ಧರ್ಮ ಸಂಸದ್‌ ದ.ಕ. ಜಿಲ್ಲಾ  ಕಾರ್ಯಾಲಯಕ್ಕೆ ಚಾಲನೆ

Team Udayavani, Oct 23, 2017, 9:57 AM IST

23-23.jpg

ಮಂಗಳೂರು: ಉಡುಪಿಯಲ್ಲಿ ನ. 24ರಿಂದ ನ. 26ರ ವರೆಗೆ ನಡೆಯಲಿರುವ ಧರ್ಮ ಸಂಸದ್‌ ನಿಮಿತ್ತ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಾಲಯ ಉದ್ಘಾಟನೆ ರವಿವಾರ ಮಲ್ಲಿಕಟ್ಟೆಯ ಕೃಷ್ಣ ಕಲ್ಯಾಣ ಮಂಟಪದಲ್ಲಿ  ನಡೆಯಿತು.

ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, 2017 ಹಿಂದೂ ಸಮಾಜಕ್ಕೆ ದಿಕ್ಕು ತೋರಿಸುವ ವರ್ಷ. ನಾವು ಸಂಘಟಿತರಾಗುವ ಸಂದರ್ಭ ಬಂದಿದೆ. ಈವರೆಗೆ ಮೂರು ಬಾರಿ ಧರ್ಮ ಸಂಸದ್‌ ನಡೆದಿವೆ. ಅವೆಲ್ಲ ಕ್ಕಿಂತಲೂ ಮಿಗಿಲಾಗಿ ಈ ಬಾರಿಯ  ಕಾರ್ಯಕ್ರಮ ನಡೆಸಲಿದ್ದೇವೆ. 2 ಲಕ್ಷ ಜನ  ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಬಾರಿಯ ಧರ್ಮ ಸಂಸದ್‌ ಮಹತ್ವದ ಪಾತ್ರ ವಹಿಸಲಿದೆ. ಅಯೋಧ್ಯೆಯಲ್ಲಿ ರಾಮಮಂದಿರದ ಶೇ. 80ರಷ್ಟು ಶಿಲ್ಪಕಲಾ ಕೆಲಸಗಳು ಈಗಾಗಲೇ ಪೂರ್ಣ ಗೊಂಡಿದ್ದು, ಧರ್ಮ ಸಂಸದ್‌ ನಡೆದ ಎರಡೇ ತಿಂಗಳಿನಲ್ಲಿ ಉಳಿದ ಶೇ. 20ರಷ್ಟು ಕೆಲಸಗಳು ಪೂರ್ಣಗೊಂಡು 2018ರ ಪ್ರಾರಂಭ ದಲ್ಲಿ ರಾಮಮಂದಿರ ನಿರ್ಮಾಣ ಪೂರ್ಣ ವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆರೆಸ್ಸೆಸ್‌ ದಕ್ಷಿಣ ಪ್ರಾಂತ ಸಹ ಸಂಘಚಾಲಕ್‌ ಡಾ| ವಾಮನ ಶೆಣೈ ಮಾತನಾಡಿ, 3,000ಕ್ಕೂ ಹೆಚ್ಚಿನ ಪೀಠಾಧಿಪತಿಗಳು ಉಡುಪಿಗೆ ಆಗಮಿಸ ಲಿದ್ದಾರೆ. ಇದೊಂದು ಹಿಂದೂ ಸಮಾಜದ ಶಕ್ತಿ ಯನ್ನು ಸಾರಿ ಹೇಳುವ ಕಾರ್ಯ ಕ್ರಮವಾಗಲಿದೆ. ಹಿಂದೂ ಸಮಾಜಕ್ಕೆ ಶಕ್ತಿ ಕೊಡಬಲ್ಲ ಮಾರ್ಗದರ್ಶನ ಅಲ್ಲಿ ದೊರಕಲಿದೆ ಎಂದರು.

ವೇದಿಕೆಯಲ್ಲಿ ಬಜರಂಗದಳ ಪ್ರಾಂತ ಸಂಯೋಜಕ ಶರಣ್‌ ಪಂಪ್‌ವೆಲ್‌, ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಜಗದೀಶ ಶೇಣವ, ಆರೆಸ್ಸೆಸ್‌ ಮಹಾನಗರ ಸಹ ಸಂಚಾಲಕ್‌ ಸುನಿಲ್‌ ಆಚಾರ್‌, ವಿಶ್ವ ಹಿಂದೂ ಪರಿಷತ್‌ ಉಪಾಧ್ಯಕ್ಷ ಮನೋಹರ್‌, ಸ್ವಾಗತ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೊಟ್ಟಾರಿ, ವಿಶ್ವ ಹಿಂದೂ ಪರಿಷತ್‌ನ ವಾಸುದೇವ ಶೆಣೈ, ಗೋಪಾಲ್‌ ಕುತ್ತಾರ್‌ ಉಪಸ್ಥಿತರಿದ್ದರು.

ನ. 24ರಿಂದ ಧರ್ಮ ಸಂಸದ್‌
ಉಡುಪಿಯ ಶ್ರೀಕೃಷ್ಣ ಮಠದ ಆವರಣದಲ್ಲಿ ನ. 24ರಿಂದ 26ರ ವರೆಗೆ ಧರ್ಮ ಸಂಸದ್‌ ನಡೆಯಲಿದೆ. ಗೌರವಾಧ್ಯಕ್ಷರಾಗಿ ಪರ್ಯಾಯ ಪೀಠಾಧ್ಯಕ್ಷ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿದ್ದು, ಕಾರ್ಯಾಧ್ಯಕ್ಷರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಇದ್ದಾರೆ. ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಯೋಗಗುರು ಬಾಬಾ ರಾಮ್‌ದೇವ್‌, ರವಿಶಂಕರ ಗುರೂಜಿ, ಮಾತಾ ಅಮೃತಾನಂದಮಯಿ, ಶ್ರೀ ಆದಿಚುಂಚನಗಿರಿ ಮಠಾಧೀಶರು ಸೇರಿದಂತೆ ಗಣ್ಯರು ಭಾವಹಿಸಲಿದ್ದಾರೆ.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.