ದ.ಕ.: ಕೋವಿಡ್ ದಿಂದ ಮತ್ತೂಂದು ಸಾವು


Team Udayavani, Jun 15, 2020, 8:28 AM IST

ದ.ಕ.: ಕೋವಿಡ್ ದಿಂದ ಮತ್ತೂಂದು ಸಾವು

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ರವಿವಾರದಂದು 24 ವರ್ಷದ ವ್ಯಕ್ತಿ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಬ್ಬರು ಗರ್ಭಿಣಿಯರು ಸಹಿತ 5 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು ಪ್ರಕರಣ 268ಕ್ಕೇರಿದೆ. ಮೇ 28ರಂದು ಮಹಾರಾಷ್ಟ್ರದಿಂದ ವಿಮಾನ ಮೂಲಕ ಬೆಂಗಳೂರಿಗೆ ಆಗಮಿಸಿದ 24 ವರ್ಷದ ವ್ಯಕ್ತಿ ಮೇ 31ರ ವರೆಗೆ ಕುಪ್ಪೆಪದವು ಪ್ರಾ. ಆರೋಗ್ಯ ಕೇಂದ್ರದಲ್ಲಿ ಸರಕಾರಿ ಕ್ವಾರಂಟೈನ್‌ನಲ್ಲಿದ್ದರು. ಬಳಿಕ ವಿಶೇಷ ಪ್ರಕರಣಗಳಡಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಿಸಲಾಗಿತ್ತು. ಈ ವೇಳೆ ಯಾವುದೇ ಕೋವಿಡ್ ಲಕ್ಷಣಗಳಿರಲಿಲ್ಲ. ಜೂ.11ರಂದು ಮಧ್ಯರಾತ್ರಿ ರಕ್ತ ವಾಂತಿ ಮಾಡಿದ್ದು, ತತ್‌ಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದರು. ಬಳಿಕ ಅವರ ಗಂಟಲ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂ.13ರ ರಾತ್ರಿ ಬಂದ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಮೃತ ವ್ಯಕ್ತಿಯು ದೀರ್ಘ‌ ಕಾಲದಿಂದ ಮೂತ್ರ ಪಿಂಡ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಸಂಪರ್ಕದಲ್ಲಿದ್ದ ಕಾರು ಚಾಲಕ, ಮೃತ ವ್ಯಕ್ತಿಯ ಮನೆ ಮಂದಿ, ಸಂಬಂಧಿಕರ ಸಹಿತ ಒಟ್ಟು 10 ಮಂದಿಯನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಇತರರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ರವಿವಾರ ಒಟ್ಟು 94 ಮಂದಿಯ ಗಂಟಲ ದ್ರವ ಮಾದರಿಯ ವರದಿ ಬಂದಿದ್ದು, 5 ಪಾಸಿಟಿವ್‌ ಪ್ರಕರಣ ಕಂಡುಬಂದಿದೆ. 230 ಮಂದಿಯ ಗಂಟಲ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಒಟ್ಟು 365 ಮಂದಿಯ ವರದಿ ಬರಬೇಕಿದೆ.

ಐಸಿಯುನಲ್ಲಿ ಚಿಕಿತ್ಸೆ
ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದ 50 ವರ್ಷದ ವ್ಯಕ್ತಿ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಈವರೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂಧಿಸಿದ ಕಾರಣ ಅವರನ್ನು ವಾರ್ಡಿಗೆ ಸ್ಥಳಾಂತರಿಸಲಾಗಿದೆ. ಕೋವಿಡ್ ದೃಢಪಟ್ಟು ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿರುವ 70 ವರ್ಷ ವ್ಯಕ್ತಿ ಮಧುಮೇಹ ಮತ್ತು ನ್ಯೂಮೋನಿಯದಿಂದ ಬಳಲುತ್ತಿದ್ದು, 52 ವರ್ಷದ ವ್ಯಕ್ತಿ ಮಧುಮೇಹ ಮತ್ತು ಅಬುìದ ರೋಗದಿಂದ ಬಳಲುತ್ತಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಟ್ಟಾರೆ 8 ಮಂದಿ ಸಾವು
ಕೊರೊನಾ ಸೋಂಕಿನಿಂದಾಗಿ ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಈ ಹಿಂದೆ ಬಂಟ್ವಾಳ ಮೂಲದ ಒಂದೇ ಮನೆಯ ಅತ್ತೆ, ಸೊಸೆ ಸಹಿತ ಮೂವರು, ಶಕ್ತಿನಗರದ ಮಹಿಳೆ, ಬೋಳೂರಿನ ಮಹಿಳೆ, ವೇಣೂರಿನ ವ್ಯಕ್ತಿ ಮೃತಪಟ್ಟಿದ್ದರು. ಕಡಂದಲೆಯ ಕ್ವಾರಂಟೈನ್‌ ಕೇಂದ್ರದಲ್ಲಿದ್ದ 55ರ ಹರೆಯದ ವ್ಯಕ್ತಿ ಕಳೆದ ತಿಂಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಅವರಲ್ಲಿ ಕೋವಿಡ್ ದೃಢಪಟ್ಟಿತ್ತು. ಇನ್ನು, ಮಹಾರಾಷ್ಟ್ರದಿಂದ ಬಂದಿದ್ದ 24 ವರ್ಷದ ಯುವಕ ಜೂ 11ರಂದು ಮೃತಪಟ್ಟಿದ್ದಾರೆ.

ಇಬ್ಬರು ಗರ್ಭಿಣಿಯರಿಗೆ ಸೋಂಕು
ಜಿಲ್ಲೆಯಲ್ಲಿ ರವಿವಾರ ಸ್ವೀಕೃತವಾದ ವರದಿಯಲ್ಲಿ 5 ಮಂದಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ 3 ಮಂದಿ ಸೌದಿ ಅರೇಬಿಯಾದಿಂದ ಆಗಮಿಸಿದವರು. ಇವರಲ್ಲಿ ಇಬ್ಬರು ಗರ್ಭಿಣಿಯರಿಗೆ ಕೋವಿಡ್ ಸೋಂಕು ತಗಲಿದೆ. ಮತ್ತೂಬ್ಬರು ಈ ಹಿಂದೆ ಮುಂಬಯಿಯಿಂದ ಆಗಮಿಸಿ ಕೋವಿಡ್ ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದರು.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.