Mangaluruಚಾಲಕರ ಅಪಘಾತ ಪರಿಹಾರ ಯೋಜನೆ: ಅರ್ಜಿ ಆಹ್ವಾನ
Team Udayavani, Sep 27, 2023, 11:45 PM IST
ಮಂಗಳೂರು: ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ನಿರ್ವಾಹಕರು ಮತ್ತು ಕ್ಲೀನರ್‌ಗಳಿಗೂ ಅನ್ವಯಿಸು ವಂತೆ ಸರಕಾರ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳ ನಿರ್ವಾಹಕರು, ಕ್ಲೀನರ್‌ಗಳು ಈ ಯೋಜನೆಯಡಿ ನೋಂದಣಿ ಮಾಡಿಸಬಹುದು.
ಪ್ರಯೋಜನಗಳು
ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮರಣ ಹೊಂದಿದಲ್ಲಿ ಅವರ ನಾಮನಿರ್ದೇಶಿತರಿಗೆ 5 ಲಕ್ಷ ರೂ. ಪರಿಹಾರ, ಶಾಶ್ವತ ದುರ್ಬಲತೆಗೆ 2 ಲಕ್ಷ ರೂ.ವರೆಗೆ ಪರಿಹಾರ. ತಾತ್ಕಾಲಿಕ ದುರ್ಬಲ ತೆಗೆ 50,000ದಿಂದ 1ಲಕ್ಷ ರೂ. ವರೆಗೆ ಆಸ್ಪತ್ರೆ ವೆಚ್ಚ ಮರು ಪಾವತಿ.
ಶೈಕ್ಷಣಿಕ ಧನ ಸಹಾಯ
ಅಪಘಾತದ ಕಾರಣ ನಿಧನ ರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿ ಗಳ ಇಬ್ಬರು ಮಕ್ಕಳಿಗೆ ಪದವಿ ಪೂರ್ವ ವ್ಯಾಸಂಗದವರೆಗೆ ವಾರ್ಷಿಕ 10,000 ರೂ. ಶೈಕ್ಷಣಿಕ ಧನಸಹಾಯ.
ಖಾಸಗಿ ವಾಣಿಜ್ಯ ವಾಹನದ ನಿರ್ವಾಹಕರು ಮತ್ತು ಕ್ಲೀನರ್‌ಗಳು ನೋಂದಣಿಯಾಗಲು 20ರಿಂದ 70 ವರ್ಷದೊಳಗಿರಬೇಕು. ಸ್ಟಾಂಪ್ ಸೈಜ್ ಫೋಟೊ 1, ಪಾಸ್ ಪೋರ್ಟ್ ಸೈಜ್ 1, ಆಧಾರ್‌ಕಾರ್ಡ್, ಮಾರ್ಕ್ ಕಾರ್ಡ್ (ಎಸೆಸ್ಸೆಸಿ)/ ಡಿಎಲ್/ ಪಾನ್ ಕಾರ್ಡ್, ಬ್ಯಾಂಕ್ ಖಾತೆಯ ಪ್ರತಿ, ನಿರ್ವಾಹಕರ ಊರ್ಜಿತ ಪರವಾನಿಗೆ (ಸಾರಿಗೆ ಇಲಾಖೆಯಿಂದ ಪಡೆದಿರ ತಕ್ಕದ್ದು) (ನಿರ್ವಾಹಕರಿಗೆ ಮಾತ್ರ), ಸಂಸ್ಥೆ/ ಮಾಲಕರಿಂದ ನೀಡಲಾಗಿರುವ ಗುರುತಿನ ಚೀಟಿ (ಲಭ್ಯವಿದ್ದಲ್ಲಿ) ಈ ಎಲ್ಲ ದಾಖಲೆಯೊಂದಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್ ಹೊಂಡಗಳು!
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.