ಕುಡಿಯುವ ನೀರಿನ ಸಮಸ್ಯೆ: ತತ್‌ಕ್ಷಣ ಸಭೆ ಕರೆಯುವಂತೆ ಯು.ಟಿ. ಖಾದರ್ ಆಗ್ರಹ
Team Udayavani, Mar 15, 2023, 6:45 AM IST
ಮಂಗಳೂರು: ಜಿಲ್ಲೆ ಯಲ್ಲಿ ಈ ಬಾರಿ ಬಹು ಬೇಗ ಕುಡಿಯುವ ನೀರಿನ ಸಮಸ್ಯೆ ಕಾಣಿಸಿ ಕೊಂಡಿದ್ದು, ಜಿಲ್ಲಾಡಳಿತ ತತ್‌ಕ್ಷಣ ಸಭೆ ಕರೆದು, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ರಾಜ್ಯ ಸರಕಾರವೂ ಪ್ರತೀ ಕ್ಷೇತ್ರಕ್ಕೆ 30-50 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಬೇಕು ಎಂದು ಶಾಸಕ, ವಿಧಾನ ಪರಿಷತ್ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಆಗ್ರಹಿಸಿದ್ದಾರೆ.
ರಾಜ್ಯ ಸರಕಾರ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಶಾಸಕರು-ಸಚಿವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ತಿರುಗಾಡುತ್ತಿದ್ದು, ಜನರ ಕಷ್ಟವನ್ನು ಕೇಳುವವರು ಇಲ್ಲ ಎನ್ನುವಂತಾಗಿದೆ. ವಿಜಯ ಸಂಕಲ್ಪ ಯಾತ್ರೆ ಅಲ್ಲ, ಅದು ಶೇ. 40 ಕಮಿಷನ್ ಯಾತ್ರೆ ಎಂದು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ವ್ಯಂಗ್ಯವಾಡಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಪ್ರತೀ ಕ್ಷೇತ್ರಕ್ಕೆ 30 ಲಕ್ಷ ರೂ. ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಕುಡಿಯುವ ನೀರು ಇಲ್ಲದೆ ಸಾರ್ವಜನಿಕರು ಸ್ಥಳೀಯ ಗ್ರಾ.ಪಂ. ಸದಸ್ಯರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ತತ್‌ಕ್ಷಣ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈಶ್ವರಪ್ಪ ಅವರ ನಾಲಗೆಗೂ ಮೆದುಳಿಗೂ ಸಂಪರ್ಕ ಇಲ್ಲ. ಆದ್ದರಿಂದ ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ. ತನಗೆ ಈ ಬಾರಿ ಟಿಕೆಟ್ ಸಿಗುವುದು ಕಷ್ಟ ಎಂದು ತಿಳಿದು ಅಸ್ವಸ್ಥರಾಗಿದ್ದು, ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಪ್ರತೀ ಧರ್ಮಕ್ಕೂ ಅದರದ್ದೇ ಆದ ಮಹತ್ವವಿದೆ. ಅವಹೇಳನ ಮಾಡುವುದರಿಂದ ಧರ್ಮಕ್ಕೆ ಏನೂ ಆಗುವುದಿಲ್ಲ. ಬದಲಾಗಿ ಹೇಳಿದವರ ನೀಚತನ ಜಗತ್ತಿಗೆ ತಿಳಿಯುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖಂಡರಾದ ಸಂತೋಷ್ ಕುಮಾರ್ ಶೆಟ್ಟಿ, ಫಾರೂಕ್, ಜಗದೀಶ್, ಸದಾಶಿವ ಉಳ್ಳಾಲ್, ನಝàರ್ ಬಜಾಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.