ಡಾ.ಭರತ್ ಶೆಟ್ಟಿ ಪ್ರಯತ್ನ ಫಲಪ್ರದ : AOMSI ನಿಂದ ಬ್ಲ್ಯಾಕ್ ಫಂಗಸ್ ಔಷಧ ಮಂಗಳೂರಿಗೆ
Team Udayavani, Jun 8, 2021, 5:58 PM IST
ಮಂಗಳೂರು : ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿ Association of Oral and Maxillofacial Surgeons of India ( AOMSI) ಸಂಘಟನೆಯ ಮಾಜಿ ಅಧ್ಯಕ್ಷರಾದ ಡಾ.ಕೃಷ್ಣಮೂರ್ತಿ ಬೊನತಾಯ ಹಾಗೂ ಡಾ.ಬದ್ರಿ ಅವರು ಯುನೈಟೆಡ್ ಕಿಂಗ್ ಡಂನಿಂದ ಬ್ಲ್ಯಾಕ್ ಫಂಗಸ್ ಗೆ ಬೇಕಾಗಿರುವ Amphotericin ಔಷಧವನ್ನು ಭಾರತಕ್ಕೆ ತರಿಸಿದ್ದು, ಅದನ್ನು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಭರತ್ ಶೆಟ್ಟಿಯವರಿಗೆ ಮಂಗಳವಾರ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ AOMSI ಅಧ್ಯಕ್ಷರಾದ ಡಾ.ಮಂಜುನಾಥ ರೈ ಹಾಗೂ ಮಾಜಿ ಅಧ್ಯಕ್ಷರಾದ ಡಾ.ಮುಸ್ತಫಾ ಖಾದರ್ ಉಪಸ್ಥಿತರಿದ್ದರು.
ಡಾ.ವೈ ಭರತ್ ಶೆಟ್ಟಿಯವರು ಕೇಂದ್ರ ಹಾಗೂ ರಾಜ್ಯ ಸರಕಾರದೊಂದಿಗೆ ನಿರಂತರ ಸಂವಹನ ನಡೆಸಿದ ಪ್ರಯತ್ನ ಆಡಳಿತಾತ್ಮಕ ಕಾರ್ಯಗಳು ಸುಗಮವಾಗಿ ನಡೆದು ಔಷಧ ಮಂಗಳೂರಿಗೆ ಬರಲು ಸಹಕಾರಿಯಾಯಿತು.
ಬ್ಲ್ಯಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ AOMSI ಸಂಘಟನೆ ಮುಂಚೂಣಿಯಲ್ಲಿದ್ದು, ಕೋವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿಯೂ ಸರಕಾರದೊಂದಿಗೆ ಕೈಜೋಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.