Mangaluru: ಸಂತ ಅಲೋಶಿಯಸ್ ವಿ.ವಿ. ಪ್ರಥಮ ಕುಲಪತಿಯಾಗಿ ಡಾ| ಪ್ರವೀಣ್ ಮಾರ್ಟಿಸ್
Team Udayavani, Mar 20, 2024, 10:35 AM IST
ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾನಿಲಯದ ಮೊದಲ ಕುಲಪತಿಯಾಗಿ ಪ್ರಾಂಶುಪಾಲ ರಾಗಿದ್ದ ವಂ| ಡಾ| ಪ್ರವೀಣ್ ಮಾರ್ಟಿಸ್ ಎಸ್.ಜೆ. ಅವರನ್ನು ನೇಮಿಸಲಾಗಿದೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿ ವಂ| ಡಯನೀಶಿಯಸ್ ವಾಜ್ ಘೋಷಿಸಿದರು.
1974ರ ಮೇ 20ರಂದು ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ಜನಿಸಿದ ವಂ| ಡಾ| ಪ್ರವೀಣ್ ಮಾರ್ಟಿಸ್, ಶಂಕರಪುರದ ಸಂತ ಜಾನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದರು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿ, ಬೆಂಗಳೂರಿನ ಸಂತ ಜೋಸೆಫ್ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಬೆಲ್ಜಿಯಂನ ನೆಮ್ಯೂರ್ ವಿ.ವಿ.ಯಿಂದ ನ್ಯಾನೊ ಸೈನ್ಸ್ನಲ್ಲಿ ಡಾಕ್ಟರೆಟ್ ಪದವಿ ಪಡೆದರು.
ಅವರು ಬೆಂಗಳೂರಿನ ಸಂತ ಜೋಸೆಫ್ಸ್ ಸಂಧ್ಯಾ ಕಾಲೇಜಿನಲ್ಲಿ ಕರೆಸ್ಪಾಂಡೆಂಟ್ ಮತ್ತು ವಿದ್ಯಾರ್ಥಿ ಸಲಹೆಗಾರರಾಗಿ, ಸಂತ ಜೋಸೆಫ್ ಕಾಲೇಜಿನಲ್ಲಿ (ಪ್ರಸ್ತುತ ವಿ.ವಿ.) ರಸಾಯನಶಾಸ್ತ್ರದ ಪ್ರಾಧ್ಯಾಪಕರಾಗಿ, ಸಂತ ಜೋಸೆಫ್ಸ್ನಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನೆಯ ನಿರ್ದೇಶಕರಾಗಿ, ಕಾಲೇಜಿನ ರೆಕ್ಟರ್ ಮತ್ತು ಪ್ರಾಂಶುಪಾಲರಾಗಿ, ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಡಿಡಿಯು, ಕೌಶಲ್ ಕೇಂದ್ರದ ನಿರ್ದೇಶಕ ಮತ್ತು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಅವರು ಭಾರತದಲ್ಲಿನ ಸ್ವಾಯತ್ತ ಕಾಲೇಜುಗಳ ಮೌಲ್ಯಮಾಪನಕ್ಕಾಗಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಕೌನ್ಸಿಲ್ನಿಂದ ಅನುಮೋದಿತ ಮೌಲ್ಯಮಾಪಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.