ಕೇಂದ್ರ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗೆ ಬಲ: ಸುರೇಶ್ ಕುಮಾರ್
Team Udayavani, Jan 5, 2021, 8:58 AM IST
ಹಳೆಯಂಗಡಿ: ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ತಿಳಿಸಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ಅವರು ಬೆಂಗಳೂರಿನಲ್ಲಿ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಮಾಹಿತಿ ನೀಡಿದಾಗ ಸಚಿವರು ಪ್ರತಿಕ್ರಿಯಿಸಿದರು.
ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿಯ ಅಧ್ಯಕ್ಷರು ತುಳು ಭಾಷೆ ಅಧಿಕೃತವಾಗಿ ರಾಜ್ಯ ಭಾಷೆಯಾಗಬೇಕು ಎಂಬ ಧ್ವನಿಗೆ ತನ್ನ ಸಹಮತವನ್ನು ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.