ಹೊಟ್ಟೆನೋವು, ಶ್ವಾಸಕೋಶ ಸಮಸ್ಯೆಯಿಂದ ಯುವಕ ಸಾವು
Team Udayavani, Apr 15, 2020, 8:52 AM IST
ಸಾಂದರ್ಭಿಕ ಚಿತ್ರ
ಸುರತ್ಕಲ್: ಸುರತ್ಕಲ್ ಸಮೀಪದ ಬಂಗ್ಲೆಗುಡ್ಡೆ ನಿವಾಸಿ ಯುವಕನೋರ್ವ ಉಸಿರಾಟ, ಹೊಟ್ಟೆನೋವಿನಿಂದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಉತ್ತರ ಭಾರತದ ಮೂಲದ 27 ವರ್ಷದ ಯುವಕ ಕೆಲವು ದಿನದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ. ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ. ಆದರೆ ಹೊಟ್ಟೆನೋವು ತೀವ್ರಗೊಂಡಾಗ ಖಾಸಗೀ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿದ್ದ ಎನ್ನಲಾಗಿದೆ. ಮಂಗಳವಾರ ಹೊಟ್ಟೆನೋವು ತೀವ್ರಗೊಂಡು ಮನೆಯಲ್ಲಿ ಕುಸಿದು ಬಿದ್ದಾಗ ಮನೆಮಂದಿ ತತ್ಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರು. ಆದರೆ ದಾರಿ ಮದ್ಯೆ ಮೃತಪಟ್ಟಿದ್ದಾನೆ. ಈಗ ಎಲ್ಲೆಡೆ ಕೊರೊನಾ ವೈರಸ್ ಹಾವಳಿ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗಂಟಲು ದ್ರವ ಪರೀಕ್ಷೆ ಮಾಡಲಿದ್ದೇವೆ. ಬುಧವಾರ ವರದಿ ಕೈಸೇರಲಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.