ದಕ್ಷಿಣ ಕನ್ನಡದಲ್ಲಿ ಡ್ರೋಣ್‌ ಸರ್ವೆ ಕಾರ್ಯ ಆರಂಭ

ಮೊದಲ ಹಂತದಲ್ಲಿ 58 ಗ್ರಾಮ ಪಂಚಾಯತ್‌ ಆಯ್ಕೆ ;  "ಸ್ವಾಮಿತ್ವ' ಯೋಜನೆ

Team Udayavani, Sep 13, 2020, 4:31 AM IST

ದಕ್ಷಿಣ ಕನ್ನಡದಲ್ಲಿ ಡ್ರೋಣ್‌ ಸರ್ವೆ ಕಾರ್ಯ ಆರಂಭ

ಮಹಾನಗರ: ರಾಜ್ಯ ಸರಕಾರ ಡ್ರೋಣ್‌ ಬಳಸಿ ಆಸ್ತಿಗಳ ಅಳತೆ ನಡೆಸಿ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವ “ಸ್ವಾಮಿತ್ವ’ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಏಳು ತಾಲೂಕುಗಳಲ್ಲಿ 58 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಿದ್ದು, ಗುರುತು (ಮಾರ್ಕಿಂಗ್‌) ಪ್ರಕ್ರಿಯೆ ಆರಂಭಗೊಂಡಿದೆ.

ರಾಜ್ಯದಲ್ಲಿ ಆರಂಭಿಕ ಹಂತದಲ್ಲಿ ದಕ್ಷಿಣ ಕನ್ನಡ ಸಹಿತ ಒಟ್ಟು 16 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ. “ಸ್ವಾಮಿತ್ವ’ ಯೋಜನೆಯಡಿ ಕಂದಾಯ ಇಲಾಖೆಯ ಭೂಮಾಪಕರು ಮತ್ತು ಗ್ರಾಮ ಪಂಚಾಯತ್‌ ಅಧಿಕಾರಿಗಳು ಜಂಟಿಯಾಗಿ ಆಯ್ಕೆಯಾಗಿರುವ ಗ್ರಾಮಗಳ ಜನ ವಸತಿ ಪ್ರದೇಶದ ಪ್ರತೀ ಆಸ್ತಿಯನ್ನು ಭೂಮಾಲಕರ ಸಮ್ಮುಖದಲ್ಲಿ ಪರಿಶೀಲಿಸಿ ಗುರುತಿಸುತ್ತಾರೆ. ಬಳಿಕ ಡ್ರೋಣ್‌ ಆಧಾರಿತ ಸರ್ವೆ ನಡೆಸಿ ಆಸ್ತಿಗಳ ಫೋಟೋ ಸೆರೆ ಹಿಡಿಯಲಾಗುತ್ತದೆ. ಬಳಿಕ ಚಿತ್ರಗಳನ್ನು ಸಂಸ್ಕರಿಸಿ ಗುರುತಿಸಲಾದ ಆಸ್ತಿಗಳ ನಕಾಶೆ ತಯಾರಿಸಲಾಗುತ್ತದೆ. ಗ್ರಾ.ಪಂ.ಗಳಲ್ಲಿ ನಮೂದಾಗಿರುವ ದಾಖಲಾತಿಗಳ ಜತೆ ಹೊಂದಾಣಿಕೆ ಮಾಡಿ ಪರಿಶೀಲಿಸಲಾಗುತ್ತದೆ. ಬಳಿಕ ಗ್ರಾಮಸ್ಥರ ಜತೆ ಸಭೆ ನಡೆಸಿ ತಕರಾರುಗಳಿದ್ದರೆ ಇತ್ಯರ್ಥ ಪಡಿಸಲಾಗುತ್ತದೆ. ಎಲ್ಲವೂ ಸರಿಯಾದ ಬಳಿಕ ಸರಕಾರದ ದಾಖಲಾತಿಗೆ ರವಾನಿಸಲಾಗುತ್ತದೆ. ಆಗ ಹೆಸರು, ಇನ್ನಿತರ ತಿದ್ದುಪಡಿಗೂ ಅವಕಾಶವಿರುತ್ತದೆ. ಅಂತಿಮವಾಗಿ ಪ್ರಾಪರ್ಟಿ ಕಾರ್ಡ್‌ ನೀಡಲಾಗುತ್ತದೆ.

ಸರ್ವೆ ನಡೆಯುವ ಗ್ರಾಮಗಳು
ಮಂಗಳೂರು ತಾಲೂಕಿನ 10 ಗ್ರಾ.ಪಂ.ಗಳ ಕರ್ನಿರೆ, ಬಳುಜೆ, ಕೊಲ್ಲೂರು, ಕವತ್ತಾರು, ಅತ್ತೂರು, ಕೈಕುಡೆ, ಕೆಮ್ರಾಲ್‌, ಪಂಜ, ಹಳೆಯಂಗಡಿ, ಪಾವಂಜೆ, ಸಸಿಹಿತ್ಲು, ಬೆಳ್ಳಾಯರು, 10ನೇ ತೋಕೂರು, ಪಡುಪಣಂಬೂರು, ಕಿಲ್ಪಾಡಿ, ಅತಿಕಾರಿಬೆಟ್ಟು, ಶಿಮಂತೂರು, ಐಕಳ, ಏಳಿಂಜೆ, ಉಳಿಪಾಡಿ, ಮಲ್ಲೂರು, ಉಳಾಯಿಬೆಟ್ಟು, ಮುಚ್ಚಾರು, ಕೊಂಪದವು ಸೇರಿ 24 ಗ್ರಾಮಗಳು, ಬಂಟ್ವಾಳ ತಾಲೂಕಿನ ಬರಿಮಾರು, ಸಜೀಪ ನಡು, ಬಾಳ್ತಿಲ, ಕುರ್ನಾಡು ಪೆರಾಜೆ, ಕೇಪು, ಪಿಲಾತಬೆಟ್ಟು, ಕಾವಳಮೂಡರು ಗ್ರಾ.ಪಂ.ಗಳಲ್ಲಿ, ಬೆಳ್ತಂಗಡಿಯ 8 ಗ್ರಾ.ಪಂ.ಗಳ ಸೋಣಂದೂರು, ಮಾಲಾಡಿ, ಮುಂಡಾಜೆ, ಗರ್ಡಾಡಿ, ಪಡಂಗಡಿ, ಕುಕ್ಕೇಡಿ, ನಿಟ್ಟಡೆ, ಕಾಶಿಪಟ್ಣ, ಕುಕ್ಕಳ, ಪಾರಂಕಿ, ಬೆಳಾಲು, ಉರುವಾಲು, ಪುತ್ತೂರಿನ ಬಲಾ°ಡು, ಕೆದಂಬಾಡಿ, ನಿಡ³ಳ್ಳಿ, ಪಾಣಾಜೆ, ಬಜತ್ತೂರು, ಕುಡು³ಪಾಡಿ, 34ನೇ ನೆಕ್ಕಿಲಾಡಿ, ಹಿರೇ ಬಂಡಾಡಿ, ಸುಳ್ಯದ ಕನಕಮಜಲು, ಬಾಳಿಲ, ಮುಪ್ಪೇರಿಯಾ,ಕಳಂಜ, ಉಬರಡ್ಕ ಮಿತ್ತೂರು, ಅರಂತೋಡು, ತೋಡಿಕಾನ, ಐರ್ವನಾಡು, ಪೆರುವಾಜೆ, ಕಲ್ಮಡ್ಕ,ಪಂಬೆತ್ತಾಡಿ, ಮೂಡುಬಿದಿರೆಯ ಶಿರ್ತಾಡಿ, ಪಡುಕೋಣಾಜೆ, ಮೂಡುಕೋಣಾಜೆ, ಮೂಡು ಮಾರ್ನಾಡು, ಪಡು ಮಾರ್ನಾಡು, ದರೆಗುಡ್ಡೆ, ಪಣಪಿಲ, ಕೆಲ್ಲಪುತ್ತಿಗೆ, ವಾಲ್ಪಾಡಿ, ಪಾಲಡ್ಕ, ಕಡಂದಲೆ, ತೆಂಕಮಿಜಾರು, ಬಡಗಮಿಜಾರು, ಇರುವೈಲು, ತೋಡಾರು, ಹೊಸಬೆಟ್ಟು, ಪುಚ್ಚಮೊಗರು, ಕಡಬ ತಾಲೂಕಿನ ಕೊçಲ, ಐತೂರು, ನೆಕ್ಕಿಲಾಡಿ, ಬಂಟ್ರ, ಬಿಳಿನೆಲೆ, ಕೌಕ್ರಾಡಿ, ಇಚ್ಲಂಪಾಡಿ, ನೆಲ್ಯಾಡಿ, ಶಿರಾಡಿ, ಕೊಣಾಜೆ ಗ್ರಾಮಗಳಲ್ಲಿ ಡ್ರೋಣ್‌ ಬಳಸಿ ಅಳತೆ ಕಾರ್ಯಕ್ಕೆ ಜಿಲ್ಲಾ ಭೂದಾಖಲೆಗಳ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಮಾರ್ಗಸೂಚಿ ಅಗತ್ಯ
ರಾಜ್ಯದಲ್ಲಿ ಈ ಹಿಂದೆ ಮದ್ರಾಸ್‌ ಪ್ರಾಂತಕ್ಕೆ ಒಳಪಟ್ಟಿದ್ದ ಕರಾವಳಿ ಜಿಲ್ಲೆಗಳಲ್ಲಿ ಭೂದಾಖಲೆಗಳು ಸರ್ವೆ ನಂಬರ್‌ ಸ್ವರೂಪದಲ್ಲಿದೆ. ಉಳಿದ ಜಿಲ್ಲೆಗಳಲ್ಲಿ ಗ್ರಾಮಠಾಣಾ ಸ್ವರೂಪ ದಲ್ಲಿದೆ. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆಯಡಿ ಭೂದಾಖಲೆಗಳು° ಯಾವ ರೀತಿ ಸಿದ್ಧ ಪಡಿಸಬಹುದು ಎಂಬ ಬಗ್ಗೆ ಸರಕಾರದಿಂದ ಮಾರ್ಗಸೂಚಿ ಬರಬೇಕಾಗಿದೆ.

ಯೋಜನೆಯಿಂದ ಆಸ್ತಿ ಸ್ವಾಮಿತ್ವದ ಬಗ್ಗೆ ಇರುವ ಸಮಸ್ಯೆಗಳು ಬಗೆಹರಿಯಲಿವೆ. ಆಸ್ತಿದಾರರು ಸರಿಯಾದ ನಕ್ಷೆಯೊಂದಿಗೆ ಶಾಸನಬದ್ಧ ಆಸ್ತಿ ದಾಖಲೆಗಳನ್ನು ಪಡೆದುಕೊಳ್ಳಬಹುದು. ಹಕ್ಕು ದಾಖಲೆ ಸಿದ್ಧಪಡಿಸುವಿಕೆ, ಸುಗಮವಾದ ಆಸ್ತಿ ವರ್ಗಾವಣೆಗೆ ಅವಕಾಶ ಕಲ್ಪಿಸುತ್ತದೆ. ಸರ್ವೆ ಹೆಚ್ಚು ನಿಖರವಾಗಿರುತ್ತದೆ. ಆಸ್ತಿ ತೆರಿಗೆಯನ್ನು ಕರಾರುವಕ್ಕಾಗಿ ನಿರ್ಧರಿಸಲು ಸಹಾಯವಾಗುತ್ತದೆ. ನಿಖರ ದಾಖಲೆಗಳು ಲಭ್ಯವಾಗುತ್ತದೆ ಎಂಬುದಾಗಿ ಇಲಾಖೆ ಹೇಳಿದೆ.

ಮಾರ್ಕಿಂಗ್‌ ಕಾರ್ಯ ಆರಂಭ
ದ.ಕ. ಜಿಲ್ಲೆಯಲ್ಲಿ ಡ್ರೋಣ್‌ ಬಳಸಿ ಆಸ್ತಿಗಳ ಅಳತೆನಡೆಸಿ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವ ಯೋಜನೆ ಕಾರ್ಯಾರಂಭ ಮಾಡಿದ್ದು ಬಳುಜೆ, ಕಿಲ್ಪಾಡಿ ಗ್ರಾಮಗಳಲ್ಲಿ ಈಗಾಗಲೇ ಮಾರ್ಕಿಂಗ್‌ ಕಾರ್ಯ ಆರಂಭಗೊಂಡಿದೆ. ಯೋಜನೆಗೆ ಆಯ್ಕೆಯಾದ ಗ್ರಾಮಗಳ ನಾಗರಿಕರು ಅಳತೆ ಸಮಯದಲ್ಲಿ ಅಗತ್ಯ ಸಹಕಾರ ನೀಡಿ ಯೋಜನೆಯನ್ನು ಯಶಸ್ವಿಗೊಳಿಸಬೇಕು.
-ಪ್ರಸಾದಿನಿ, ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕರು

ಕೇಶವ ಕುಂದರ್‌

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.