“ರೈತ ಸ್ಪಂದನೆಗಿಂತ ಕುರ್ಚಿಯೇ ಸಿಎಂಗೆ ಮುಖ್ಯ’
Team Udayavani, Nov 23, 2018, 10:00 AM IST
ಮಂಗಳೂರು: ಕುಮಾರಸ್ವಾಮಿ ಅವರಿಗೆ ಕುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ. ಹೀಗಾಗಿ ಕಬ್ಬು ಬೆಳೆಗಾರರ ಸಹಿತ ರೈತರ ಸಮಸ್ಯೆಗಳ ಬಗ್ಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದ ಕುರ್ಚಿ ಅಲುಗಾಡುತ್ತಿರುವಾಗ ಅದನ್ನು ಭದ್ರಪಡಿಸುವುದೇ ಅವರಿಗೆ ಮುಖ್ಯವಾಗಿದೆ. ರೈತ ಹಿತಾಸಕ್ತಿ, ಜನರ ಅಭಿವೃದ್ಧಿ, ಆರ್ಥಿಕ ಸ್ಥಿತಿಗತಿ ಬಗ್ಗೆ ಚಿಂತನೆ ಸಿಎಂಗೆ ಬೇಕಾಗಿಲ್ಲ ಎಂದು ಆರೋಪಿಸಿದರು.
ಕೇಂದ್ರ ಸರಕಾರ ಈ ಹಿಂದೆಯೇ ಸಕ್ಕರೆ ಕಾರ್ಖಾನೆ ಮಾಲಕರಿಗೆ ಹಣ ಬಿಡುಗಡೆ ಮಾಡುವ ಯೋಜನೆ ರೂಪಿಸಿತ್ತು. ಅದನ್ನು ಬಡ್ಡಿರಹಿತವಾಗಿ ಕಬ್ಬು ಬೆಳೆಗಾರರಿಗೆ ಕೊಡುವ ಯೋಜನೆಯಿತ್ತು. ಆದರೆ ಈ ವಿಚಾರದಲ್ಲಿ ಮುತುವರ್ಜಿ ವಹಿಸಬೇಕಿದ್ದ ರಾಜ್ಯ ಸರಕಾರ ಮಾತ್ರ ಮೌನ ವಹಿಸಿದೆ. ಈಗ ಕೇಂದ್ರ ಸರಕಾರ 13 ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕಿಂತ ಹೆಚ್ಚು ಬೆಲೆ ನಿಗದಿ ಮಾಡಿದೆ. ಅದಕ್ಕೆ ಅಗತ್ಯ ಇರುವ ಹಣ ಕೂಡ ಮೀಸಲಿಡಲಾಗಿದೆ. ಈ ಸಂಬಂಧ ಎಲ್ಲ ರಾಜ್ಯಗಳು ಖರೀದಿ ಕೇಂದ್ರ ತೆರೆದಿವೆ. ಆದರೆ ಕರ್ನಾಟಕ ಮಾತ್ರ ಈ ಬಗ್ಗೆ ಗಮನವೇ ಹರಿಸಿಲ್ಲ ಎಂದವರು ದೂರಿದರು.
ಕಾರ್ಖಾನೆ ಮಾಲಕರಾಗಿರುವ ಸಚಿವರು ಮುಖ್ಯಮಂತ್ರಿ ಕರೆದ ಸಭೆಗೆ ಬರಲಿಲ್ಲ. ಅಂತಹ ಸಚಿವರನ್ನು ಮಂತ್ರಿಮಂಡಲದಿಂದ ವಜಾ ಮಾಡಬೇಕು. ಪಕ್ಷದಿಂದ ಅವರನ್ನು ಉಚ್ಚಾಟಿಸಬೇಕು. ಇಲ್ಲವಾದರೆ ಅವರ ಮನವೊಲಿಸಿ ಕಬ್ಬು ಬೆಳೆಗಾರ ರಿಗೆ ಬಾಕಿ ಹಣ ಕೊಡಿಸಬೇಕು. ಆದರೆ ಸರಕಾರ ಮಾತ್ರ ಏನನ್ನೂ ಮಾಡದೆ ದಯನೀಯ ಸ್ಥಿತಿಯಲ್ಲಿದೆ ಎಂದರು.
ಕೇರಳದ ಮುಖ್ಯಮಂತ್ರಿ ಶಬರಿಮಲೆ ವಿಷಯದಲ್ಲಿ ತೆಗೆದುಕೊಂಡಿರುವ ನಿಲುವಿಗೆ ಅವರ ಪಕ್ಷದವರೇ ವಿರೋಧ ವ್ಯಕ್ತಪಡಿಸಿ¨ರೆ. ಅಲ್ಲಿ ಸ್ವತ್ಛತೆ ಮತ್ತು ಸೌಕರ್ಯಕ್ಕೆ ಆದ್ಯತೆ ಕೊಡುವುದು ಕೇರಳ ಸರಕಾರದ ಕರ್ತವ್ಯವಾಗಿದೆ. ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಯಾವುದೇ ಪಕ್ಷಕ್ಕೆ ಬಹುಮತವಿರಲಿಲ್ಲ. ಹಾಗಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.