿಗೆ 15 ದಿನದೊಳಗೆ ಹಕ್ಕುಪತ್ರ: ಕೋಟ

ದ.ಕ. ಜಿಲ್ಲಾ ಪಂಚಾಯತ್‌ ತ್ತೈಮಾಸಿಕ ಕೆಡಿಪಿ ಸಭೆ

Team Udayavani, Oct 6, 2020, 5:13 AM IST

ನಿವೇಶನ ರಹಿತರಿಗೆ 15 ದಿನದೊಳಗೆ ಹಕ್ಕುಪತ್ರ: ಕೋಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ಸೋಮವಾರ ತ್ತೈಮಾಸಿಕ ಕೆಡಿಪಿ ಸಭೆ ನಡೆಯಿತು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ನಿವೇಶನಕ್ಕೆ ಸಂಬಂಧಿಸಿ ನಿವೇಶನರಹಿತರು ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಸ್ಥಳೀಯವಾಗಿ ಲಭ್ಯವಿರುವ ನಿವೇಶನಗಳಲ್ಲಿ ಸಮಸ್ಯೆ ಇಲ್ಲವಾದಲ್ಲಿ ಅರ್ಹರಿಗೆ ಹಕ್ಕುಪತ್ರವನ್ನು ಮುಂದಿನ 15 ದಿನಗಳಲ್ಲಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ದ.ಕ. ಜಿ.ಪಂ.ನಲ್ಲಿ ಸೋಮವಾರ ನಡೆದ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ನಗರ ಪ್ರದೇಶದಲ್ಲಿ ಸುಮಾರು 9,000 ಹಾಗೂ ಗ್ರಾಮಾಂತರ ದಲ್ಲಿ 20,000 ಮಂದಿ ನಿವೇಶನ ಕ್ಕಾಗಿ ಅರ್ಜಿ ಸಲ್ಲಿಸಿದ್ದು, 120 ಎಕರೆ ಜಮೀನು ಮೀಸಲಿದೆ. ಕುಮ್ಕಿ, ಡೀಮ್ಡ್ ಫಾರೆಸ್ಟ್‌ ಸೇರಿದಂತೆ ಯಾವುದೇ ಸಮಸ್ಯೆ ಇಲ್ಲದ ಜಮೀನು ಲಭ್ಯವಿದ್ದರೆ ಅದರ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ರಾ.ಪಂ. ಮಟ್ಟದಲ್ಲಿ ಅಂಗನವಾಡಿ, ಶಾಲೆ, ಮೈದಾನ ಸೇರಿದಂತೆ ಯಾವುದೇ ರೀತಿಯಲ್ಲಿ ಮಂಜೂರು ಮಾಡುವ ಸಂದರ್ಭ ಸ್ಥಳೀಯರಿಗೆ ಪೂರಕ ರಸ್ತೆ ಗಳನ್ನು ಗುರುತು ಮಾಡಬೇಕು. ಒಂದು ವೇಳೆ ಜಾಗ ಮಂಜೂರಾದ ಬಳಿಕ ರಸ್ತೆ ತಕರಾರು ಬಂದಲ್ಲಿ ಸ್ಥಳೀಯ ಗ್ರಾಮ ಕರಣಿಕರನ್ನೇ ಹೊಣೆಯಾ ಗಿಸಲಾಗುವುದು ಎಂದರು.

ಆಯುಷ್ಮಾನ್‌: 73 ಆಸ್ಪತ್ರೆಗಳು ನೋಂದಣಿ
ಸಚಿವ ಕೋಟ ಮಾತನಾಡಿ, ದ.ಕ. ಜಿಲ್ಲೆ ಯಲ್ಲಿ ಈ ಹಿಂದೆ ಸರಕಾರಿ, ವೈದ್ಯ ಕೀಯ ಕಾಲೇಜು ಸೇರಿದಂತೆ ಒಟ್ಟು 13 ಆಸ್ಪತ್ರೆಯಲ್ಲಿ ಕೊರೊನಾಕ್ಕೆ ಆಯುಷ್ಮಾನ್‌ನಡಿ ಉಚಿತ ಚಿಕಿತ್ಸೆ ನೀಡಲಾಗುತ್ತಿತ್ತು.ಇದೀಗ ಮತ್ತೆ 60 ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್‌ ಯೋಜನೆಯಡಿ ನೋಂದಾಯಿಸಿ ಕೊಂಡಿದ್ದು ಈ ಎಲ್ಲ ಆಸ್ಪತ್ರೆ ಗಳಲ್ಲಿ ಆಯುಷ್ಮಾನ್‌ನಡಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿರಲಿದೆ ಎಂದರು.

ಜಿಲ್ಲಾಧಿಕಾರಿ ಮಾತನಾಡಿ, ಪ್ರತಿದಿನ 300ರಿಂದ 400 ಹೊಸ ಕೊರೊನಾ ಪ್ರಕರಣಗಳು ಜಿಲ್ಲೆ ಯಲ್ಲಿ ವರದಿಯಾಗುತ್ತಿವೆ. ಪಾಸಿ ಟಿವ್‌ ಇರುವವರನ್ನು ಆಸ್ಪತ್ರೆಗೆ ದಾಖಲಿಸ ಬೇಕಾದ ಸಂದರ್ಭ ಜಿಲ್ಲಾಡಳಿತವೇ ಆ್ಯಂಬುಲೆನ್ಸ್‌ ಮೂಲಕ ಬೆಡ್‌ ಖಾಲಿಯಿರುವ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ 10 ದಿನಗಳಲ್ಲಿ ಜಾರಿಯಾಗಲಿದೆ ಎಂದರು.

ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಶಾಸಕರಾದ ಯು.ಟಿ. ಖಾದರ್‌, ಡಾ| ವೈ. ಭರತ್‌ ಶೆಟ್ಟಿ, ಹರೀಶ್‌ ಪೂಂಜ, ರಾಜೇಶ್‌ ನಾಯ್ಕ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯೀ ಸಮಿತಿ ಅಧ್ಯಕ್ಷರಾದ ರವೀಂದ್ರ ಕಂಬಳಿ, ಮಮತಾ, ಧನಲಕ್ಷ್ಮೀ, ಜಿ.ಪಂ. ಸಿಇಒ ಡಾ| ಸೆಲ್ವಮಣಿ, ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌, ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌, ಡಿಸಿಪಿ ಅರುಣಾಂಶುಗಿರಿ ಉಪಸ್ಥಿತರಿದ್ದರು.

ಶಾಸಕರ ಬೇಡಿಕೆಗಳು
ಹಲವಾರು ಪಿಂಚಣಿದಾರರಿಗೆ ಪಿಂಚಣಿ ವಿಳಂಬವಾಗುತ್ತಿರುವ ಕುರಿತಂತೆ ಶಾಸಕ ಯು.ಟಿ. ಖಾದರ್‌ ತಿಳಿಸಿ ತಾಲೂಕು ಮಟ್ಟದಲ್ಲಿ ಪಿಂಚಣಿ ಅದಾಲತ್‌ ನಡೆಸುವಂತೆ ಕೋರಿದರು. ವಿದ್ಯುತ್‌ ಮೀಟರ್‌ ರೀಡಿಂಗ್‌ ಕೆಲವೆಡೆ ನಡೆಯುತ್ತಿಲ್ಲ, ಅದನ್ನು ಸರಿಪಡಿಸಬೇಕು ಹಾಗೂ ಗೋಮಾಳದ ಜಾಗವನ್ನು ಹಾಲು ಉತ್ಪಾದಕರ ಸಂಘಗಳಿಗೆ ಹುಲ್ಲು ಬೆಳೆಯಲು ನೀಡಬೇಕು ಎಂದು ಶಾಸಕ ಹರೀಶ್‌ ಪೂಂಜ ಆಗ್ರಹಿಸಿದರು. ಮಂದಾರದ ತ್ಯಾಜ್ಯ ಸಮಸ್ಯೆಗೆ ಮುಕ್ತಿ ನೀಡಲು ಕ್ರಮ ಕೈಗೊಳ್ಳುವಂತೆ ಶಾಸಕ ಡಾ| ವೈ. ಭರತ್‌ ಶೆಟ್ಟಿ ಆಗ್ರಹಿಸಿದರು. ಸಾರ್ವಜನಿಕ ರಸ್ತೆ ನಿರ್ಮಿಸುವ ಸಂದರ್ಭ ಎದುರಾಗುವ ಕೆಲವೊಂದು ಅಡ್ಡಿ ಸಮಸ್ಯೆಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ನಿವಾರಿಸಬೇಕು ಎಂದು ಶಾಸಕ ರಾಜೇಶ್‌ ನಾೖಕ್‌ ಹೇಳಿದರು. ಮರಳು ನಿರ್ದಿಷ್ಟ ಸಮಯದೊಳಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಾಪ್‌ಸಿಂಹ ನಾಯಕ್‌ ಆಗ್ರಹಿಸಿದರು.

ಬಿ.ಸಿ.ರೋಡ್‌- ಅಡ್ಡಹೊಳೆ ರಸ್ತೆ; ಕ್ರಿಮಿನಲ್‌ ಪ್ರಕರಣದ ಎಚ್ಚರಿಕೆ
ಬಿ.ಸಿ.ರೋಡ್‌-ಅಡ್ಡಹೊಳೆ ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸವಾರರು ಅನಿವಾರ್ಯವಾಗಿ ಬದಲಿ ಮಾರ್ಗಗಳನ್ನು ಹಿಡಿಯುತ್ತಿರುವುದು ಕಂಡುಬಂದಿದೆ. ಈವರೆಗೆ ಕಾಮಗಾರಿಗೆ ಮಳೆ ಅಡ್ಡಿಯಾಗಿತ್ತು. ಇನ್ನು ಆ ಕಾರಣ ಬೇಡ. 15 ದಿನಗಳಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಬೇಕು. ಕೆಲಸ ಆಗದೆ ಒಂದು ವೇಳೆ ಯಾವುದೇ ರೀತಿಯ ಅವಘಡ ಸಂಭವಿಸಿದರೆ ರಾ.ಹೆ. ಪ್ರಾಧಿಕಾರದ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು.
– ಡಾ| ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.