ಸರಳವಾಗಿ ಬಕ್ರೀದ್‌ ಆಚರಣೆ; ನೆರೆ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ

Team Udayavani, Aug 13, 2019, 5:00 AM IST

r-32

ಮಹಾನಗರ: ಮುಸ್ಲಿಮರು ಬಕ್ರೀದ್‌ ಹಬ್ಬವನ್ನು ಸೋಮವಾರ ಅತ್ಯಂತ ಸರಳ ರೀತಿಯಲ್ಲಿ ಆಚರಿಸಿದರು. ಭಾರೀ ಮಳೆ ಮತ್ತು ಪ್ರವಾಹ ಬಂದು ನೂರಾರು ಮಂದಿ ಸಂತ್ರಸ್ತರಾದ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ನೆರೆ ಸಂತ್ರಸ್ತರಿಗಾಗಿ ಪ್ರಾರ್ಥನೆ ಮತ್ತು ದೇಣಿಗೆ ಸಂಗ್ರಹ ನಡೆಯಿತು.

ನಗರದ ಬಾವುಟಗುಡ್ಡೆಯ ಈದ್ಗಾ ಸಹಿತ ನಗರ ಮತ್ತು ನಗರದ ಹೊರ ವಲಯದ ಎಲ್ಲ ಪ್ರಮುಖ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ನಮಾಝ್, ಧರ್ಮ ಗುರುಗಳಿಂದ ಈದ್‌ ಸಂದೇಶ ಸಹಿತ ಪ್ರವಚನ, ಪರಸ್ಪರ ಈದ್‌ ಶುಭಾಶಯ ವಿನಿಮಯ ನಡೆಯಿತು.

ಖುತ್ಬಾ ಪ್ರವಚನ
ಬಾವುಟಗುಡ್ಡೆಯ ಈದ್ಗಾದಲ್ಲಿ ಬೆಳಗ್ಗೆ 8 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ಹಬ್ಬದ ವಿಶೇಷ ಪ್ರಾರ್ಥನೆ ಹಾಗೂ ಖುತ್ಬಾ ಪ್ರವಚನ ನೀಡಿದರು. ನೆರೆ ಹಾವಳಿಯ ಹಿನ್ನೆಲೆಯಲ್ಲಿ ಸರಳವಾಗಿ ಹಬ್ಬ ಆಚರಿಸುವಂತೆ ಅವರು ತಮ್ಮ ಪ್ರವಚನದಲ್ಲಿ ಸಲಹೆ ನೀಡಿದರು.ನಮಾಜ್‌ ಬಳಿಕ ಮುಸ್ಲಿಮರು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಶಾಸಕ, ಮಾಜಿ ಸಚಿವ ಯು.ಟಿ. ಖಾದರ್‌ ಸಹಿತ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.

ವಿವಿಧೆಡೆ ಆಚರಣೆ
ಕುದ್ರೊಳಿ ಜಾಮಿಯಾ ಮಸೀದಿಯಲ್ಲಿ ಧರ್ಮ ಗುರು ಮುಫ್ತಿ ಮನ್ನಾನ್‌ ಸಾಹೇಬ್‌ ಅವರ ನೇತೃತ್ವದಲ್ಲಿ ನಮಾಝ್, ಪ್ರವಚನ ನಡೆಯಿತು. ನಗರದ ವಾಸ್‌ಲೇನ್‌ನ ಮಸ್ಜಿದುಲ್‌ ಎಹ್ಸಾನ್‌, ಪಂಪ್‌ವೆಲ್‌ನ ತಖ್ವಾ ಮಸೀದಿ, ಹಂಪನಕಟ್ಟೆಯ ಮಸ್ಜಿದ್‌ ನೂರ್‌, ಸಿಟಿ ಬಸ್‌ ನಿಲ್ದಾಣ ಸಮೀಪದ ಇಬ್ರಾಹಿಂ ಖಲೀಲ್‌, ಬಂದರ್‌ನ ಕಚ್ಚಿ ಮಸೀದಿ, ಬಜಾಲ್‌ ನಂತೂರು ಬದ್ರಿಯಾ ಜುಮಾ ಮಸೀದಿ ಸಹಿತ ವಿವಿಧೆಡೆ ನಮಾಝ್ ನಡೆಯಿತು.

ಪ್ರವಾಹ ಬಂದು ಸಾವಿರಾರು ಮಂದಿ ಸಂಕಷ್ಟದಲ್ಲಿದ್ದಾರೆ. ಇನ್ನು ಮುಂದೆ ಇಂತಹ ಅನಾಹುತಗಳು ನಡೆಯದಿರಲಿ. ಎಲ್ಲರಿಗೂ ಸುಖ ಶಾಂತಿ ಲಭಿಸಲಿ ಎಂಬುದಾಗಿ ಪ್ರಾರ್ಥಿಸಲಾಯಿತು.

ದೇಣಿಗೆ ಸಂಗ್ರಹ
ನಮಾಝ್ ಬಳಿಕ ಕೆಲವು ಮಸೀದಿಗಳ ಆವರಣದಲ್ಲಿ ಕೆಲವು ಮುಸ್ಲಿಂ ಸಂಘ – ಸಂಸ್ಥೆಗಳು ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದವು.

ಮಂಗಳೂರು ಪೊಲೀಸ್‌ ಆಯುಕ್ತರಿಂದ ಹಬ್ಬದ ಶುಭಾಶಯ
ಮಂಗಳೂರಿನ ಪೊಲೀಸ್‌ ಆಯುಕ್ತರಾದ ಡಾ| ಪಿ.ಎಸ್‌. ಹರ್ಷ ಅವರು ಸೋಮವಾರ ಬೆಳಗ್ಗೆ ಬಾವುಟಗುಡ್ಡೆಯ ಈದ್ಗಾದಲ್ಲಿ ಬಕ್ರೀದ್‌ ಹಬ್ಬದ ಪ್ರಾರ್ಥನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಮುಸ್ಲಿಮರಿಗೆ ಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು. ಹಬ್ಬಗಳು ಸೋದರತೆ ಮತ್ತು ಶಾಂತಿ- ಸಾಮರಸ್ಯವನ್ನು ಸಾರುತ್ತವೆ ಎಂದು ಹೇಳಿದ ಅವರು ಮಂಗಳೂರಿನ ಎಲ್ಲ ಜನರಿಗೆ ಹಬ್ಬಗಳ ಸೀಸನ್‌ನ ಶುಭಾಶಯಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ವರಮಹಾಲಕ್ಷ್ಮೀ, ಬಕ್ರೀದ್‌ ಮತ್ತು ಮುಂದೆ ನಮ್ಮ ಅತ್ಯಂತ ದೊಡ್ಡ ಹಬ್ಬ ಸ್ವಾತಂತ್ರ್ಯೋತ್ಸವವು ಬರುತ್ತಿದೆ. ಎಲ್ಲರಿಗೂ ಹಬ್ಬಗಳ ಶುಭಾಶಯಗಳು ಎಂದರು.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.