Drinking Water: ನೀರಿನ ಸಮಸ್ಯೆ ಬಗೆಹರಿಸಲು ಸಮಿತಿ
Team Udayavani, Nov 24, 2023, 8:30 AM IST
ಮಂಗಳೂರು: ಜಿಲ್ಲೆ ಯಲ್ಲಿ ಮುಂದೆ ಬರಬಹುದಾದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೆ„ ಮುಗಿಲನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕುಡಿಯುವ ನೀರಿನ ಕುರಿತಂತೆ ಈಗಾಗಲೇ ಮೂರು ಬಾರಿ ಸಮಾಲೋಚನೆ ನಡೆದಿದೆ. ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟು, ಹಿನ್ನೀರಿನ ಇತರ ಮೂಲಗಳು, ಸಣ್ಣ ಅಣೆಕಟ್ಟೆಗಳು, ಬಹುಗ್ರಾಮ ಕುಡಿಯುವ ನೀರಿನ ವಿವಿಧ ಯೋಜನೆಗಳು, ಹೊಸ ಯೋಜನೆಗಳನ್ನು ಗಣನೆಗೆ ತೆಗೆದುಕೊಂಡು ಹೆಚ್ಚುವರಿ ನೀರಿನ ಮಟ್ಟವನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಈ ಸಮಿತಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ತುಂಬೆ ಸಮೀಪದ ಹರೇಕಳ ಡ್ಯಾಂನಲ್ಲಿ ಸಾಕಷ್ಟು ನೀರು ಸಂಗ್ರಹಿಸಲು ಅವಕಾಶವಿದ್ದು, ಈ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಪ್ರಸ್ತುತ ತುಂಬೆಯಲ್ಲಿ ನದಿಯ ಒಳಹರಿವು ನಿಂತಾಗ ಅಲ್ಲಿ ಸಂಗ್ರಹವಾಗುವ ನೀರು ನಗರಕ್ಕೆ ಸುಮಾರು 50 ದಿನಗಳಿಗೆ ಪೂರೈಕೆ ಮಾಡಲು ಸಾಧ್ಯವಿದೆ. ಈ ಎಲ್ಲಾ ಅಂಶಗಳ ಬಗ್ಗೆ ಸ್ಥೂಲವಾದ ವರದಿಯನ್ನು ತಿಂಗಳೊಳಗೆ ಈ ಸಮಿತಿ ಸಿದ್ಧಪಡಿಸಲಿದೆ ಎಂದರು.
ಮರಳಿಗೆ ಕೊರತೆ ಇಲ್ಲ
ಸದ್ಯ ಸಿಆರ್‌ಝಡ್ ವ್ಯಾಪ್ತಿ ಯಲ್ಲಿ ಎನ್‌ಜಿಟಿ ಆದೇಶದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ವರ್ಷಗಳಿಂದ ಮರಳುಗಾರಿಕೆಗೆ ನಿರ್ಬಂಧವಿದೆ. ನಾನ್ ಸಿಆರ್‌ಝಡ್‌ನಡಿ ಸಾಕಷ್ಟು ಮರಳು ಲಭ್ಯವಿದ್ದು, 25 ಮಂದಿ ಟೆಂಡರುದಾರರಿಗೆ ಮರಳು ತೆಗೆಯಲು 25 ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅದರಿಂದ ನಿಗದಿತ ಶೇ. 50 ಮರಳನ್ನು ಕೂಡ ಇನ್ನೂ ತೆರವುಗೊಳಿಸುವ ಕಾರ್ಯ ನಡೆದಿಲ್ಲ. ಹಾಗಾಗಿ ನಾನ್ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಸಾಕಷ್ಟು ಮರಳಿದೆ. ಗುತ್ತಿಗೆದಾರರಿಗೆ ತೆರವು ಗೊಳಿಸಿದ ಮರಳನ್ನು ಸಾಗಿಸುವ ನಿಟ್ಟಿನಲ್ಲಿ ತಮ್ಮ ಸ್ಟಾಕ್‌ಯಾರ್ಡ್ ಬಳಿ ವೇ ಬ್ರಿಡ್ಜ್ ಅಳವಡಿಸುವಂತೆ ತಿಳಿಸಲಾಗಿತ್ತು. ಆದರೆ ಅಳವಡಿಸದ ಕಾರಣ ಆರಂಭದಲ್ಲಿ ಕೆಲ ದಿನಗಳ ಕಾಲ ತೊಡಕಾಗಿತ್ತು. ಬಳಿಕ ಒಂದು ತಿಂಗಳ ಕಾಲಾವಕಾಶ ನೀಡಿ ಮರಳುಗಾರಿಕೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಇದನ್ನೂ ಓದಿ: Malpe: ಈಡೇರದ 5 ದಶಕಗಳ ಬೇಡಿಕೆ, ನಿತ್ಯ ಟ್ರಾಫಿಕ್ ಜಾಮ್ ಕಿರಿಕಿರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.