ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ
ನ.5: ಮಂಗಳೂರಿನಲ್ಲಿ ಮೊದಲ ಸಭೆ; ಸಿಎಂ ಸೇರಿ 150 ಪ್ರಮುಖರು ಭಾಗಿ
Team Udayavani, Oct 28, 2020, 1:23 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಪಕ್ಷ ಚಟುವಟಿಕೆಗಳ ವಿಕೇಂದ್ರೀಕರಣ ಮತ್ತು ಜಿಲ್ಲಾ ಘಟಕ ಹಾಗೂ ಕಾರ್ಯಕರ್ತರಲ್ಲಿ ಹೆಚ್ಚಿನ ಹುರುಪು ಮೂಡಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬಿಜೆಪಿಯ ಮಹತ್ವದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಇನ್ನು ಮುಂದೆ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ.
ಮೊದಲ ರಾಜ್ಯ ಕಾರ್ಯಕಾರಿಣಿ ಸಭೆಯು ದ.ಕ. ಜಿಲ್ಲೆಯಲ್ಲಿ ನ. 5ರಂದು ಮಂಗಳೂರಿನಲ್ಲಿ ನಿಗದಿಯಾಗಿದೆ. ಸಾಮಾನ್ಯವಾಗಿ ಮೂರು ತಿಂಗಳಿಗೊಮ್ಮೆ ನಡೆಯುತ್ತಿದ್ದ ಈ ಸಭೆಯನ್ನು ಇನ್ನು ಮುಂದೆ ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಲಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳು ಚುನಾವಣೆಯ ದೃಷ್ಟಿಯಲ್ಲಿ ಮಹತ್ವದ ಕಾಲಘಟ್ಟವಾಗಿದೆ. ಗ್ರಾ. ಪಂ., ಲೋಕಸಭಾ ಉಪ ಚುನಾವಣೆ, ತಾಲೂಕು, ಜಿ. ಪಂ. ಚುನಾವಣೆಗಳು ಹಾಗೂ 2023ರ ವೇಳೆಗೆ ವಿಧಾನಸಭಾ ಚುನಾವಣೆ ಎದುರಾಗಲಿದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಯ ಕಾರ್ಯತಂತ್ರವಾಗಿ ಬಿಜೆಪಿ ಜಿಲ್ಲೆಗಳಲ್ಲಿ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆ ನಡೆಸುವ ಉಪಕ್ರಮವನ್ನು ಆರಂಭಿಸಿದೆ. ಜಿಲ್ಲಾಮಟ್ಟದಲ್ಲಿ ಇಂತಹ ಸಭೆ ನಡೆದಾಗ ವರಿಷ್ಠ ನಾಯಕರು ಮತ್ತು ವಿವಿಧ ಘಟಕಗಳ ಮುಖ್ಯಸ್ಥರು ಜಿಲ್ಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಹೊಸ ಸಂಚಲನ ಮತ್ತು ತಳಮಟ್ಟದಲ್ಲಿ ಪಕ್ಷ ಸಂಘಟನೆ ಕಾರ್ಯ ಇನ್ನಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಮಂಗಳೂರಿನಲ್ಲಿ ಎರಡು ದಶಕದ ಬಳಿಕ
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಬಿಜೆಪಿ ಕೋರ್ ಕಮಿಟಿ ಸಭೆ 2017ರ ನವೆಂಬರ್‌ನಲ್ಲಿ ಮಂಗಳೂರಿನಲ್ಲಿ ನಡೆದಿದ್ದು, ಇದರಲ್ಲಿ ರಾಜ್ಯ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆದಿತ್ತು.
ಮಂಗಳೂರು ಸಭೆಗೆ ಪಕ್ಷದ ಪ್ರಮುಖರು
ಮಂಗಳೂರಿನಲ್ಲಿ ನ. 5ರಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ಜರಗಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ , ರಾಷ್ಟ್ರೀಯ ಸಂಚಾಲಕ ಬಿ.ಎಲ್. ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿ.ವಿ. ಸದಾನಂದ ಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಸಿ.ಟಿ. ರವಿ, ರಾಜ್ಯ ಸಮಿತಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠಗಳ ಸಂಚಾಲಕರು, ಸಹಸಂಚಾಲಕರು, ವಿಭಾಗ ಪ್ರಭಾರಿಗಳು, ಸಹ ಪ್ರಭಾರಿಗಳು ಸೇರಿದಂತೆ ಸುಮಾರು 150 ಮಂದಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕಾರಿಣಿ ಸಭೆ
ಪಕ್ಷದ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ ಇನ್ನು ಮುಂದೆ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಪ್ರತಿ ತಿಂಗಳು ರಾಜ್ಯದ ಒಂದೊಂದು ಜಿಲ್ಲೆಗಳಲ್ಲಿ ಕಾರ್ಯಕಾರಿಣಿ ಸಭೆ ಜರಗಲಿದೆ. ಇದರನ್ವಯ ಪ್ರಥಮ ಸಭೆ ನ.5 ರಂದು ಮಂಗಳೂರಿನಲ್ಲಿ ನಿಗದಿಯಾಗಿದೆ. ಪಕ್ಷದ ನೂತನ ಉಪಕ್ರಮ ಪಕ್ಷದ ಕಾರ್ಯಕಾರಿಣಿ ಸಮಿತಿ ಪ್ರತಿಯೊಂದು ಜಿಲ್ಲೆಗೂ ಭೇಟಿ ನೀಡುವುದಕ್ಕೂ ಪೂರಕವಾಗಲಿದೆ.
-ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.