ಸುರತ್ಕಲ್ ಎನ್‌ಐಟಿಕೆಯಲ್ಲಿ ಮತ ಎಣಿಕೆ: ರಾ. ಹೆದ್ದಾರಿ 66ರಲ್ಲಿ ಸಂಚಾರ ವ್ಯತ್ಯಯ ಸಾಧ್ಯತೆ
Team Udayavani, May 13, 2023, 6:50 AM IST
ಮಂಗಳೂರು: ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ಮತ ಎಣಿಕೆ ನಡೆಯಲಿರುವುದರಿಂದ ಮೇ 13ರಂದು ಬೆಳಗ್ಗೆ 6ರಿಂದ ಮತ ಎಣಿಕೆ ಕಾರ್ಯ ಮುಗಿಯುವವರೆಗೆ ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆ ಬಳಿ ವಾಹನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಹಾಗಾಗಿ ಈ ರಸ್ತೆಯಲ್ಲಿ ಉಡುಪಿ ಮತ್ತು ಮಂಗಳೂರು ಕಡೆಗೆ ಸಂಚರಿಸುವ ಸಾರ್ವಜನಿಕರು ಬದಲಿ ರಸ್ತೆಯನ್ನು ಬಳಸುವಂತೆೆ ಮಂಗಳೂರು ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.
ವಾಹನ ನಿಲುಗಡೆ ನಿಷೇಧ: ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ ಎನ್‌ಐಟಿಕೆ ಬಳಿಯ ಸುಪ್ರೀಂ ಮಹಲ್ ಸಮುದಾಯ ಭವನ ದಿಂದ ಟೋಲ್‌ಗೇಟ್‌ವರೆಗೆ ರಾಷ್ಟ್ರೀಯ ಹೆದ್ದಾರಿ ಮತ್ತು ಹೆದ್ದಾರಿಗೆ ತಾಗಿಕೊಂಡಿ ರುವ ಸರ್ವೀಸ್ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲ್ಲಿಸುವವಂತಿಲ್ಲ.
ವಾಹನ ನಿಲುಗಡೆ ಸ್ಥಳ: ಮಂಗಳೂರು ಕಡೆಯಿಂದ ಮತ ಎಣಿಕೆ ಕೇಂದ್ರಕ್ಕೆ ಬರುವ ಸಾರ್ವಜನಿಕರು ಎನ್‌ಐಟಿಕೆ ಜಂಕ್ಷನ್ ಬಳಿ ಎಡಕ್ಕೆ ತಿರುಗಿ ಎನ್‌ಐಟಿಕೆ ಕ್ಯಾಂಪಸ್‌ನ ಅಂಡರ್‌ಪಾಸ್ ಮುಖಾಂತರ ಸಾಗಿ ನಾಲ್ಕು ಚಕ್ರ ವಾಹನಗಳನ್ನು ಎನ್‌ಐಟಿಕೆ ವಸತಿಗೃಹದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಬೇಕು. ದ್ವಿಚಕ್ರ ವಾಹನಗಳನ್ನು ಎನ್‌ಐಟಿಕೆ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮೈದಾನದಲ್ಲಿ ನಿಲುಗಡೆ ಮಾಡಬೇಕು ಅಥವಾ ಸುರತ್ಕಲ್ ಸುಪ್ರೀಂ ಮಹಲ್ ಸಮುದಾಯ ಭವನ ಬಳಿ ರಾಷ್ಟ್ರೀಯ ಹೆದ್ದಾರಿಯಿಂದ ಎಡಬದಿಯ ತಡಂಬೈಲ್ ಸದಾಶಿವ ಮಹಾಗಣಪತಿ ದೇವಸ್ಥಾನ ರಸ್ತೆಯಲ್ಲಿ ಸಾಗಿ ನಿಗದಿಪಡಿಸಲಾದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಬೇಕು.
ಮೂಲ್ಕಿ ಕಡೆಯಿಂದ ಬರುವ ಸಾರ್ವಜನಿಕರು ಎನ್‌ಐಟಿಕೆ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಎನ್‌ಐಟಿಕೆ ಕ್ಯಾಂಪಸ್‌ನ ಅಂಡರ್‌ಪಾಸ್ ಮುಖಾಂತರ ಸಾಗಿ ನಾಲ್ಕು ಚಕ್ರ ವಾಹನಗಳನ್ನು ಎನ್‌ಐಟಿಕೆ ವಸತಿಗೃಹದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಬೇಕು. ದ್ವಿಚಕ್ರ ವಾಹನಗಳನ್ನು ಎನ್‌ಐಟಿಕೆ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮೈದಾನದಲ್ಲಿ ನಿಲುಗಡೆ ಮಾಡಬೇಕು ಅಥವಾ ರಾಷ್ಟ್ರೀಯ ಹೆದ್ದಾರಿ ಸುಪ್ರೀಂ ಮಹಲ್ ಸಮುದಾಯ ಭವನ ಬಳಿ ಯು-ಟರ್ನ್ ಮಾಡಿ ಎಡಬದಿಯ ತಡಂಬೈಲ್ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಸಾಗಿ ನಿಗದಿಪಡಿಸಲಾದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.