ಹುಲಿವೇಷಕ್ಕೆ ದ.ಕ. ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ
Team Udayavani, Oct 14, 2020, 2:01 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ನವರಾತ್ರಿ/ದಸರಾ ಸಂದರ್ಭದಲ್ಲಿ ಹಲವು ಷರತ್ತಿಗೊಳಪಟ್ಟು ದೇವಸ್ಥಾನಗಳ ಆವರಣದೊಳಗೆ ಮಾತ್ರ ಹುಲಿವೇಷ ಪ್ರದರ್ಶನಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿದೆ.
ಮಂಗಳವಾರ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯಲ್ಲಿ ಹುಲಿವೇಷಕ್ಕೆ ಅನುಮತಿ ನೀಡಲು ತೀರ್ಮಾನಿಸಲಾಯಿತು. ಒಂದು ತಂಡದಲ್ಲಿ 10 ವೇಷಧಾರಿಗಳಿಗೆ ಮಾತ್ರ ಅವಕಾಶ. ಹರಕೆ ರೂಪದಲ್ಲಿ ದೇವಸ್ಥಾನಗಳ ಆವರಣ ದೊಳಗೆ ನೀಡುವ ಪ್ರದರ್ಶನಕ್ಕೆ ಮಾತ್ರ ಅವಕಾಶವಿದ್ದು ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸಬೇಕು. ನಿಗದಿತ ಅವಧಿಯಲ್ಲಿ ಮಾತ್ರ ಪ್ರದರ್ಶನ ನೀಡಬೇಕು. ಮಾರ್ಗಸೂಚಿಗಳ ಉಲ್ಲಂಘನೆಯಾದರೆ ಅಥವಾ ಅಹಿತಕರ ಘಟನೆ ಸಂಭವಿಸಿದರೆ ಸಂಬಂಧಪಟ್ಟ ದೇವಸ್ಥಾನದ ಆಡಳಿತಾದರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದೆಂದು ನಿರ್ಣಯಿಸಲಾಯಿತು.
ಸಲಹಾ ಪೆಟ್ಟಿಗೆ ಕಡ್ಡಾಯ
ಎಲ್ಲ ದೇವಸ್ಥಾನಗಳಲ್ಲಿಯೂ ದೂರು/ಸಲಹೆ ಪೆಟ್ಟಿಯನ್ನು ಭಕ್ತರ ಗಮನಕ್ಕೆ ಬರುವ ಸ್ಥಳದಲ್ಲಿಯೇ ಇಡಬೇಕು. ಈ ಬಗ್ಗೆ 15 ದಿನಗಳೊಳಗೆ ಎಲ್ಲ ದೇವಸ್ಥಾನಗಳು ಕ್ರಮ ಕೈಗೊಳ್ಳಲು ಸೂಚಿಸಬೇಕೆಂದು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಅವಧಿ ಪೂರ್ಣಗೊಂಡ ಸುಮಾರು 100 ದೇವಸ್ಥಾನಗಳ ವ್ಯವಸ್ಥಾಪನ ಸಮಿತಿಯನ್ನು ಇದೇ ಸಂದರ್ಭದಲ್ಲಿ ರಚಿಸಲಾಯಿತು.
ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ವೆಂಕಟೇಶ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಷೆಕೋಡಿ ಸೂರ್ಯನಾರಾಯಣ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಭುವನಾಭಿರಾಮ ಉಡುಪ, ಎಸ್. ಸಂಜೀವ, ಗೋಪಾಲ ಕುತ್ತಾರ್, ದೇವೇಂದ್ರ ಹೆಗ್ಡೆ, ಶಶಿಕಲಾ, ಪೊಳಲಿ ಗಿರಿಪ್ರಕಾಶ್ ತಂತ್ರಿ ಪಾಲ್ಗೊಂಡಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಗೃಹ ನಿಗಾವಣೆಯಲ್ಲಿರುವ ಜಿಲ್ಲಾಧಿಕಾರಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.