Electric Bus: ಧರ್ಮಸ್ಥಳ, ಸುಬ್ರಹ್ಮಣ್ಯ, ಮಣಿಪಾಲಕ್ಕೆ ಎಲೆಕ್ಟ್ರಿಕ್ ಬಸ್
ಕರಾವಳಿಗೆ ಬರಲಿವೆ 90 ಎಲೆಕ್ಟ್ರಿಕ್ ಬಸ್‌ಗಳು
Team Udayavani, Apr 10, 2023, 7:25 AM IST
ಮಂಗಳೂರು: ಕರಾವಳಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಕೆಎಸ್ಸಾರ್ಟಿಸಿ ನಿರ್ಧರಿಸಿದ್ದು, 6 ತಿಂಗಳೊಳಗೆ ಸುಮಾರು 90 ಎಸಿ ಮತ್ತು ನಾನ್ ಎಸಿ ಎಲೆಕ್ಟ್ರಿಕ್ ಬಸ್‌ಗಳು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಸ್ತೆಗಿಳಿಯಲಿವೆ.
ಎರಡೂ ಡಿಪೋಗಳಿಂದ ಬಸ್‌ಗಳಿಗೆ ಬೇಡಿಕೆ ಇದ್ದರೂ ನಿಗಮದಲ್ಲಿ ಬಸ್‌ಗಳ ಕೊರತೆ ಇದೆ. ಎಲೆಕ್ಟ್ರಿಕ್ ಬಸ್‌ಗಳು ಈ ಸಮಸ್ಯೆಯನ್ನು ಕೊಂಚ ಮಟ್ಟಿಗೆ ನಿವಾರಿಸುವ ನಿರೀಕ್ಷೆ ಇದೆ. ಈಗಾಗಲೇ ಕೆಲವು ಎಲೆಕ್ಟ್ರಿಕ್ ಬಸ್‌ಗಳು ಕೆಎಸ್ಸಾರ್ಟಿಸಿಗೆ ಬಂದಿದ್ದರೂ ಮಂಗಳೂರು ಮತ್ತು ಪುತ್ತೂರು ವಿಭಾಗಕ್ಕೆ ಬಂದಿಲ್ಲ. ಎರಡನೇ ಹಂತದಲ್ಲಿ ಇಲ್ಲಿಗೂ ಒದಗಿಸಲು ನಿರ್ಧರಿಸಲಾಗಿದೆ.
ಬಸ್ಸಿಗೆ ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 250 ಕಿ.ಮೀ. ಸಂಚರಿಸುತ್ತದೆ. ಮಂಗಳೂರಿನ ಕುಂಟಿಕಾನದಲ್ಲಿರುವ ಮೂರನೇ ಡಿಪೋದಲ್ಲಿ ಮತ್ತು ಧರ್ಮಸ್ಥಳ ಡಿಪೋದಲ್ಲಿ ಚಾರ್ಜಿಂಗ್ ಸ್ಟೇಷನ್ ನಿರ್ಮಾಣವಾಗಲಿದೆ.
ಪ್ರಸ್ತಾವಿತ ಮಾರ್ಗ
ಎಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗಿಳಿಸುವುದಾದರೆ ಯಾವ್ಯಾವ ರೂಟ್‌ಗಳಿವೆ ಎಂದು ಮಾಹಿತಿ ಒದಗಿಸುವಂತೆ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯು ಮಂಗಳೂರು ಮತ್ತು ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗಕ್ಕೆ ತಿಳಿಸಿದೆ. ಸ್ಟೇಟ್‌ಬ್ಯಾಂಕ್‌ನಿಂದ ಉಡುಪಿ, ಮಣಿಪಾಲಕ್ಕೆ 20 ಬಸ್, ಮಂಗಳೂರಿನಿಂದ ಧರ್ಮಸ್ಥಳಕ್ಕೆ 10, ಕಾಸರಗೋಡು ಅಥವಾ ಇತರ ರೂಟ್‌ಗಳಲ್ಲಿ 10 ಬಸ್‌ಗಳನ್ನು ಕಾರ್ಯಾಚರಿಸಲು ಚಿಂತಿಸಲಾಗಿದೆ. ಇನ್ನುಳಿದ ಬಸ್‌ಗಳನ್ನು ಪುತ್ತೂರು ವಿಭಾಗದಿಂದ ಧರ್ಮಸ್ಥಳ, ಮಂಗಳೂರು, ಸುಬ್ರಹ್ಮಣ್ಯ ಮಾರ್ಗಗಳಲ್ಲಿ ಓಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.
ಮಂಗಳೂರು ವಿಭಾಗಕ್ಕೆ ಮತ್ತಷ್ಟು ಹೊಸ ಬಸ್
ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಕ್ಕೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬಸ್‌ಗಳು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ. ಕೆಲವೇ ತಿಂಗಳಲ್ಲಿ ಹೊಸದಾಗಿ 550 ಕರ್ನಾಟಕ ಸಾರಿಗೆ ಬಸ್‌ಗಳು ಬರಲಿದ್ದು, ಮಂಗಳೂರು ವಿಭಾಗಕ್ಕೂ 30ರಿಂದ 40 ಹಂಚಿಕೆಯಾಗುವ ನಿರೀಕ್ಷೆ ಇದೆ. ಇದರಿಂದಾಗಿ ಸುಮಾರು 16 ಶೆಡ್ನೂಲ್‌ಗಳನ್ನು ಹೆಚ್ಚುವರಿ ಕಾರ್ಯಾಚರಿಸಲು ಸಾಧ್ಯ. ಈಗಾಗಲೇ ಕೆಲವೊಂದು ಬಸ್‌ಗಳು ಸಾð éಪ್ ಆಗಿದ್ದು, ಅವುಗಳಿಗೆ ಬದಲಾಗಿ ಈ ಬಸ್‌ಗಳನ್ನು ಬಳಸಿಕೊಳ್ಳುವ ಸಾಧ್ಯತೆಯೂ ಇದೆ. ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಲ್ಲಿ ಸದ್ಯ 565 ವಿವಿಧ ಮಾದರಿಯ ಬಸ್‌ಗಳಿವೆ. 505 ಶೆಡ್ನೂಲ್‌ಗಳಲ್ಲಿ ಸಂಚರಿಸುತ್ತಿದ್ದು, ಪ್ರತಿದಿನ ಸುಮಾರು 1.10 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ.
ಮಂಗಳೂರಿಗೆ ಶೀಘ್ರದಲ್ಲೇ ಎಲೆಕ್ಟ್ರಿಕ್ ಬಸ್‌ಗಳು ಆಗಮಿಸುವ ನಿರೀಕ್ಷೆ ಇದೆ. ಯಾವೆಲ್ಲ ಮಾರ್ಗಗಳಲ್ಲಿ ಎಲೆಕ್ಟ್ರಿಕ್ ಬಸ್ ಕಾರ್ಯಾಚರಿಸಬಹುದು ಎಂಬ ಸಾಧ್ಯತಾ ವರದಿಯನ್ನು ಕೇಂದ್ರ ಕಚೇರಿಗೆ ಕಳುಹಿಸಿದ್ದೇವೆ.
– ರಾಜೇಶ್ ಶೆಟ್ಟಿ , ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ
– ನವೀನ್ ಭಟ್, ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.